ENG vs IND 5th Test: ಭಾರತ-ಇಂಗ್ಲೆಂಡ್ ಪಂದ್ಯಕ್ಕೆ ವರುಣನ ಅಡ್ಡಿ: ಇದು ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್

ENG vs IND 5th Test, Day 3: ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಪಂದ್ಯದಲ್ಲಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಇಂಗ್ಲೆಂಡ್ ತಂಡವು ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತು.

ENG vs IND 5th Test: ಭಾರತ-ಇಂಗ್ಲೆಂಡ್ ಪಂದ್ಯಕ್ಕೆ ವರುಣನ ಅಡ್ಡಿ: ಇದು ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್
ENG vs IND 5th Test
TV9kannada Web Team

| Edited By: Zahir PY

Jul 03, 2022 | 3:29 PM

ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಭಾರತ – ಇಂಗ್ಲೆಂಡ್ (India vs England) ನಡುವಣ 5ನೇ ಟೆಸ್ಟ್ ಪಂದ್ಯಕ್ಕೆ ವರುಣ ಅಡ್ಡಿಪಡಿಸಲಾರಂಭಿಸಿದ್ದಾನೆ. ಮೊದಲ ದಿನದಾಟದಲ್ಲಿ ಉತ್ತಮವಾಗಿ ಸಾಗಿದ್ದ ಪಂದ್ಯಕ್ಕೆ ಎರಡನೇ ದಿನದಾಟ ಮಳೆಯ ಭೀತಿ ಎದುರಾಯಿತು. ಅಷ್ಟೇ ಅಲ್ಲದೆ ಮಳೆಯಿಂದಾಗಿ ಪಂದ್ಯಕ್ಕೆ ಮೂರು ಬಾರಿ ಅಡಚಣೆಯುಂಟಾಯಿತು. ಇನ್ನು ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ರಿಷಭ್ ಪಂತ್ ಅವರ 146 ರನ್​ಗಳ ಭರ್ಜರಿ ಶತಕ ಹಾಗೂ ರವೀಂದ್ರ ಜಡೇಜಾರ ಅಮೋಘ 104 ರನ್​ಗಳ ನೆರವಿನಿಂದ 416 ರನ್​ ಕಲೆಹಾಕಿದೆ. ಇದಕ್ಕುತ್ತರವಾಗಿ ಇಂಗ್ಲೆಂಡ್ ತಂಡವು ಕೇವಲ 84 ರನ್​ಗಳಿಗೆ 5 ವಿಕೆಟ್​ಗಳನ್ನು ಕಳೆದುಕೊಂಡಿದೆ. ಇದೀಗ 3ನೇ ದಿನದಾಟಕ್ಕೂ ಮಳೆ ಅಡಚಣೆಯುಂಟು ಮಾಡುವ ಸಾಧ್ಯತೆಯಿದೆ. ಆದರೆ ಮಳೆ ಬಂದರೆ ಅದು ಟೀಮ್ ಇಂಡಿಯಾ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ.

ಏಕೆಂದರೆ ಈ ಸರಣಿಯು ಕಳೆದ ವರ್ಷ ನಡೆದ ಭಾರತ-ಇಂಗ್ಲೆಂಡ್ ನಡುವಣ ಸರಣಿಯ ಕೊನೆಯ ಪಂದ್ಯವಾಗಿದೆ. ಅಂದರೆ 5 ಪಂದ್ಯಗಳ ಸರಣಿಯ ಮೊದಲ 4 ಪಂದ್ಯಗಳು ಈಗಾಗಲೇ ಮುಗಿದಿದೆ. ಇನ್ನು ಐದನೇ ಪಂದ್ಯವನ್ನು ಕೊರೋನಾ ಕಾರಣದಿಂದಾಗಿ ಈ ವರ್ಷಕ್ಕೆ ಮುಂದೂಡಲಾಗಿತ್ತು. ಅದರಂತೆ ಇದೀಗ ಐದನೇ ಟೆಸ್ಟ್ ಪಂದ್ಯವನ್ನು ಆಡಲಾಗುತ್ತಿದೆ.

ಅತ್ತ ಮೊದಲ 4 ಪಂದ್ಯಗಳಲ್ಲಿ ಟೀಮ್ ಇಂಡಿಯಾ 2 ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಅಂದರೆ ನ್ಯಾಟಿಂಗ್​ಹ್ಯಾಮ್​ನಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯವು ಮಳೆಯ ಕಾರಣ ಡ್ರಾನಲ್ಲಿ ಅಂತ್ಯ ಕಂಡಿತ್ತು. ಇದಾದ ಬಳಿಕ ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ನಡೆದ 2ನೇ ಪಂದ್ಯದಲ್ಲಿ 151 ರನ್​ಗಳ ಐತಿಹಾಸಿಕ ಗೆಲುವು ದಾಖಲಿಸಿತ್ತು.

ಇನ್ನು ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಪಂದ್ಯದಲ್ಲಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಇಂಗ್ಲೆಂಡ್ ತಂಡವು ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತು. ಓವಲ್​ ಮೈದಾನದಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ 157 ರನ್​ಗಳ ಗೆಲುವು ದಾಖಲಿಸಿ ಟೀಮ್ ಇಂಡಿಯಾ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

ಅದರಂತೆ ಟೀಮ್ ಇಂಡಿಯಾ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆಯಲ್ಲಿದ್ದು, ಹೀಗಾಗಿ ಇಂಗ್ಲೆಂಡ್ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಏಕೆಂದರೆ ಸರಣಿಯಲ್ಲಿ ಸಮಬಲ ಸಾಧಿಸಬೇಕಿದ್ದರೆ ಇಂಗ್ಲೆಂಡ್ ತಂಡ ಈ ಪಂದ್ಯದಲ್ಲಿ ಗೆಲ್ಲಲೇಬೇಕು. ಇತ್ತ ಟೀಮ್ ಇಂಡಿಯಾಗೆ ಜಯ ಸಾಧಿಸಲು ಸಾಧ್ಯವಾಗದಿದ್ದರೆ, ಡ್ರಾ ಮಾಡಿಕೊಂಡರೂ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ.

ಇತ್ತ ಮಳೆಯಿಂದ ಪಂದ್ಯ ರದ್ದಾದರೂ ಅಥವಾ ಡ್ರಾಗೊಂಡರೂ ಸರಣಿ ಟೀಮ್ ಇಂಡಿಯಾ ವಶವಾಗಲಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೂ ಟೀಮ್ ಇಂಡಿಯಾ ಆಟಗಾರರು ಮಾತ್ರ ನಿರಾಳರಾಗಿದ್ದಾರೆ. ಏಕೆಂದರೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ ಬೃಹತ್ ಮೊತ್ತ ಪೇರಿಸಿದೆ. ಇತ್ತ ಇಂಗ್ಲೆಂಡ್ ಮೂರನೇ ದಿನದಾಟದ ವೇಳೆಗೆ 5 ವಿಕೆಟ್​ ಕಳೆದುಕೊಂಡು 84 ರನ್​ ಮಾತ್ರ ಕಲೆಹಾಕಿದೆ. ಇನಿಂಗ್ಸ್ ಹಿನ್ನಡೆಯಿಂದ ಪಾರಾಗಲು ಇಂಗ್ಲೆಂಡ್ ಇನ್ನೂ 332 ರನ್​ಗಳಿಸಬೇಕಿದೆ.

ಒಂದು ವೇಳೆ ಕೊನೆಯ ಎರಡು ದಿನದಾಟದಲ್ಲಿ ಮಳೆಯಾದರೆ, ಪಂದ್ಯ ಡ್ರಾನಲ್ಲಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚು. ಇದು ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಇಂಗ್ಲೆಂಡ್ ಗೆದ್ದರೆ ಮಾತ್ರ ಸರಣಿ ಸಮಬಲಗೊಳ್ಳಲಿದೆ. ಇತ್ತ ಡ್ರಾ ಆದರೆ ಅಥವಾ ರದ್ದಾದರೆ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ. ಅದರಂತೆ 15 ವರ್ಷಗಳ ಬಳಿಕ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿ ಗೆಲ್ಲುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಇಂತಹದೊಂದು ಐತಿಹಾಸಿಕ ಗೆಲುವು ಟೀಮ್ ಇಂಡಿಯಾ ಪಾಲಾಗಲಿದೆಯಾ ಕಾದು ನೋಡಬೇಕಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada