ENG vs IND: ಹೀಗಾದ್ರೆ ಮಾತ್ರ ಪಂತ್ ಹಾಗೂ ಡಿಕೆಗೆ ಅವಕಾಶ..!
ENG vs IND: ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್).
ಇಂಗ್ಲೆಂಡ್ ವಿರುದ್ದದ 2ನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ (India vs England 2nd T20) ಸಜ್ಜಾಗಿ ನಿಂತಿದೆ. 3 ಪಂದ್ಯಗಳ ಈ ಸರಣಿಯ 2ನೇ ಪಂದ್ಯವು ಎಡ್ಜ್ಬಾಸ್ಟನ್ನಲ್ಲಿ ನಡೆಯಲಿದ್ದು, ಈ ಪಂದ್ಯದ ಮೂಲಕ ಟೀಮ್ ಇಂಡಿಯಾ (Team India) ಐವರು ಆಟಗಾರರು ತಂಡಕ್ಕೆ ಮರಳಲಿದ್ದಾರೆ. ಮೊದಲ ಪಂದ್ಯದ ವೇಳೆ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ (Virat Kohli), ರಿಷಭ್ ಪಂತ್ (Rishabh Pant), ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾರ ಆಗಮನದೊಂದಿಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಆಗಲಿದೆ. ಆದರೆ ಇಲ್ಲಿ ಯಾರನ್ನು ಕೈಬಿಟ್ಟು ಯಾರಿಗೆ ಚಾನ್ಸ್ ಸಿಗಲಿದೆ ಎಂಬುದೇ ದೊಡ್ಡ ಪ್ರಶ್ನೆ. ಏಕೆಂದರೆ ತಂಡದಲ್ಲಿರುವ ಪ್ರತಿಯೊಬ್ಬರೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಒಂದೆಡೆ ಕೊಹ್ಲಿ ಸ್ಥಾನದಲ್ಲಿ ದೀಪಕ್ ಹೂಡಾ ಮಿಂಚಿದ್ರೆ, ಮತ್ತೊಂದೆಡೆ ಬುಮ್ರಾ ಸ್ಥಾನದಲ್ಲಿ ಅರ್ಷದೀಪ್ ಸಿಂಗ್ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದಾರೆ. ಇದಾಗ್ಯೂ 2ನೇ ಪಂದ್ಯಕ್ಕೆ ಅರ್ಷದೀಪ್ ಸಿಂಗ್ ಆಯ್ಕೆಯಾಗಿಲ್ಲ. ಹೀಗಾಗಿ ಜಸ್ಪ್ರೀತ್ ಬುಮ್ರಾ ಆಡುವುದು ಖಚಿತ.
ಇನ್ನೊಂದೆಡೆ ದೀಪಕ್ ಹೂಡಾ ಅಥವಾ ಸೂರ್ಯಕುಮಾರ್ ಯಾದವ್ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಆಡಬಹುದು. ಹಾಗೆಯೇ ಅಕ್ಷರ್ ಪಟೇಲ್ ಪ್ಲೇಯಿಂಗ್ ಇಲೆವೆನ್ನಿಂದ ಹೊರಬೀಳಲಿದ್ದು, ರವೀಂದ್ರ ಜಡೇಜಾ ಅವಕಾಶ ಪಡೆಯಲಿದ್ದಾರೆ. ಆದರೆ ರಿಷಭ್ ಪಂತ್ ಸ್ಥಾನ ಪಡೆಯಬೇಕಿದ್ದರೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಬೇಕಾಗಿ ಬರಬಹುದು. ಅದರಲ್ಲೂ ಆರಂಭಿಕ ಜೋಡಿಯನ್ನು ಬದಲಿಸಬೇಕಾಗುತ್ತದೆ.
ಅಂದರೆ ಇಶಾನ್ ಕಿಶನ್ ಅವರನ್ನು ಹೊರಗಿಟ್ಟು ರಿಷಭ್ ಪಂತ್ಗೆ ಸ್ಥಾನ ನೀಡಬೇಕಾಗುತ್ತದೆ. ಈಗಾಗಲೇ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ವಾಸಿಂ ಜಾಫರ್, ಪಾರ್ಥೀವ್ ಪಟೇಲ್, ಸುನಿಲ್ ಗವಾಸ್ಕರ್ ಸೇರಿದಂತೆ ಪ್ರಮುಖರು ರಿಷಭ್ ಪಂತ್ ಅವರನ್ನು ಆರಂಭಿಕರಾಗಿ ಆಡಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಇಂತಹದೊಂದು ಬದಲಾವಣೆಗೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಮುಂದಾಗಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಒಂದು ವೇಳೆ ಇಂತಹದೊಂದು ಬದಲಾವಣೆ ಮಾಡಿದ್ರೆ, ಟೀಮ್ ಇಂಡಿಯಾದಲ್ಲಿ ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಇಬ್ಬರೂ ಆಡಬಹುದು. ಇಲ್ಲಿದಿದ್ದರೆ ದಿನೇಶ್ ಕಾರ್ತಿಕ್ ತಂಡದಿಂದ ಹೊರಗುಳಿಯಬೇಕಾಗಿ ಬರಬಹುದು. ಇತ್ತ ಡಿಕೆ ಕೂಡ ಉತ್ತಮ ಫಾರ್ಮ್ನಲ್ಲಿದ್ದು, ಹೀಗಾಗಿ ತಂಡದಿಂದ ಕೈಬಿಡುವುದು ಕೂಡ ಕಷ್ಟಸಾಧ್ಯ.
ಇದೇ ಕಾರಣದಿಂದಾಗಿ ಟೀಮ್ ಇಂಡಿಯಾ ಆರಂಭಿಕನನ್ನು ಬದಲಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಏಕೆಂದರೆ ಕಳೆದ ಪಂದ್ಯದಲ್ಲಿ ಇಶಾನ್ ಕಿಶನ್ ವಿಫಲರಾಗಿದ್ದರು. ಇತ್ತ ಎಡ್ಜ್ಬಾಸ್ಟನ್ ಟೆಸ್ಟ್ನಲ್ಲಿ ರಿಷಭ್ ಪಂತ್ ಭರ್ಜರಿ ಶತಕ ಹಾಗೂ ಅರ್ಧಶತಕ ಬಾರಿಸಿ ಮಿಂಚಿದ್ದರು. ಇದೀಗ ಅದೇ ಮೈದಾನದಲ್ಲಿ 2ನೇ ಟಿ20 ಪಂದ್ಯ ನಡೆಯಲಿದೆ. ಹೀಗಾಗಿಯೇ ರಿಷಭ್ ಪಂತ್ರನ್ನು ಆರಂಭಿಕರಾಗಿ ಕಣಕ್ಕಿಳಿಸಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಟೀಮ್ ಇಂಡಿಯಾ ಇಂತಹದೊಂದು ಮಹತ್ವದ ಬದಲಾವಣೆ ಮಾಡಿದರೆ ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯಬಹುದು. ಇಲ್ಲದಿದ್ದರೆ ಇಬ್ಬರಲ್ಲಿ ಒಬ್ಬರು ಹೊರಗುಳಿಯಬೇಕಾದ ಅನಿವಾರ್ಯತೆ ಬರಲಿದೆ.
ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್