AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಬುಮ್ರಾ 4ನೇ ಟೆಸ್ಟ್ ಆಡದಿದ್ದರೆ ಈತನನ್ನು ಕಣಕ್ಕಿಳಿಸಿ ಎಂದ ಅಜಿಂಕ್ಯ ರಹಾನೆ

India vs England 4th Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಆಡುವುದರ ಬಗ್ಗೆ ಅನುಮಾನವಿದೆ. ಅವರ ಅನುಪಸ್ಥಿತಿಯಲ್ಲಿ, ಎಡಗೈ ವೇಗಿ ಅರ್ಶ್ದೀಪ್ ಸಿಂಗ್ ಅವರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಅಜಿಂಕ್ಯ ರಹಾನೆ ಅವರು ಅರ್ಶ್ದೀಪ್ ಸೂಕ್ತ ಬದಲಿ ಎಂದು ಹೇಳಿದ್ದಾರೆ. ಇಂಗ್ಲೆಂಡ್ ಪಿಚ್‌ಗಳಲ್ಲಿ ಎಡಗೈ ವೇಗದ ಬೌಲರ್ ಅವಶ್ಯಕ ಎಂಬುದು ಅವರ ಅಭಿಪ್ರಾಯ. ಅರ್ಶ್ದೀಪ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅನುಭವವಿಲ್ಲದಿದ್ದರೂ, ಅವರ ಏಕದಿನ ಮತ್ತು ಟಿ20 ದಾಖಲೆ ಅತ್ಯುತ್ತಮವಾಗಿದೆ.

IND vs ENG: ಬುಮ್ರಾ 4ನೇ ಟೆಸ್ಟ್ ಆಡದಿದ್ದರೆ ಈತನನ್ನು ಕಣಕ್ಕಿಳಿಸಿ ಎಂದ ಅಜಿಂಕ್ಯ ರಹಾನೆ
Team India
ಪೃಥ್ವಿಶಂಕರ
|

Updated on:Jul 19, 2025 | 3:21 PM

Share

ಇಂಗ್ಲೆಂಡ್ ಮತ್ತು ಭಾರತ (India vs England ) ನಡುವಿನ ನಾಲ್ಕನೇ ಟೆಸ್ಟ್ ಪಂದ್ಯವು ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಟೀಂ ಇಂಡಿಯಾ ನಾಲ್ಕನೇ ಪಂದ್ಯವನ್ನು ಗೆದ್ದು 5 ಪಂದ್ಯಗಳ ಸರಣಿಯನ್ನು 2-2 ರಿಂದ ಸಮಬಲಗೊಳಿಸಲು ಪ್ರಯತ್ನಿಸಲಿದೆ. ಆದಾಗ್ಯೂ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆ ಇದೆ. ಅದರಲ್ಲಿ ಪ್ರಮುಖವಾಗಿ ಬುಮ್ರಾ (Jasprit Bumrah) ಆಡುವುದರ ಬಗ್ಗೆ ಅನುಮಾನವಿದೆ. ಒಂದು ವೇಳೆ 4ನೇ ಟೆಸ್ಟ್​ನಲ್ಲಿ ಬುಮ್ರಾ ಆಡದಿದ್ದರೆ ಅವರ ಬದಲಿಗೆ ಎಡಗೈ ವೇಗಿ ಅರ್ಶ್‌ದೀಪ್ ಸಿಂಗ್​ಗೆ (Arshdeep Singh) ಅವಕಾಶ ನೀಡಬೇಕು ಎಂದು ಅಜಿಂಕ್ಯ ರಹಾನೆ ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಬಗ್ಗೆ ಮಾತನಾಡಿರುವ ರಹಾನೆ, ‘ಬುಮ್ರಾ 4ನೇ ಟೆಸ್ಟ್ ಆಡದಿದ್ದರೆ, ಅರ್ಶ್‌ದೀಪ್ ಸರಿಯಾದ ಆಯ್ಕೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಇಂಗ್ಲೆಂಡ್‌ನಲ್ಲಿ ನಿಮಗೆ ಎಡಗೈ ವೇಗದ ಬೌಲರ್ ಅಗತ್ಯವಿದೆ. ಅಲ್ಲದೆ ಅರ್ಶ್​ದೀಪ್ ಎರಡೂ ಬದಿಗಳಲ್ಲಿ ಚೆಂಡನ್ನು ಸ್ವಿಂಗ್ ಮಾಡಬಲ್ಲರು. ಹಾಗಾಗಿ ಬುಮ್ರಾ ಆಡದಿದ್ದರೆ, ಅರ್ಶ್‌ದೀಪ್ ಮುಂದಿನ ಪಂದ್ಯವನ್ನು ಆಡಬೇಕು ಎಂದಿದ್ದಾರೆ.

ಬುಮ್ರಾಗೆ ವಿಶ್ರಾಂತಿ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಲೀಡ್ಸ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯದಲ್ಲಿ ಬುಮ್ರಾ ಐದು ವಿಕೆಟ್‌ಗಳನ್ನು ಕಬಳಿಸಿದರು. ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 336 ರನ್‌ಗಳಿಂದ ಜಯಗಳಿಸಿತು. ಆದಾಗ್ಯೂ, ಬುಮ್ರಾ ಈ ಪಂದ್ಯದಲ್ಲಿ ಆಡಲಿಲ್ಲ. ಮೂರನೇ ಟೆಸ್ಟ್‌ನಲ್ಲಿ ಬುಮ್ರಾ ಆಡಿದರಾದರೂ ಭಾರತ 22 ರನ್‌ಗಳಿಂದ ಸೋತಿತು. ಈಗ ವರದಿಗಳ ಪ್ರಕಾರ ಬುಮ್ರಾ ನಾಲ್ಕನೇ ಟೆಸ್ಟ್‌ನಲ್ಲಿ ವಿಶ್ರಾಂತಿ ಪಡೆಯಬಹುದು. ಆದಾಗ್ಯೂ, ಗುರುವಾರ, ಸಹಾಯಕ ಕೋಚ್ ರಿಯಾನ್ ಡೆಸ್ಚಾಟೆ ಅವರು ಮುಂದಿನ ಪಂದ್ಯದಲ್ಲಿ ಬುಮ್ರಾ ಆಡುವುದನ್ನು ಕಾಣಬಹುದು ಎಂದಿದ್ದಾರೆ.

IND vs ENG: ಮ್ಯಾಂಚೆಸ್ಟರ್‌ ಟೆಸ್ಟ್​ಗೂ ಮುನ್ನ ಟೀಂ ಇಂಡಿಯಾ ಸ್ಟಾರ್ ವೇಗಿಗೆ ಇಂಜುರಿ

ಅರ್ಶ್‌ದೀಪ್​ಗೆ ಚೊಚ್ಚಲ ಅವಕಾಶ?

ಅರ್ಶ್‌ದೀಪ್ ಸಿಂಗ್ ಇನ್ನೂ ಭಾರತಕ್ಕಾಗಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿಲ್ಲ. ಇಲ್ಲಿಯವರೆಗೆ, ಅವರು 21 ಪ್ರಥಮ ದರ್ಜೆ ಪಂದ್ಯಗಳಲ್ಲಿ 66 ವಿಕೆಟ್‌ಗಳನ್ನು ಕಬಳಿಸಿದ್ದಾರೆ ಮತ್ತು 3.20 ಎಕಾನಮಿಯಲ್ಲಿ ಬೌಲಿಂಗ್ ಮಾಡಿದ್ದಾರೆ. ಅದೇ ಸಮಯದಲ್ಲಿ, ಭಾರತ ಪರ ಆಡಿರುವ ಒಂಬತ್ತು ಏಕದಿನ ಮತ್ತು 63 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅವರು ಕ್ರಮವಾಗಿ 14 ಮತ್ತು 99 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಬುಮ್ರಾ ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಆಡದಿದ್ದರೆ, 26 ವರ್ಷದ ಅರ್ಶ್​ದೀಪ್​ಗೆ ಅವಕಾಶ ಸಿಗಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Sat, 19 July 25

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ