IND vs PAK: ಭಾರತ-ಪಾಕ್ ಟೆಸ್ಟ್​ಗೆ ಇಂಗ್ಲೆಂಡ್ ಆತಿಥ್ಯ: ಈ ಬಗ್ಗೆ ಬಿಸಿಸಿಐ ಹೇಳಿದ್ದೇನು?

India vs Pakistan: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮತ್ತೆ ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಉಭಯ ತಂಡಗಳು ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

IND vs PAK: ಭಾರತ-ಪಾಕ್ ಟೆಸ್ಟ್​ಗೆ ಇಂಗ್ಲೆಂಡ್ ಆತಿಥ್ಯ: ಈ ಬಗ್ಗೆ ಬಿಸಿಸಿಐ ಹೇಳಿದ್ದೇನು?
India vs Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 28, 2022 | 12:32 PM

ಭಾರತ ಹಾಗೂ ಪಾಕಿಸ್ತಾನ್ (India vs Pakistan) ನಡುವಣ ಟೆಸ್ಟ್​ ಸರಣಿಗೆ ಆತಿಥ್ಯವಹಿಸುವ ಪ್ರಸ್ತಾಪವನ್ನು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ (ECB)​ ಮುಂದಿಟ್ಟಿದೆ. ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿರುವ ಪರಿಣಾಮ ಭಾರತ-ಪಾಕ್ ದ್ವಿಪಕ್ಷೀಯ ಸರಣಿಗಳನ್ನು ಆಡುತ್ತಿಲ್ಲ. ಇದಾಗ್ಯೂ ಎರಡೂ ದೇಶಗಳು ಐಸಿಸಿ ಟೂರ್ನಿಗಳಲ್ಲಿ ಮುಖಾಮುಖಿಯಾಗುತ್ತಿದೆ. ಅದರಂತೆ ಏಕದಿನ ವಿಶ್ವಕಪ್ ಹಾಗೂ ಟಿ20 ವಿಶ್ವಕಪ್​ಗಳಲ್ಲಿ ಎರಡೂ ತಂಡಗಳು ಪರಸ್ಪರ ಸೆಣಸುತ್ತಿದೆ. ಆದರೆ ಉಭಯ ತಂಡಗಳ ಟೆಸ್ಟ್ ಸರಣಿ ಮಾತ್ರ ನಡೆಯುತ್ತಿಲ್ಲ. ಹೀಗಾಗಿ ಭಾರತ-ಪಾಕ್ ಸರಣಿಗೆ  ಆತಿಥ್ಯವಹಿಸಲು ಇಂಗ್ಲೆಂಡ್ ಸಿದ್ಧವಿದೆ ಎಂದು ಇಸಿಬಿ ತಿಳಿಸಿದೆ.

ಟೆಲಿಗ್ರಾಫ್ ವರದಿಯ ಪ್ರಕಾರ, ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಉಪಾಧ್ಯಕ್ಷ ಮಾರ್ಟಿನ್ ಡಾರ್ಲೋ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯೊಂದಿಗೆ (ಪಿಸಿಬಿ) ಮಾತುಕತೆ ನಡೆಸಿದ್ದಾರೆ. ಈ ವೇಳೆ ಭವಿಷ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ತಟಸ್ಥ ಸ್ಥಳವಾಗಿ ಇಂಗ್ಲೆಂಡ್‌ನಲ್ಲಿರುವ ಮೈದಾನವನ್ನು ಬಳಸುವಂತೆ ಅವರು ಪ್ರಸ್ತಾಪಿಸಿದ್ದಾರೆ. ಆದರೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ನ ಈ ಆಫರ್​ಗೆ ಬಿಸಿಸಿಐ ಸಮ್ಮತಿ ಸೂಚಿಸುವುದಿಲ್ಲ ಎಂಬುದು ಖಚಿತ.

ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಅಧಿಕಾರಿಯೊಬ್ಬರು, ಇಸಿಬಿ ಇಂಡೋ-ಪಾಕ್ ಸರಣಿಗೆ ಸಂಬಂಧಿಸಿದಂತೆ ಪಿಸಿಬಿಯೊಂದಿಗೆ ಮಾತನಾಡಿದೆ. ಇದು ಒಂಥಂರಾ ಸ್ವಲ್ಪ ವಿಚಿತ್ರ ಎನಿಸುತ್ತಿದೆ. ಉಭಯ ತಂಡಗಳ ನಡುವೆ ಸರಣಿ ಆಯೋಜಿಸಲು ಅವಕಾಶವಿದ್ದರೆ ನಾವೇ ಅದನ್ನು ಆಯೋಜಿಸುತ್ತಿದ್ದೆವು. ಏಕೆಂದರೆ ಪಾಕಿಸ್ತಾನ ವಿರುದ್ಧದ ಸರಣಿಯನ್ನು ಬಿಸಿಸಿಐ ನಿರ್ಧರಿಸುವುದಿಲ್ಲ. ಅದನ್ನು ಸರ್ಕಾರವೇ ನಿರ್ಧರಿಸುತ್ತದೆ. ಪ್ರಸ್ತುತ ಸನ್ನಿವೇಶದಲ್ಲಿ ಯಥಾಸ್ಥಿತಿ ಇನ್ನೂ ಹಾಗೇ ಇದೆ. ಹೀಗಾಗಿ ಬಹುರಾಷ್ಟ್ರೀಯ ಪಂದ್ಯಗಳಲ್ಲಿ ಮಾತ್ರ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಭಾರತ-ಪಾಕಿಸ್ತಾನ್ ನಡುವೆ ಕೊನೆಯ ಬಾರಿಗೆ 2013 ರಲ್ಲಿ ದ್ವಿಪಕ್ಷೀಯ ಸರಣಿಯನ್ನು ಆಯೋಜಿಸಲಾಗಿತ್ತು. ಭಾರತದಲ್ಲಿ ನಡೆದ ಈ ಸರಣಿಯಲ್ಲಿ ಮೂರು ಪಂದ್ಯಗಳ ಈ ಸರಣಿಯನ್ನು ಪಾಕ್ ತಂಡವು 2-1 ಅಂತರದಿಂದ ಗೆದ್ದುಕೊಂಡಿತ್ತು. ಇನ್ನು ಆ ಬಳಿಕ ನಡೆದ 2 ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು ಒಂದೊಂದು ಪಂದ್ಯ ಜಯಿಸಿ ಸರಣಿಯನ್ನು ಸಮಬಲಗೊಳಿಸಿತು. ಇದಾದ ಬಳಿಕ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮತ್ತೆ ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಉಭಯ ತಂಡಗಳು ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ