ನಾಯಕತ್ವ ಹೋದರೆ ವಿರಾಟ್ ಕೊಹ್ಲಿ (Virat Kohli)ಗೆ ಬೆಲೆ ಇಲ್ಲ ಎಂದು ಹೇಳಿದ್ಯಾರು? ಟೀಮ್ ಇಂಡಿಯಾದಲ್ಲಿ ಅವರ ಪ್ರಬಲ ಉಪಸ್ಥಿತಿ ಎಂದಿಗೂ ಕೊನೆಯಾಗುವುದಿಲ್ಲ ಎಂಬುದಕ್ಕೆ ಇಂಗ್ಲೆಂಡ್ ಸರಣಿಯೇ ಸಾಕ್ಷಿಯಾಗಿದೆ. ಇದಕ್ಕೆ ಸೂಕ್ತವೆಂಬಂತೆ ಲೀಸೆಸ್ಟರ್‌ಶೈರ್ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮೊದಲು ಕೊಹ್ಲಿ ತನ್ನ ಪ್ರಾಮುಖ್ಯತೆಯನ್ನು ಸಾಭೀತು ಮಾಡಿದ್ದಾರೆ. ಅಭ್ಯಾಸ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಟೀಂ ಇಂಡಿಯಾದಲ್ಲಿ ಉತ್ಸಾಹ ತುಂಬುವ ಕೆಲಸ ಮಾಡಿದ್ದಾರೆ. ಅಭ್ಯಾಸದ ವೇಳೆ ರೋಹಿತ್ ಶರ್ಮಾ (Rohit Sharma) ಏನು ಮಾಡಬೇಕೋ ಅದನ್ನು ಕೊಹ್ಲಿ ಮಾಡಿದ್ದಾರೆ. ಜುಲೈ 1 ರಿಂದ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವ ವಹಿಸುವುದಿಲ್ಲ ಎಂಬುದನ್ನು ಈ ವಿಡಿಯೋ ಸೂಚಿಸುತ್ತಿದೆ.
ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ವಿಜಯದ ಧ್ವಜ ಹಾರಿಸಿತ್ತು. ಹೀಗಾಗಿ ಭಾರತ ತಂಡ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಕೊನೆಯ ಟೆಸ್ಟ್ ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ನಡೆಯಬೇಕಿತ್ತು. ಆದರೆ ಟೀಂ ಇಂಡಿಯಾದಲ್ಲಿನ ಕೊರೊನಾ ಪ್ರಕರಣಗಳಿಂದಾಗಿ ಪಂದ್ಯವನ್ನು ಮುಂದೂಡಬೇಕಾಯಿತು. ವಿರಾಟ್ ನಾಯಕತ್ವದಲ್ಲಿ ಆಡಿದ ಅದೇ ಸರಣಿಯ ಉಳಿದಿರುವ ಏಕೈಕ ಟೆಸ್ಟ್ ಈಗ ನಡೆಯುತ್ತಿದೆ. ಆದರೆ, ಈ ಮಧ್ಯೆ ವಿರಾಟ್ ಕೊಹ್ಲಿ ಕೈಯಿಂದ ಟೀಂ ಇಂಡಿಯಾ ನಾಯಕತ್ವವನ್ನು ರೋಹಿತ್ ಶರ್ಮಾಗೆ ಹಸ್ತಾಂತರಿಸುವ ದೊಡ್ಡ ಬದಲಾವಣೆಯಾಗಿದೆ.
ರೋಹಿತ್ ನಾಯಕತ್ವ ವಹಿಸಿಕೊಂಡ ವಿರಾಟ್!
ಪ್ರಸಕ್ತ ಪ್ರವಾಸದಲ್ಲಿ ಟೀಂ ಇಂಡಿಯಾ ಏಕೈಕ ಟೆಸ್ಟ್ ಪಂದ್ಯಕ್ಕೂ ಮುನ್ನ ಅಭ್ಯಾಸ ಪಂದ್ಯ ಆಡಬೇಕಿದೆ. ಈ ಪಂದ್ಯ ಲೀಸೆಸ್ಟರ್‌ಶೈರ್ ವಿರುದ್ಧ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಭಾರತ ತಂಡದ ಅಭ್ಯಾಸದ ಚಿತ್ರಣ ಬೆರಗು ಮೂಡಿಸಿತ್ತು. ಈ ಚಿತ್ರಗಳಲ್ಲಿ ನಾಯಕ ರೋಹಿತ್ ಶರ್ಮಾ ಅವರ ಕೆಲಸವನ್ನು ವಿರಾಟ್ ಕೊಹ್ಲಿ ಮಾಡುತ್ತಿರುವುದು ಕಂಡುಬಂದಿದೆ. ಅವರು ತಮ್ಮ ಮಾತುಗಳಿಂದ ತಂಡಕ್ಕೆ ಶಕ್ತಿ ತುಂಬುತ್ತಿದ್ದರು.
ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳಾಪಟ್ಟಿ ಹೀಗಿದೆ:
ಜುಲೈ 1 – 5: ಏಕೈಕ ಟೆಸ್ಟ್ ಪಂದ್ಯ (ಎಡ್ಜ್‌ಬಾಸ್ಟನ್)
ಜುಲೈ 7: ಮೊದಲ ಟಿ20 ಪಂದ್ಯ (ಏಜಿಯಾಸ್ ಬೌಲ್)
ಜುಲೈ 9: 2ನೇ ಟಿ20 ಪಂದ್ಯ (ಎಡ್ಜ್‌ಬಾಸ್ಟನ್)
ಜುಲೈ 10: 3ನೇ ಟಿ20 ಪಂದ್ಯ (ಟ್ರೆಂಟ್ ಬ್ರಿಡ್ಜ್)
ಏಕದಿನ ಸರಣಿ ವೇಳಾಪಟ್ಟಿ:
ಜುಲೈ 12- ಮೊದಲ ಏಕದಿನ ಪಂದ್ಯ (ಕಿಯಾ ಓವಲ್)
ಜುಲೈ 14- 2ನೇ ಏಕದಿನ ಪಂದ್ಯ (ಲಾರ್ಡ್ಸ್)
ಜುಲೈ 17- 3ನೇ ಏಕದಿನ ಪಂದ್ಯ (ಮ್ಯಾಂಚೆಸ್ಟರ್)
ಭಾರತೀಯ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಪ್ರಸಿಧ್ದ್ ಕೃಷ್ಣ.
Published On - 12:28 pm, Wed, 22 June 22