AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs LSG: ಯುವ ಬ್ಯಾಟರ್ ಮುಕುಲ್ ಚೌಧರಿ ಎದುರು ಸೋತ ಕೆಕೆಆರ್

IPL 2026, KKR vs LSG: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಪಿಎಲ್ 2026ರ 15ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಕೊನೆಯ ಎಸೆತದಲ್ಲಿ ಕೆಕೆಆರ್ ವಿರುದ್ಧ ರೋಚಕ ಗೆಲುವು ಸಾಧಿಸಿತು. ಈ ಸೋಲಿನೊಂದಿಗೆ ಕೆಕೆಆರ್‌ಗೆ ಸತತ 4ನೇ ಸೋಲು ಎದುರಾಗಿದೆ. ಯುವ ಆಟಗಾರ ಮುಕುಲ್ ಚೌಧರಿ ಅವರ ಸ್ಫೋಟಕ ಅರ್ಧಶತಕ ಲಕ್ನೋಗೆ ಜಯ ತಂದುಕೊಟ್ಟಿತು.

KKR vs LSG: ಯುವ ಬ್ಯಾಟರ್ ಮುಕುಲ್ ಚೌಧರಿ ಎದುರು ಸೋತ ಕೆಕೆಆರ್
Mukul Choudhary
ಪೃಥ್ವಿಶಂಕರ
|

Updated on:Apr 09, 2026 | 11:44 PM

Share

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 (IPL 2026) ರ 15ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಲಕ್ನೋ ಸೂಪರ್ ಜೈಂಟ್ಸ್ (KKR vs LSG) ತಂಡಗಳು ಮುಖಾಮುಖಿಯಾಗಿದ್ದವು. ಲೀಗ್​ನಲ್ಲಿ ಮೊದಲ ಗೆಲುವಿಗಾಗಿ ಹುಡುಕಾಟ ನಡೆಸುತ್ತಿರುವ ಕೆಕೆಆರ್ ತಂಡ ತವರಿನಲ್ಲಿ ನಡೆದ ಸತತ ಎರಡನೇ ಪಂದ್ಯದಲ್ಲೂ ಸೋಲು ಕಂಡಿತು. ಈ ಮೂಲಕ ಲೀಗ್​ನಲ್ಲಿ ಕೆಕೆಆರ್​ಗೆ ಸತತ 4ನೇ ಸೋಲು (3 ಸೋಲು, 1 ಪಂದ್ಯ ರದ್ದು) ಎದುರಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 181 ರನ್ ಗಳಿಸಿ ಗೆಲ್ಲಲು 182 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಲಕ್ನೋ 17ನೇ ಓವರ್ ಮುಕ್ತಾಯದವರೆಗೂ ಸೋಲಿನ ದವಡೆಗೆ ಸಿಲುಕಿತ್ತು. ಆದರೆ ಪಂದ್ಯದ ದಿಕ್ಕು ಬದಲಿಸಿದ ಲಕ್ನೋ ತಂಡದ ಯುವ ಬ್ಯಾಟರ್ ಮುಕುಲ್ ಚೌಧರಿ (Mukul Choudhary) ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಕೊನೆಯ ಎಸೆತದಲ್ಲಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

182 ರನ್ ಗುರಿ ನೀಡಿದ ಕೆಕೆಆರ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 181 ರನ್ ಗಳಿಸಿತು. ತಂಡಕ್ಕೆ ಮತ್ತೊಮ್ಮೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕ ಫಿನ್ ಅಲೆನ್ ಕೇವಲ 9 ರನ್‌ಗಳಿಸಿ ಔಟಾದರು. ನಂತರ ಅಜಿಂಕ್ಯ ರಹಾನೆ 24 ಎಸೆತಗಳಲ್ಲಿ 41 ರನ್ ಗಳಿಸಿ ಚುರುಕಾದ ಇನ್ನಿಂಗ್ಸ್ ಆಡಿದರು. ಅದ್ಭುತ ಫಾರ್ಮ್​ನಲ್ಲಿರುವ ಯುವ ಬ್ಯಾಟರ್ ಅಂಕುಶ್ ರಘುವಂಶಿ 33 ಎಸೆತಗಳಲ್ಲಿ 45 ರನ್ ಗಳಿಸಿದರು. ಕ್ಯಾಮರೂನ್ ಗ್ರೀನ್ 24 ಎಸೆತಗಳಲ್ಲಿ ಅಜೇಯ 32 ರನ್ ಬಾರಿಸಿದರೆ, ರೋವ್ಮನ್ ಪೊವೆಲ್ ಕೂಡ 24 ಎಸೆತಗಳಲ್ಲಿ ಅಜೇಯ 39 ರನ್ ಗಳಿಸಿ ತಂಡದ ಸ್ಕೋರ್ ಅನ್ನು 181ಕ್ಕೆ ಕೊಂಡೊಯ್ದರು.

ಮುಕುಲ್ ಆಟಕ್ಕೆ ಒಲಿದ ಜಯ

182 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಲಕ್ನೋ ತಂಡವು ಕಳಪೆ ಆರಂಭವನ್ನೇ ಪಡೆಯಿತು. ಐಡೆನ್ ಮಾರ್ಕ್ರಾಮ್ ಮತ್ತು ಮಿಚೆಲ್ ಮಾರ್ಷ್ ಬೇಗನೆ ಔಟಾದರು. ರಿಷಭ್ ಪಂತ್ ಮತ್ತು ನಿಕೋಲಸ್ ಪೂರನ್ ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹೀಗಾಗಿ ಲಕ್ನೋ ತಂಡದ ಸ್ಕೋರ್ 15.6 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 128 ರನ್​ ಗಳಿಸಿತ್ತು. ಹೀಗಾಗಿ ಪಂದ್ಯ ಕೆಕೆಆರ್ ಪರವಾದಂತೆ ತೋರುತ್ತಿತ್ತು. ಆದರೆ ಅಲ್ಲಿಂದ ಮುಕುಲ್ ಚೌಧರಿ ಅದ್ಭುತ ಬ್ಯಾಟಿಂಗ್ ಮಾಡಿದರು. ಮುಕುಲ್ ಚೌಧರಿ ಕೇವಲ 27 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಏಳು ಸಿಕ್ಸರ್‌ಗಳನ್ನು ಒಳಗೊಂಡಂತೆ ಅಜೇಯ 54 ರನ್ ಗಳಿಸಿದರು. ಈ ಒಂಬತ್ತು ಹೊಡೆತಗಳು ಕೆಕೆಆರ್‌ನ ಸೋಲಿಗೆ ಮುನ್ನುಡಿ ಬರೆದವು. ಆಯುಷ್ ಬದೋನಿ ಕೂಡ 34 ಎಸೆತಗಳಲ್ಲಿ 54 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

KKR vs LSG: ಅಂಪೈರ್​ಗಳ ಅಜಾಗರೂಕತೆ; ಕೆಕೆಆರ್​ಗೆ ಮಹಾಮೋಸ? ವಿಡಿಯೋ ನೋಡಿ

ಮುಕುಲ್ ಚೌಧರಿ ಯಾರು?

ರಾಜಸ್ಥಾನದ 21 ವರ್ಷದ ಯುವ ಆಟಗಾರ ಮುಕುಲ್ ಚೌಧರಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿಗೆ ಪ್ರವೇಶಿಸಿದ್ದರು. ಅಂತಿಮವಾಗಿ ಲಕ್ನೋ ಅವರನ್ನು 2.60 ಕೋಟಿಗೆ ಖರೀದಿಸಿತು. ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್‌ಮನ್ ಆಗಿರುವುದರ ಜೊತೆಗೆ, ಅವರು ವೇಗದ ಬೌಲರ್ ಕೂಡ. ದೊಡ್ಡ ಹೊಡೆತಗಳಿಗೆ ಹೆಸರುವಾಸಿಯಾಗಿರುವ ಮುಕುಲ್ ಇಂದಿನ ಪಂದ್ಯದಲ್ಲಿ ಅದನ್ನೇ ಪ್ರದರ್ಶಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 pm, Thu, 9 April 26

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​