Emerging Teams Asia Cup 2023: ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಎಮರ್ಜಿಂಗ್ ಏಷ್ಯಾಕಪ್ನ 8ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಎ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನೇಪಾಳ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಆದರೆ ಮೊದಲ ಓವರ್ನ 2ನೇ ಎಸೆತದಲ್ಲಿ ಕುಶಾಲ್ (0) ವಿಕೆಟ್ ಪಡೆಯುವ ಮೂಲಕ ಹರ್ಷಿತ್ ರಾಣಾ ಟೀಮ್ ಇಂಡಿಯಾಗೆ ಆರಂಭಿಕ ಯಶಸ್ಸು ತಂದುಕೊಟ್ಟರು.
ಈ ಆರಂಭಿಕ ಆಘಾತದಿಂದ ಹೊರಬರುವ ಮುನ್ನವೇ ಟೀಮ್ ಇಂಡಿಯಾದ ಯುವ ಬೌಲರ್ಗಳು 37 ರನ್ಗಳಿಗೆ 5 ವಿಕೆಟ್ ಉರುಳಿಸಿದರು. ಈ ಹಂತದಲ್ಲಿ ಕ್ರೀಸ್ ಕಚ್ಚಿ ನಿಂತ ನಾಯಕ ರೋಹಿತ್ ಪೌಡೆಲ್ (65) ಅರ್ಧಶತಕ ಬಾರಿಸಿ ತಂಡಕ್ಕೆ ಆಸರೆಯಾದರು.
ಆದರೆ ನಿಶಾಂತ್ ಸಿಂಧು ಎಸೆತದಲ್ಲಿ ಕ್ಯಾಚ್ ನೀಡಿ ಪೌಡೆಲ್ ಕೂಡ ಹಿಂತಿರುಗಿದರು. ಈ ಹಂತದಲ್ಲಿ ಮತ್ತೊಮ್ಮೆ ಮೇಲುಗೈ ಸಾಧಿಸಿದ ಟೀಮ್ ಇಂಡಿಯಾ ಬೌಲರ್ಗಳು ನೇಪಾಳ ತಂಡವನ್ನು 39.2 ಓವರ್ಗಳಲ್ಲಿ 167 ರನ್ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು.
168 ರನ್ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ಆರಂಭಿಕರಾದ ಅಭಿಷೇಕ್ ಶರ್ಮಾ ಹಾಗೂ ಸಾಯಿ ಸುದರ್ಶನ್ ಅತ್ಯುತ್ತಮ ಆರಂಭ ಒದಗಿಸಿದ್ದರು. 19 ಓವರ್ಗಳಲ್ಲಿ 139 ರನ್ಗಳ ಜೊತೆಯಾಟವಾಡಿದ ಈ ಜೋಡಿ ಭಾರತದ ಗೆಲುವನ್ನು ಖಚಿತಪಡಿಸಿದರು.
ಈ ಹಂತದಲ್ಲಿ ಬಿರುಸಿನ ಹೊಡೆತಕ್ಕೆ ಮುಂದಾದ ಅಭಿಷೇಕ್ ಶರ್ಮಾ ರೋಹಿತ್ ಪೌಡೆಲ್ಗೆ ವಿಕೆಟ್ ಒಪ್ಪಿಸಿದರು. ಔಟಾಗುವ ಮುನ್ನ 69 ಎಸೆತಗಳನ್ನು ಎದುರಿಸಿದ್ದ ಅಭಿಷೇಕ್ 2 ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ 87 ರನ್ ಕಲೆಹಾಕಿದ್ದರು.
ಇನ್ನು ಸಾಯಿ ಸುದರ್ಶನ್ 52 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ ಅಜೇಯ 58 ರನ್ ಬಾರಿಸಿದರೆ, ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ 21 ರನ್ ಕಲೆಹಾಕಿದರು. ಈ ಮೂಲಕ 22.1 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 172 ರನ್ ಬಾರಿಸಿ ಟೀಮ್ ಇಂಡಿಯಾ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
ಭಾರತ ಎ ಪ್ಲೇಯಿಂಗ್ 11: ಸಾಯಿ ಸುದರ್ಶನ್ , ಅಭಿಷೇಕ್ ಶರ್ಮಾ , ನಿಕಿನ್ ಜೋಸ್ , ಯಶ್ ಧುಲ್ (ನಾಯಕ) , ರಿಯಾನ್ ಪರಾಗ್ , ನಿಶಾಂತ್ ಸಿಂಧು , ಧ್ರುವ್ ಜುರೆಲ್ (ವಿಕೆಟ್ ಕೀಪರ್) , ಮಾನವ್ ಸುತಾರ್ , ಹರ್ಷಿತ್ ರಾಣಾ , ನಿತೀಶ್ ರೆಡ್ಡಿ , ಆರ್ ಎಸ್ ಹಂಗರ್ಗೇಕರ್.
ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್ಗೂ ಮುನ್ನ ಟೀಮ್ ಇಂಡಿಯಾಗೆ 3 ಗುಡ್ ನ್ಯೂಸ್
ನೇಪಾಳ ಎ ಪ್ಲೇಯಿಂಗ್ 11: ಕುಶಾಲ್ ಭುರ್ಟೆಲ್ , ಆಸಿಫ್ ಶೇಖ್ (ವಿಕೆಟ್ ಕೀಪರ್) , ದೇವ್ ಖಾನಲ್ , ರೋಹಿತ್ ಪೌಡೆಲ್ (ನಾಯಕ) , ಭೀಮ್ ಶರ್ಕಿ , ಕುಶಾಲ್ ಮಲ್ಲಾ , ಗುಲ್ಸನ್ ಝಾ , ಸೋಂಪಾಲ್ ಕಾಮಿ , ಪವನ್ ಸರ್ರಾಫ್ , ಕಿಶೋರ್ ಮಹತೋ , ಲಲಿತ್ ರಾಜಬಂಶಿ.
Published On - 7:04 pm, Mon, 17 July 23