ENG vs IRE: ಬಲಿಷ್ಠ ಇಂಗ್ಲೆಂಡ್​ಗೆ ಮತ್ತೊಂದು ಸೋಲಿನ ಶಾಕ್ ನೀಡಿದ ಐರ್ಲೆಂಡ್‌

ENG vs IRE: ಐರ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ಕೂಡ ಸಂಚಲನ ಮೂಡಿಸಲು ಆರಂಭಿಸಿದ್ದು, 5 ದಿನಗಳ ಅಂತರದಲ್ಲಿ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧ ಎರಡನೇ ಬಾರಿಗೆ ಸ್ಮರಣೀಯ ಗೆಲುವು ದಾಖಲಿಸಿದೆ. ಈ ಮೊದಲು ಸುಮಾರು 23 ವರ್ಷಗಳ ನಂತರ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಐರ್ಲೆಂಡ್ ಇದೀಗ ಮೊದಲ ಬಾರಿಗೆ ಇಂಗ್ಲೆಂಡ್ ವಿರುದ್ಧ ಟಿ20 ಪಂದ್ಯವನ್ನು ಗೆದ್ದುಕೊಂಡಿದೆ.

ENG vs IRE: ಬಲಿಷ್ಠ ಇಂಗ್ಲೆಂಡ್​ಗೆ ಮತ್ತೊಂದು ಸೋಲಿನ ಶಾಕ್ ನೀಡಿದ ಐರ್ಲೆಂಡ್‌
ಐರ್ಲೆಂಡ್ ವನಿತಾ ಪಡೆ
Follow us
ಪೃಥ್ವಿಶಂಕರ
|

Updated on:Sep 16, 2024 | 2:51 PM

ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಲೋಕದಲ್ಲಿ ಕೆಲವು ಅಚ್ಚರಿಯ ಪಲಿತಾಂಶಗಳು ಹೊರಬೀಳುತ್ತಿವೆ. ಟಿ20 ವಿಶ್ವಕಪ್‌ನಲ್ಲಿ ದುರ್ಬಲ ಅಮೆರಿಕ ತಂಡ, ಬಲಿಷ್ಠ ಪಾಕಿಸ್ತಾನವನ್ನು ಸೋಲಿಸಿದರೆ, ಅಫ್ಘಾನಿಸ್ತಾನ ತಂಡ, ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಆ ನಂತರ ಮಹಿಳಾ ಏಷ್ಯಾಕಪ್‌ನ ಫೈನಲ್‌ನಲ್ಲಿ ಶ್ರೀಲಂಕಾ ತಂಡ, ಟೀಂ ಇಂಡಿಯಾವನ್ನು ಮಣಿಸಿತ್ತು. ಕಳೆದ ವಾರವಷ್ಟೇ ಪಾಕಿಸ್ತಾನದಲ್ಲಿ ಅಚ್ಚರಿಯ ಪ್ರದರ್ಶನ ನೀಡುವ ಮೂಲಕ ಬಾಂಗ್ಲಾದೇಶ ಮೊದಲ ಬಾರಿಗೆ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡಿತ್ತು. ಇದೆಲ್ಲದರ ನಡುವೆ ಇದೀಗ ಐರ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ಕೂಡ ಸಂಚಲನ ಮೂಡಿಸಲು ಆರಂಭಿಸಿದ್ದು, 5 ದಿನಗಳ ಅಂತರದಲ್ಲಿ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧ ಎರಡನೇ ಬಾರಿಗೆ ಸ್ಮರಣೀಯ ಗೆಲುವು ದಾಖಲಿಸಿದೆ. ಈ ಮೊದಲು ಸುಮಾರು 23 ವರ್ಷಗಳ ನಂತರ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಐರ್ಲೆಂಡ್ ಇದೀಗ ಮೊದಲ ಬಾರಿಗೆ ಇಂಗ್ಲೆಂಡ್ ವಿರುದ್ಧ ಟಿ20 ಪಂದ್ಯವನ್ನು ಗೆದ್ದುಕೊಂಡಿದೆ.

5 ದಿನದೊಳಗೆ 2ನೇ ಗೆಲುವು

ಕಳೆದ ಕೆಲವು ದಿನಗಳಿಂದ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ಐರ್ಲೆಂಡ್ ಪ್ರವಾಸದಲ್ಲಿದ್ದು, ಉಭಯ ತಂಡಗಳ ನಡುವೆ ಏಕದಿನ ಹಾಗೂ ಟಿ20 ಸರಣಿಯುತ್ತಿದೆ. ಮೊದಲು ನಡೆದ ಏಕದಿನ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಇಂಗ್ಲೆಂಡ್ ಏಕದಿನ ಸರಣಿಯನ್ನು ಗೆದ್ದುಕೊಂಡಿತ್ತು. ಆದರೆ ಸೆಪ್ಟೆಂಬರ್ 11 ರಂದು ನಡೆದ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಐರ್ಲೆಂಡ್ ತಂಡ ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡವನ್ನು 3 ವಿಕೆಟ್‌ಗಳಿಂದ ಸೋಲಿಸಿತು. ಈ ಮೂಲಕ 2001ರ ನಂತರ ಮೊದಲ ಬಾರಿಗೆ ಐರ್ಲೆಂಡ್ ಮಹಿಳಾ ತಂಡ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಇದೀಗ 4 ದಿನಗಳ ಬಳಿಕ ಅದೇ ತಂಡ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು ಮಣಿಸಿದೆ.

ಬೌಲರ್‌ಗಳ ಮೇಲುಗೈ

ಸೆಪ್ಟೆಂಬರ್ 15ರ ಭಾನುವಾರ ಬೆಲ್‌ಫಾಸ್ಟ್‌ನಲ್ಲಿ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಐರ್ಲೆಂಡ್ 5 ವಿಕೆಟ್‌ಗಳಿಂದ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿತು. ಇಂಗ್ಲೆಂಡ್ ಪರ, ಅನುಭವಿ ಓಪನರ್ ಟಮ್ಮಿ ಬ್ಯೂಮಾಂಟ್ 34 ಎಸೆತಗಳಲ್ಲಿ 40 ರನ್ ಗಳಿಸಿದರೆ, ನಾಲ್ಕನೇ ಕ್ರಮಾಂಕದಲ್ಲಿ ಬಂದ ಪೈಜ್ ಸ್ಕೋಫೀಲ್ಡ್ ಕೇವಲ 21 ಎಸೆತಗಳಲ್ಲಿ 3 ಬೌಂಡರಿ ಮತ್ತು ಒಂದು ಸಿಕ್ಸರ್ ಸಹಿತ 34 ರನ್ ಗಳಿಸಿದರು. ಅವರಲ್ಲದೆ, ಜಾರ್ಜಿಯಾ ಆಡಮ್ಸ್ ಕೂಡ 15 ಎಸೆತಗಳಲ್ಲಿ 23 ರನ್ ಗಳಿಸಿದರು. ಐರ್ಲೆಂಡ್ ಪರ ಬೌಲಿಂಗ್‌ನಲ್ಲಿ ಮಿಂಚಿದ ಪ್ರೆಂಡರ್‌ಗಾಸ್ಟ್ 31 ರನ್‌ಗಳಿಗೆ 2 ವಿಕೆಟ್ ಪಡೆದರೆ, ಏಕದಿನ ಪಂದ್ಯದ ಗೆಲುವಿನ ತಾರೆ ಆಮಿ ಮ್ಯಾಗೈರ್ ಕೂಡ 2 ವಿಕೆಟ್ ಪಡೆದರು.

ಪ್ರೆಂಡರ್‌ಗಾಸ್ಟ್ ಆಟಕ್ಕೆ ಒಲಿದ ಜಯ

ಬೌಲಿಂಗ್‌ನಲ್ಲಿ 2 ವಿಕೆಟ್ ಉರುಳಿಸಿದ್ದ 22 ವರ್ಷದ ಆಲ್‌ರೌಂಡರ್ ಪ್ರೆಂಡರ್‌ಗಾಸ್ಟ್ ಬ್ಯಾಟಿಂಗ್‌ನಲ್ಲೂ ಕಮಾಲ್ ಮಾಡಿದರು. ಮೊದಲ ಓವರ್​ನಲ್ಲೇ​ ವಿಕೆಟ್ ಪತನಗೊಂಡ ಬಳಿಕ ಕ್ರೀಸ್​ಗೆ ಬಂದ ಪ್ರೆಂಡರ್ ಗ್ಯಾಸ್ಟ್, ಇಂಗ್ಲೆಂಡ್ ಬೌಲಿಂಗ್ ಮೇಲೆ ದಾಳಿ ನಡೆಸಿದರು. ಈ ಬ್ಯಾಟರ್ ಕೇವಲ 51 ಎಸೆತಗಳಲ್ಲಿ 80 ರನ್ ಗಳಿಸಿ ತಂಡವನ್ನು ಗೆಲುವಿನ ಸಮೀಪಕ್ಕೆ ತಂದರು. 19ನೇ ಓವರ್‌ನ ಕೊನೆಯ ಎಸೆತದಲ್ಲಿ ಪ್ರೆಂಡರ್‌ಗಾಸ್ಟ್ ಔಟಾಗುವುದಕ್ಕೂ ಮುನ್ನ 13 ಬೌಂಡರಿಗಳನ್ನು ಬಾರಿಸಿದ್ದರು. ಇವರಲ್ಲದೆ ನಾಯಕಿ ಗ್ಯಾಬಿ ಲೂಯಿಸ್ ಕೂಡ 35 ಎಸೆತಗಳಲ್ಲಿ 38 ರನ್ ಬಾರಿಸಿ ತಂಡದ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದರು.

ಕೊನೆಯ ಓವರ್‌ನಲ್ಲಿ ಐರ್ಲೆಂಡ್‌ ಗೆಲುವಿಗೆ 7 ರನ್‌ಗಳ ಅಗತ್ಯವಿತ್ತು. 20ನೇ ಓವರ್​ನ ಮೊದಲ ಎಸೆತದಲ್ಲಿ ಐರ್ಲೆಂಡ್ ಬ್ಯಾಟರ್ 1 ರನ್ ಮತ್ತು ಎರಡನೇ ಎಸೆತದಲ್ಲಿ ಬೌಂಡರಿ ಕಲೆಹಾಕಿದರು. ಆದರೆ ಇಲ್ಲಿ ತಮ್ಮ ಚಮತ್ಕಾರ ತೋರಿದ ಇಂಗ್ಲೆಂಡ್‌ ಬೌಲರ್ ಮ್ಯಾಡಿ ವಿಲಿಯರ್ಸ್ ನಂತರದ 2 ಎಸೆತಗಳಲ್ಲಿ 2 ವಿಕೆಟ್ ಪಡೆದರು. ಅಂತಿಮವಾಗಿ ಐರ್ಲೆಂಡ್ ಗೆಲುವಿಗೆ 2 ಎಸೆತಗಳಲ್ಲಿ 2 ರನ್‌ಗಳ ಅಗತ್ಯವಿತ್ತು. ಈ ವೇಳೆ ಸ್ಟ್ರೈಕ್​ನಲ್ಲಿದ್ದ ಕ್ರಿಸ್ಟಿನಾ ಕೌಲ್ಟರ್ ಒಂದೇ ಎಸೆತದಲ್ಲಿ 2 ರನ್ ಗಳಿಸಿ ತಂಡಕ್ಕೆ ಐತಿಹಾಸಿಕ ಜಯ ತಂದುಕೊಟ್ಟರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Mon, 16 September 24

ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ