AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನಕ್ಕೆ ಇಂಗ್ಲೆಂಡ್ ಬೆಂಬಲ..!

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನಕ್ಕೆ ಇಂಗ್ಲೆಂಡ್ ಬೆಂಬಲ..!
PCB - ECB
Follow us
ಝಾಹಿರ್ ಯೂಸುಫ್
|

Updated on: Nov 17, 2024 | 1:38 PM

ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಬೆಂಬಲ ಸೂಚಿಸಿದೆ. ಪಾಕ್​ನಲ್ಲಿ ಚಾಂಪಿಯನ್ಸ್ ಟ್ರೋಫಿ ಆಡಲು ಬಿಸಿಸಿಐ ನಿರಾಕರಿಸಿದ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಲಂಡನ್​ನಲ್ಲಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ರಿಚರ್ಡ್ ಥಾಂಪ್ಸನ್ ಅವರನ್ನು ಭೇಟಿಯಾಗಿದ್ದಾರೆ.

ಈ ಭೇಟಿಯ ವೇಳೆ ನಖ್ವಿ ಪ್ರಸ್ತುತ ಸನ್ನಿವೇಶವನ್ನು ಇಸಿಬಿ ಮುಖ್ಯಸ್ಥರಿಗೆ ವಿವರಿಸಿದ್ದು, ಇದೇ ವೇಳೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಪಿಸಿಬಿ ಜೊತೆ ನಿಲ್ಲುವುದಾಗಿ ಭರವಸೆ ನೀಡಿದೆ ಎಂದು ವರದಿಯಾಗಿದೆ.

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಕ್ರಿಕೆಟ್ ಜಗತ್ತಿನಲ್ಲಿ ದೊಡ್ಡ ಸ್ಥಾನಮಾನವನ್ನು ಹೊಂದಿದೆ. ಆದ್ದರಿಂದ, ಬಿಸಿಸಿಐನೊಂದಿಗಿನ ವಿವಾದದ ನಂತರ, ಮೊಹ್ಸಿನ್ ನಖ್ವಿ ಅದರ ಬೆಂಬಲವನ್ನು ಪಡೆಯಲು ಲಂಡನ್ ತೆರಳಿದ್ದರು. ಅಲ್ಲದೆ ಅಧ್ಯಕ್ಷ ರಿಚರ್ಡ್ ಥಾಂಪ್ಸನ್ ಅವರನ್ನು ಭೇಟಿಯಾಗಿ ಅವರ ಬೆಂಬಲವನ್ನು ಕೋರಿದ್ದರು.

ಈ ಭೇಟಿಯ ವೇಳೆ ಉಭಯ ಸಂಸ್ಥೆಗಳ ಮುಖ್ಯಸ್ಥರು ಬಿಸಿಸಿಐ ಮುಂದಿಟ್ಟಿರುವ ಭದ್ರತಾ ಕಾಳಜಿ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಪಿಸಿಬಿಯ ನಿರ್ಧಾರಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದೆ ಎಂದು ವರದಿಯಾಗಿದೆ.

ಇತ್ತೀಚೆಗಷ್ಟೇ ಇಂಗ್ಲೆಂಡ್ ತಂಡ ಪಾಕಿಸ್ತಾನ್ ಪ್ರವಾಸ ಮಾಡಿದ್ದು, ಆ ಸರಣಿಯು ಅದ್ಭುತವಾಗಿತ್ತು. ಚಾಂಪಿಯನ್ಸ್ ಟ್ರೋಫಿಗಾಗಿ ನಮ್ಮ ಕಡೆಯಿಂದ ಶುಭ ಹಾರೈಕೆ ಎಂದು ರಿಚರ್ಡ್ ಥಾಂಪ್ಸನ್ ತಿಳಿಸಿದ್ದಾರೆ.

ಅಲ್ಲದೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಲು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಅಧ್ಯಕ್ಷರು ಹೇಳಿದ್ದಾರೆ. ಈ ಮೂಲಕ ಪಾಕ್​ನಲ್ಲೇ ಚಾಂಪಿಯನ್ಸ್ ಟ್ರೋಫಿ ಜರುಗಲಿ ಎಂಬ ಆಶಯವನ್ನು ಥಾಂಪ್ಸನ್ ಮುಂದಿಟ್ಟಿದ್ದಾರೆ.

ಇತ್ತ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಇಸಿಬಿ ಬೆಂಬಲ ನೀಡಿರುವ ಕಾರಣ ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಸಮಸ್ಯೆಯು ಮತ್ತಷ್ಟು ಜಟಿಲವಾಗುವ ಸಾಧ್ಯತೆಯಿದೆ. ಏಕೆಂದರೆ ಪಾಕ್​ನಲ್ಲಿ ಟೂರ್ನಿ ನಡೆದರೆ ಭಾರತ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮೊಹಮ್ಮದ್ ಶಮಿ ವಿರುದ್ಧ ಗಂಭೀರ ಆರೋಪ: ಟೀಮ್ ಇಂಡಿಯಾದಿಂದ ಬ್ಯಾನ್ ಭೀತಿ

ಅಲ್ಲದೆ ಟೀಮ್ ಇಂಡಿಯಾ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿದ್ದರೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಬೇಕೆಂದು ತಿಳಿಸಿದೆ. ಅದರಂತೆ ಭಾರತ ತಂಡವು ತನ್ನ ಪಂದ್ಯಗಳನ್ನು ಶ್ರೀಲಂಕಾ ಅಥವಾ ಯುಎಇ ನಲ್ಲಿ ಆಡುವ ಇಂಗಿತವನ್ನು ವ್ಯಕ್ತಪಡಿಸಿದೆ. ಆದರೆ ಅತ್ತ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಸಿದ್ಧವಿಲ್ಲ. ಅಲ್ಲದೆ ಇದೀಗ ಟೂರ್ನಿ ಆಯೋಜನೆಗೆ ಇತರೆ ಕ್ರಿಕೆಟ್ ಸಂಸ್ಥೆಗಳ ಬೆಂಬಲ ಪಡೆಯಲು ಮುಂದಾಗಿದೆ.

ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್