
ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ (Lord’s Cricket Ground) ನಡೆದ ಮೊದಲ ಟೆಸ್ಟ್ ಪಂದ್ಯ 4ನೇ ದಿನದ ಮೊದಲ ಸೆಷನ್‌ನಲ್ಲಿಯೇ ಅಂತ್ಯವಾಯಿತು. ಈ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್, ನ್ಯೂಜಿಲೆಂಡ್ ತಂಡವನ್ನು 115 ರನ್‌ಗಳಿಂದ ಮಣಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಗೆಲುವಿಗೆ 254 ರನ್‌ಗಳ ಗುರಿ ಪಡೆದಿದ್ದ ನ್ಯೂಜಿಲೆಂಡ್ ಕೇವಲ 40.3 ಓವರ್ ಬ್ಯಾಟಿಂಗ್ ಮಾಡಿ 138 ರನ್ ಕಲೆಹಾಕುವುದರೊಳಗೆ ತನ್ನಲ್ಲೇ ವಿಕೆಟ್ ಕಳೆದುಕೊಂಡು ಹೀನಾಯ ಸೋಲು ಅನುಭವಿಸಿತು.
ಈ ಇಡೀ ಪಂದ್ಯದಲ್ಲಿ ಬೌಲರ್‌ಗಳ ಪಾರುಪತ್ಯವೇ ಹೆಚ್ಚಿತ್ತು. ಲಾರ್ಡ್ಸ್‌ನ ಬೌಲಿಂಗ್ ಸಹಾಯಕವಾದ ಈ ಪಿಚ್‌ನಲ್ಲಿ ಎರಡೂ ತಂಡಗಳ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ವೇಗದ ಬೌಲರ್‌ಗಳು ಪಂದ್ಯದಲ್ಲಿ ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸಿದರು. ಇತ್ತ ತವರಿನ ಪರಿಸ್ಥಿತಿಯ ಸಂಪೂರ್ಣ ಲಾಭ ಪಡೆದ ಇಂಗ್ಲೆಂಡ್‌ನ ಬೌಲರ್‌ಗಳು ನ್ಯೂಜಿಲೆಂಡ್‌ನ ಬಲಿಷ್ಠ ಬ್ಯಾಟಿಂಗ್ ಲೈನ್‌ಅಪ್‌ನ ಇನ್ನಿಲ್ಲದಂತೆ ಕಾಡಿದರು. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಕೇವಲ 140 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇತ್ತ ಇಂಗ್ಲೆಂಡ್ ಬೌಲರ್‌ಗಳ ಮುಂದೆ ಮಂಡಿಯೂರಿದ ನ್ಯೂಜಿಲೆಂಡ್ ಕೇವಲ 113 ರನ್‌ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು.
ಆದಾಗ್ಯೂ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ 226 ರನ್ ಕಲೆಹಾಕಿತು. ತಂಡದ ಪರ ಎಮಿಲಿಯೊ ಗೇ ನಿರ್ಣಾಯಕ 57 ರನ್‌ಗಳ ಇನ್ನಿಂಗ್ಸ್ ಅಡಿದರೆ, ಜೇಮೀ ಸ್ಮಿತ್ ಕೂಡ 39 ರನ್ ಬಾರಿಸಿದರು. ಕೊನೆಯಲ್ಲಿ ಓಲ್ಲಿ ರಾಬಿನ್ಸನ್ 29 ರನ್ ಬಾರಿಸಿ ತಂಡ ಈ ಸ್ಕೋರ್ ತಲುಪಲು ಸಹಾಯ ಮಾಡಿದರು. ಅಂತಿಮವಾಗಿ 253 ರನ್‌ಗಳ ಗುರಿ ಪಡೆದಿದ್ದ ನ್ಯೂಜಿಲೆಂಡ್ ಕೇವಲ 138 ರನ್‌ಗಳಿಗೆ ಆಲೌಟ್ ಆಗಿ ಪಂದ್ಯವನ್ನು 115 ರನ್‌ಗಳಿಂದ ಸೋತಿತು.
ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ
ಈ ಪಂದ್ಯಕ್ಕೂ ಮುನ್ನ, ನ್ಯೂಜಿಲೆಂಡ್ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‘ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿತ್ತು. ಆದಾಗ್ಯೂ, ಇಂಗ್ಲೆಂಡ್ ವಿರುದ್ಧದ ಈ ಹೀನಾಯ ಸೋಲಿನ ನಂತರ, ಕಿವೀಸ್ ಪಾಯಿಂಟ್ ಪಟ್ಟಿಯಲ್ಲಿ ಕುಸಿತ ಅನುಭವಿಸಿದ್ದು, ನೇರವಾಗಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಏತನ್ಮಧ್ಯೆ, ದಕ್ಷಿಣ ಆಫ್ರಿಕಾ ಎರಡನೇ ಸ್ಥಾನಕ್ಕೆ ಮತ್ತು ಶ್ರೀಲಂಕಾ ಮೂರನೇ ಸ್ಥಾನಕ್ಕೆ ಏರಿದೆ. ಆದರೆ ಈ ಗೆಲುವಿನ ಹೊರತಾಗಿಯೂ ಇಂಗ್ಲೆಂಡ್ ಏಳನೇ ಸ್ಥಾನದಲ್ಲೇ ಉಳಿದಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:04 pm, Sun, 7 June 26