AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸಲ ಕಪ್ ನಮ್ದೆ… ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು..!

IPL 2025: ಐಪಿಎಲ್​ ಪ್ಲೇಆಫ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಮುಲ್ಲನ್​ಪುರ್​ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 101 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಆರ್​ಸಿಬಿ 10 ಓವರ್​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಸಲ ಕಪ್ ನಮ್ದೆ... ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು..!
Rcb 2025
ಝಾಹಿರ್ ಯೂಸುಫ್
|

Updated on:May 30, 2025 | 7:39 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಅದು ಕೂಡ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ. ಅಂದರೆ ಐಪಿಎಲ್ ಇತಿಹಾಸದಲ್ಲೇ ಯಾವುದೇ ತಂಡ 10 ಓವರ್​ಗಳಲ್ಲಿ ಪ್ಲೇಆಫ್ ಪಂದ್ಯ ಮುಗಿಸಿ ಫೈನಲ್​ಗೇರಿದ ಇತಿಹಾಸವಿಲ್ಲ. ಆದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಿ ಫೈನಲ್ ಫೈಟ್​ಗೆ ಎಂಟ್ರಿ ಕೊಟ್ಟಿದೆ.

ಈ ಎಂಟ್ರಿಯೊಂದಿಗೆ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯ ಕೂಡ ಜೋರಾಗಿ ಕೇಳಿ ಬರುತ್ತಿದೆ. ಈ ಘೋಷವಾಕ್ಯದೊಂದಿಗೆ ಆರ್​ಸಿಬಿ ಟ್ರೋಫಿ ಎತ್ತಿ ಹಿಡಿಯುವುದು ಬಹುತೇಕ ಖಚಿತ. ಏಕೆಂದರೆ ಈ ಹಿಂದಿನ ಅಂಕಿ ಅಂಶಗಳನ್ನು ಗಮನಹರಿಸಿದರೆ, ಈ ಬಾರಿ ಟ್ರೋಫಿ ಗೆಲ್ಲುವ ಫೇವರೇಟ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಇದಕ್ಕೆ ಸಾಕ್ಷಿ…

  1. ಐಪಿಎಲ್​ ಇತಿಹಾಸದಲ್ಲಿ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ ತಂಡದ ಕಪ್ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ. ಈ ಬಾರಿ ಆರ್​ಸಿಬಿ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಿದೆ.
  2. ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ ತಂಡ ಎಲ್ಲಾ ಸೀಸನ್​ನಲ್ಲೂ ಫೈನಲ್​ಗೇರಿದೆ. ಅದರಂತೆ ಈ ಬಾರಿ ಕೂಡ ಆರ್​ಸಿಬಿ ಫೈನಲ್​ಗೆ ಎಂಟ್ರಿ ಕೊಟ್ಟಿದೆ.
  3. ಪಾಯಿಂಟ್ಸ್ ಟೇಬಲ್​ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ ತಂಡ ಬಹುತೇಕ ಬಾರಿ ಕಪ್ ಗೆದ್ದಿದೆ. ಅಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ತಂಡವು ಐಪಿಎಲ್​ನಲ್ಲಿ ಕಪ್ ಗೆಲ್ಲುವ ಸಾಧ್ಯತೆ 57 ರಷ್ಟು. ಅದೇ ಮೊದಲ ಸ್ಥಾನದಲ್ಲಿದ್ದ ತಂಡದ ಚಾನ್ಸ್ ಶೇ.35 ರಷ್ಟು ಮತ್ತು ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡ ತಂಡದ ಚಾನ್ಸ್ ಶೇ. 7 ರಷ್ಟಿದೆ. ಅಂದರೆ ಇಲ್ಲಿ ದ್ವಿತೀಯ ಸ್ಥಾನದಲ್ಲಿದ್ದ ತಂಡಗಳೇ ಹೆಚ್ಚಿನ ಬಾರಿ ಟ್ರೋಫಿ ಗೆದ್ದಿದೆ.
  4. ಐಪಿಎಲ್ ಇತಿಹಾಸದಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡವು 11 ಬಾರಿ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಬಾರಿ ಮೊದಲ ಕ್ವಾಲಿಫೈಯರ್ ಪಂದ್ಯ ಗೆದ್ದ ತಂಡ ಆರ್​ಸಿಬಿ.
  5. ಇನ್ನು ಕಳೆದ 7 ವರ್ಷಗಳಿಂದ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ಗೆದ್ದ ತಂಡ ಫೈನಲ್​ನಲ್ಲಿ ಸೋತಿಲ್ಲ. ಹೀಗಾಗಿ ಈ ಬಾರಿ ಆರ್​ಸಿಬಿ ತಂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: RCB ತಂಡದ್ದು ಅಂತಿಂಥ ಗೆಲುವಲ್ಲ, ಐಪಿಎಲ್ ಇತಿಹಾಸದಲ್ಲೇ ಮೊದಲು..!

ಈ ಮೇಲಿನ ಅಂಕಿ ಅಂಶಗಳ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲುವುದು ಬಹುತೇಕ ಖಚಿತ. ಅದರಂತೆ ಜೂನ್ 3 ರಂದು ಅಹಮದಾಬಾದ್​ನ ನರೇಂದ್ರ ಮೋದಿಯಲ್ಲಿ ಈ ಸಲ ಕಪ್ ನಮ್ದೆ ಎನ್ನುವ ಘೋಷವಾಕ್ಯ ಮೊಳಗುವುದರಲ್ಲಿ ಡೌಟೇ ಇಲ್ಲ ಎನ್ಬಬಹುದು.

Published On - 7:36 am, Fri, 30 May 25

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ