AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಅಭಿಷೇಕ್ ಅಬ್ಬರ: ಭಾರತ ಕಿರಿಯರ ತಂಡಕ್ಕೆ ಸುಲಭ ಜಯ

Emerging Asia Cup 2023: 168 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ಆರಂಭಿಕರಾದ ಅಭಿಷೇಕ್ ಶರ್ಮಾ ಹಾಗೂ ಸಾಯಿ ಸುದರ್ಶನ್ ಅತ್ಯುತ್ತಮ ಆರಂಭ ಒದಗಿಸಿದ್ದರು.

Asia Cup 2023: ಅಭಿಷೇಕ್ ಅಬ್ಬರ: ಭಾರತ ಕಿರಿಯರ ತಂಡಕ್ಕೆ ಸುಲಭ ಜಯ
Team India A
TV9 Web
| Updated By: ಝಾಹಿರ್ ಯೂಸುಫ್|

Updated on:Jul 17, 2023 | 7:06 PM

Share

Emerging Teams Asia Cup 2023: ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಎಮರ್ಜಿಂಗ್ ಏಷ್ಯಾಕಪ್​ನ 8ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಎ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನೇಪಾಳ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಆದರೆ ಮೊದಲ ಓವರ್​ನ 2ನೇ ಎಸೆತದಲ್ಲಿ ಕುಶಾಲ್ (0) ವಿಕೆಟ್ ಪಡೆಯುವ ಮೂಲಕ ಹರ್ಷಿತ್ ರಾಣಾ ಟೀಮ್ ಇಂಡಿಯಾಗೆ ಆರಂಭಿಕ ಯಶಸ್ಸು ತಂದುಕೊಟ್ಟರು.

ಈ ಆರಂಭಿಕ ಆಘಾತದಿಂದ ಹೊರಬರುವ ಮುನ್ನವೇ ಟೀಮ್ ಇಂಡಿಯಾದ ಯುವ ಬೌಲರ್​ಗಳು 37 ರನ್​ಗಳಿಗೆ 5 ವಿಕೆಟ್ ಉರುಳಿಸಿದರು. ಈ ಹಂತದಲ್ಲಿ ಕ್ರೀಸ್ ಕಚ್ಚಿ ನಿಂತ ನಾಯಕ ರೋಹಿತ್ ಪೌಡೆಲ್ (65) ಅರ್ಧಶತಕ ಬಾರಿಸಿ ತಂಡಕ್ಕೆ ಆಸರೆಯಾದರು.

ಆದರೆ ನಿಶಾಂತ್ ಸಿಂಧು ಎಸೆತದಲ್ಲಿ ಕ್ಯಾಚ್ ನೀಡಿ ಪೌಡೆಲ್ ಕೂಡ ಹಿಂತಿರುಗಿದರು. ಈ ಹಂತದಲ್ಲಿ ಮತ್ತೊಮ್ಮೆ ಮೇಲುಗೈ ಸಾಧಿಸಿದ ಟೀಮ್ ಇಂಡಿಯಾ ಬೌಲರ್​ಗಳು ನೇಪಾಳ ತಂಡವನ್ನು 39.2 ಓವರ್​ಗಳಲ್ಲಿ 167 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು.

168 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ಆರಂಭಿಕರಾದ ಅಭಿಷೇಕ್ ಶರ್ಮಾ ಹಾಗೂ ಸಾಯಿ ಸುದರ್ಶನ್ ಅತ್ಯುತ್ತಮ ಆರಂಭ ಒದಗಿಸಿದ್ದರು. 19 ಓವರ್​ಗಳಲ್ಲಿ 139 ರನ್​ಗಳ ಜೊತೆಯಾಟವಾಡಿದ ಈ ಜೋಡಿ ಭಾರತದ ಗೆಲುವನ್ನು ಖಚಿತಪಡಿಸಿದರು.

ಈ ಹಂತದಲ್ಲಿ ಬಿರುಸಿನ ಹೊಡೆತಕ್ಕೆ ಮುಂದಾದ ಅಭಿಷೇಕ್ ಶರ್ಮಾ ರೋಹಿತ್ ಪೌಡೆಲ್​ಗೆ ವಿಕೆಟ್ ಒಪ್ಪಿಸಿದರು. ಔಟಾಗುವ ಮುನ್ನ 69 ಎಸೆತಗಳನ್ನು ಎದುರಿಸಿದ್ದ ಅಭಿಷೇಕ್ 2 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 87 ರನ್ ಕಲೆಹಾಕಿದ್ದರು.

ಇನ್ನು ಸಾಯಿ ಸುದರ್ಶನ್ 52 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 58 ರನ್ ಬಾರಿಸಿದರೆ, ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ 21 ರನ್​ ಕಲೆಹಾಕಿದರು. ಈ ಮೂಲಕ 22.1 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 172 ರನ್​ ಬಾರಿಸಿ ಟೀಮ್ ಇಂಡಿಯಾ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಭಾರತ ಎ ಪ್ಲೇಯಿಂಗ್ 11: ಸಾಯಿ ಸುದರ್ಶನ್ , ಅಭಿಷೇಕ್ ಶರ್ಮಾ , ನಿಕಿನ್ ಜೋಸ್ , ಯಶ್ ಧುಲ್ (ನಾಯಕ) , ರಿಯಾನ್ ಪರಾಗ್ , ನಿಶಾಂತ್ ಸಿಂಧು , ಧ್ರುವ್ ಜುರೆಲ್ (ವಿಕೆಟ್ ಕೀಪರ್) , ಮಾನವ್ ಸುತಾರ್ , ಹರ್ಷಿತ್ ರಾಣಾ , ನಿತೀಶ್ ರೆಡ್ಡಿ , ಆರ್ ಎಸ್ ಹಂಗರ್ಗೇಕರ್.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ 3 ಗುಡ್​ ನ್ಯೂಸ್

ನೇಪಾಳ ಎ ಪ್ಲೇಯಿಂಗ್ 11: ಕುಶಾಲ್ ಭುರ್ಟೆಲ್ , ಆಸಿಫ್ ಶೇಖ್ (ವಿಕೆಟ್ ಕೀಪರ್) , ದೇವ್ ಖಾನಲ್ , ರೋಹಿತ್ ಪೌಡೆಲ್ (ನಾಯಕ) , ಭೀಮ್ ಶರ್ಕಿ , ಕುಶಾಲ್ ಮಲ್ಲಾ , ಗುಲ್ಸನ್ ಝಾ , ಸೋಂಪಾಲ್ ಕಾಮಿ , ಪವನ್ ಸರ್ರಾಫ್ , ಕಿಶೋರ್ ಮಹತೋ , ಲಲಿತ್ ರಾಜಬಂಶಿ.

Published On - 7:04 pm, Mon, 17 July 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ