Rcb 2025
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಫೈನಲ್ಗೆ ಎಂಟ್ರಿ ಕೊಟ್ಟಿದೆ. ಅದು ಕೂಡ 10 ಓವರ್ಗಳಲ್ಲಿ ಪಂದ್ಯ ಮುಗಿಸಿ. ಅಂದರೆ ಐಪಿಎಲ್ ಇತಿಹಾಸದಲ್ಲೇ ಯಾವುದೇ ತಂಡ 10 ಓವರ್ಗಳಲ್ಲಿ ಪ್ಲೇಆಫ್ ಪಂದ್ಯ ಮುಗಿಸಿ ಫೈನಲ್ಗೇರಿದ ಇತಿಹಾಸವಿಲ್ಲ. ಆದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಿ ಫೈನಲ್ ಫೈಟ್ಗೆ ಎಂಟ್ರಿ ಕೊಟ್ಟಿದೆ.
ಈ ಎಂಟ್ರಿಯೊಂದಿಗೆ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯ ಕೂಡ ಜೋರಾಗಿ ಕೇಳಿ ಬರುತ್ತಿದೆ. ಈ ಘೋಷವಾಕ್ಯದೊಂದಿಗೆ ಆರ್ಸಿಬಿ ಟ್ರೋಫಿ ಎತ್ತಿ ಹಿಡಿಯುವುದು ಬಹುತೇಕ ಖಚಿತ. ಏಕೆಂದರೆ ಈ ಹಿಂದಿನ ಅಂಕಿ ಅಂಶಗಳನ್ನು ಗಮನಹರಿಸಿದರೆ, ಈ ಬಾರಿ ಟ್ರೋಫಿ ಗೆಲ್ಲುವ ಫೇವರೇಟ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಇದಕ್ಕೆ ಸಾಕ್ಷಿ…
- ಐಪಿಎಲ್ ಇತಿಹಾಸದಲ್ಲಿ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ ತಂಡದ ಕಪ್ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ. ಈ ಬಾರಿ ಆರ್ಸಿಬಿ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಿದೆ.
- ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ ತಂಡ ಎಲ್ಲಾ ಸೀಸನ್ನಲ್ಲೂ ಫೈನಲ್ಗೇರಿದೆ. ಅದರಂತೆ ಈ ಬಾರಿ ಕೂಡ ಆರ್ಸಿಬಿ ಫೈನಲ್ಗೆ ಎಂಟ್ರಿ ಕೊಟ್ಟಿದೆ.
- ಪಾಯಿಂಟ್ಸ್ ಟೇಬಲ್ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ ತಂಡ ಬಹುತೇಕ ಬಾರಿ ಕಪ್ ಗೆದ್ದಿದೆ. ಅಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ತಂಡವು ಐಪಿಎಲ್ನಲ್ಲಿ ಕಪ್ ಗೆಲ್ಲುವ ಸಾಧ್ಯತೆ 57 ರಷ್ಟು. ಅದೇ ಮೊದಲ ಸ್ಥಾನದಲ್ಲಿದ್ದ ತಂಡದ ಚಾನ್ಸ್ ಶೇ.35 ರಷ್ಟು ಮತ್ತು ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡ ತಂಡದ ಚಾನ್ಸ್ ಶೇ. 7 ರಷ್ಟಿದೆ. ಅಂದರೆ ಇಲ್ಲಿ ದ್ವಿತೀಯ ಸ್ಥಾನದಲ್ಲಿದ್ದ ತಂಡಗಳೇ ಹೆಚ್ಚಿನ ಬಾರಿ ಟ್ರೋಫಿ ಗೆದ್ದಿದೆ.
- ಐಪಿಎಲ್ ಇತಿಹಾಸದಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡವು 11 ಬಾರಿ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಬಾರಿ ಮೊದಲ ಕ್ವಾಲಿಫೈಯರ್ ಪಂದ್ಯ ಗೆದ್ದ ತಂಡ ಆರ್ಸಿಬಿ.
- ಇನ್ನು ಕಳೆದ 7 ವರ್ಷಗಳಿಂದ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ಗೆದ್ದ ತಂಡ ಫೈನಲ್ನಲ್ಲಿ ಸೋತಿಲ್ಲ. ಹೀಗಾಗಿ ಈ ಬಾರಿ ಆರ್ಸಿಬಿ ತಂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ: RCB ತಂಡದ್ದು ಅಂತಿಂಥ ಗೆಲುವಲ್ಲ, ಐಪಿಎಲ್ ಇತಿಹಾಸದಲ್ಲೇ ಮೊದಲು..!
ಈ ಮೇಲಿನ ಅಂಕಿ ಅಂಶಗಳ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲುವುದು ಬಹುತೇಕ ಖಚಿತ. ಅದರಂತೆ ಜೂನ್ 3 ರಂದು ಅಹಮದಾಬಾದ್ನ ನರೇಂದ್ರ ಮೋದಿಯಲ್ಲಿ ಈ ಸಲ ಕಪ್ ನಮ್ದೆ ಎನ್ನುವ ಘೋಷವಾಕ್ಯ ಮೊಳಗುವುದರಲ್ಲಿ ಡೌಟೇ ಇಲ್ಲ ಎನ್ಬಬಹುದು.