IND vs ENG: ಆಂಗ್ಲರಿಂದ ಭಾರತೀಯ ಅಭಿಮಾನಿಗಳ ಮೇಲೆ ಜನಾಂಗೀಯ ನಿಂದನೆ..!

| Updated By: ಝಾಹಿರ್ ಯೂಸುಫ್

Updated on: Jul 05, 2022 | 2:59 PM

India vs England 5th Test: ಎಡ್ಜ್‌ಬಾಸ್ಟನ್​ನಲ್ಲಿ ನಡೆಯುತ್ತಿರುವ 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಗೆಲುವಿ ಸಮೀಪದಲ್ಲಿದೆ. 2ನೇ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ನೀಡಿದ 378 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿರುವ ಇಂಗ್ಲೆಂಡ್​ ತಂಡವು 3 ವಿಕೆಟ್ ನಷ್ಟಕ್ಕೆ 259 ರನ್​ಗಳಿಸಿದೆ.

IND vs ENG: ಆಂಗ್ಲರಿಂದ ಭಾರತೀಯ ಅಭಿಮಾನಿಗಳ ಮೇಲೆ ಜನಾಂಗೀಯ ನಿಂದನೆ..!
ಸಾಂದರ್ಭಿಕ ಚಿತ್ರ
Follow us on

ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದನೇ ಟೆಸ್ಟ್ ಪಂದ್ಯದ ನಡುವೆ ವರ್ಣಭೇದದ ಪ್ರಕರಣವೊಂದು ಬೆಳಕಿಗೆ ಬಂದಿದೆ. 5ನೇ ಟೆಸ್ಟ್‌ ಪಂದ್ಯದ ನಾಲ್ಕನೇ ದಿನದಂದು, ಎದುರಾಳಿ ತಂಡದ ಅಭಿಮಾನಿಗಳು ಭಾರತೀಯ ಅಭಿಮಾನಿಗಳ ಮೇಲೆ ಜನಾಂಗೀಯ ಟೀಕೆಗಳನ್ನು ಮಾಡಿದ್ದಾರೆ ಎಂದು ಭಾರತದ ಕೆಲ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಆರೋಪಿಸಿದ್ದಾರೆ. ಸ್ಟೇಡಿಯಂನಲ್ಲಿ ಭಾರತದ ಅಭಿಮಾನಿಗಳು ಜನಾಂಗೀಯ ನಿಂದನೆಯನ್ನು ಎದುರಿಸುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಒಬ್ಬರು ಪೋಸ್ಟ್ ಮಾಡಿದ್ದಾರೆ. ಅದೇ ಸಮಯದಲ್ಲಿ, ಇತರ ಬಳಕೆದಾರರು ಕೂಡ ಈ ಪಂದ್ಯದ ವೇಳೆ ಅಸಹ್ಯಕರ ವರ್ಣಭೇದವನ್ನು ಎದುರಿಸಬೇಕಾಯಿತು ಎಂದು ತಿಳಿಸಿದ್ದಾರೆ. ಇದೀಗ ಈ ವಿಚಾರವನ್ನು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಗಂಭೀರವಾಗಿ ಪರಿಗಣಿಸಿ, ತನಿಖೆಯ ಭರವಸೆ ನೀಡಿದೆ.

ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಟೆಸ್ಟ್‌ನ ನಾಲ್ಕನೇ ದಿನದಂದು ಈ ವಿಷಯ ಬೆಳಕಿಗೆ ಬಂದ ಬಳಿಕ ಎಡ್ಜ್‌ಬಾಸ್ಟನ್ ಅಧಿಕಾರಿಗಳು ಕ್ಷಮೆಯಾಚಿಸಿದ್ದಾರೆ . ಅಲ್ಲದೆ ಸಾಧ್ಯವಾದಷ್ಟು ಬೇಗ ಈ ವಿಷಯವನ್ನು ಕೂಲಂಕುಷವಾಗಿ ತನಿಖೆ ನಡೆಸುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ವಿಚಾರವನ್ನು ಓದಿದ ನಮಗೆ ತುಂಬಾ ವಿಷಾದವಿದೆ. ಇಂತಹ ವರ್ತನೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಎಡ್ಜ್​ಬಾಸ್ಟನ್ ಸ್ಟೇಡಿಯಂ ಅಧಿಕಾರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಅಷ್ಟೇ ಅಲ್ಲ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಕೂಡ ಈ ವಿಚಾರದಲ್ಲಿ ಮೌನ ಮುರಿದಿದ್ದು, ‘ ಪಂದ್ಯದ ನಡುವೆ ಅಭಿಮಾನಿಗಳು ಜನಾಂಗೀಯ ನಿಂದನೆಗೆ ಗುರಿಯಾಗಿರುವ ವರದಿಗಳನ್ನು ಕೇಳಿ ನಾವು ಕಳವಳಗೊಂಡಿದ್ದೇವೆ. ಈ ಬಗ್ಗೆ ನಾವು ಎಡ್ಜ್‌ಬಾಸ್ಟನ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರು ಈ ಗಂಭೀರ ಪ್ರಕರಣವನ್ನು ತನಿಖೆ ಮಾಡಲಿದ್ದಾರೆ. ಕ್ರಿಕೆಟ್‌ನಲ್ಲಿ ವರ್ಣಭೇದಕ್ಕೆ ಯಾವುದೇ ಅವಕಾಶವಿಲ್ಲ. ಹೀಗಾಗಿ ಇಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ನೀಡಿದೆ.

ಇದನ್ನೂ ಓದಿ
IND vs ENG: ಟೀಮ್ ಇಂಡಿಯಾ ಆಟಗಾರರು ವಿಶೇಷ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದು ಯಾಕೆ ಗೊತ್ತಾ?
6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಬ್ಲಾಸ್ಟ್​ನಲ್ಲಿ ಹೊಸ ದಾಖಲೆ
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!
Test Cricket Records: ಟೆಸ್ಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?

ಇನ್ನು ಎಡ್ಜ್‌ಬಾಸ್ಟನ್​ನಲ್ಲಿ ನಡೆಯುತ್ತಿರುವ 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಗೆಲುವಿ ಸಮೀಪದಲ್ಲಿದೆ. 2ನೇ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ನೀಡಿದ 378 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿರುವ ಇಂಗ್ಲೆಂಡ್​ ತಂಡವು 3 ವಿಕೆಟ್ ನಷ್ಟಕ್ಕೆ 259 ರನ್​ಗಳಿಸಿದ್ದು, ಇನ್ನು 5ನೇ ದಿನದಾಟದಲ್ಲಿ ಆಂಗ್ಲರಿಗೆ ಗೆಲ್ಲಲು ಬೇಕಿರುವುದು ಕೇವಲ 119 ರನ್​ ಮಾತ್ರ. ಹೀಗಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಇತ್ತ ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದರೆ ಸರಣಿ ಡ್ರಾ ಆಗಲಿದೆ. ಏಕೆಂದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಹೊಂದಿದ್ದು, ಇದೀಗ ಇಂಗ್ಲೆಂಡ್ ಗೆದ್ದರೆ ಸರಣಿ 2-2 ರಿಂದ ಸಮಗೊಳ್ಳಲಿದೆ.