AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ 5 ಬದಲಾವಣೆ..!

England and New Zealand 2nd Test: ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಇಂದಿನಿಂದ (ಜೂ.17) ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಐದು ಬದಲಾವಣೆ ಮಾಡಿರುವುದು ವಿಶೇಷ.

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ 5 ಬದಲಾವಣೆ..!
EnglandImage Credit source: GettyImages
ಝಾಹಿರ್ ಯೂಸುಫ್
|

Updated on: Jun 17, 2026 | 9:39 AM

Share

ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಐದು ಬದಲಾವಣೆಗಳನ್ನು ಮಾಡಲಾಗಿದೆ. ಈ ಬದಲಾವಣೆಯೊಂದಿಗೆ ಮೂವರು ಆಟಗಾರರು ಇಂಗ್ಲೆಂಡ್ ಪರ ಪಾದಾರ್ಪಣೆ ಮಾಡಲಿದ್ದಾರೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 115 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ಬಳಿಕ ನಡೆದ ಹೈ ಡ್ರಾಮಾದಿಂದಾಗಿ ಇದೀಗ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬಂದಿದೆ.

ಇಷ್ಟೊಂದು ಬದಲಾವಣೆ ಯಾಕೆ?

ಶಿಸ್ತು ಉಲ್ಲಂಘನೆ, ಗಾಯ ಹಾಗೂ ಪಿತೃತ್ವ ರಜೆಯ ಕಾರಣದಿಂದಾಗಿ ಲಾರ್ಡ್ಸ್ ಟೆಸ್ಟ್ ಗೆದ್ದ ತಂಡದಲ್ಲಿದ್ದ ಐದು ಪ್ರಮುಖ ಆಟಗಾರರು ಇಂಗ್ಲೆಂಡ್ ತಂಡದಿಂದ ಹೊರಬಿದ್ದಿದ್ದಾರೆ.

ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮತ್ತು ಪ್ರಮುಖ ವೇಗಿ ಗಸ್ ಅಟ್ಕಿನ್ಸನ್ ಇಬ್ಬರನ್ನೂ ತಂಡದ ನಿಯಮಾವಳಿಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಈ ಪಂದ್ಯದಿಂದ ಕೈಬಿಡಲಾಗಿದೆ. ಈ ಇಬ್ಬರು ಆಟಗಾರರು ಮಧ್ಯರಾತ್ರಿಯ ಕರ್ಫ್ಯೂ ನಿಯಮ ಮೀರಿ ಪಬ್​ನಲ್ಲಿ ಪಾರ್ಟಿ ಮಾಡಿದ್ದರು. ಹೀಗಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಇವರ ಮೇಲೆ ಕಠಿಣ ಶಿಸ್ತು ಕ್ರಮ ಜರುಗಿಸಿದೆ.

ಇನ್ನು ಮೊದಲ ಪಂದ್ಯದಲ್ಲಿ ಅದ್ಭುತವಾಗಿ ಆಡಿದ್ದ ವಿಕೆಟ್‌ಕೀಪರ್-ಬ್ಯಾಟರ್ ಜೇಮಿ ಸ್ಮಿತ್ ಅವರ ಪತ್ನಿ ಮಂಗಳವಾರವಷ್ಟೇ ಮಗುವಿಗೆ ಜನ್ಮ ನೀಡಿದ್ದಾರೆ. ಹಾಗಾಗಿ ಅವರು ಪಿತೃತ್ವ ರಜೆಯ ಮೇರೆಗೆ ತವರಿಗೆ ಮರಳಿದ್ದಾರೆ.

ಹಾಗೆಯೇ ಮೊದಲ ಪಂದ್ಯದಲ್ಲಿ ಮಿಂಚಿನ ದಾಳಿ ಸಂಘಟಿಸಿದ್ದ ಒಲ್ಲಿ ರಾಬಿನ್ಸನ್ ಮಂಡಿ ನೋವಿನಿಂದ ಬಳಲುತ್ತಿರುವುದರಿಂದ ವಿಶ್ರಾಂತಿ ನೀಡಲಾಗಿದೆ.

ಮತ್ತೊಂದೆಡೆ ಕೆನ್ನಿಂಗ್ಟನ್ ಓವಲ್ ಮೈದಾನದ ಪಿಚ್ ಸಂಪೂರ್ಣವಾಗಿ ವೇಗದ ಬೌಲಿಂಗ್‌ಗೆ ಹೆಚ್ಚು ಸಹಕಾರಿಯಾಗಿರುವ ಕಾರಣ ತಂಡದಲ್ಲಿದ್ದ ಏಕೈಕ ಸ್ಪಿನ್ನರ್  ಬಶೀರ್ ಅವರನ್ನು ಆಡುವ ಬಳಗದಿಂದ ಕೈಬಿಡಲಾಗಿದೆ.

ಬದಲಿ ಆಟಗಾರರು ಯಾರು?

ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಇಂಗ್ಲೆಂಡ್ ಪರ ಐವರು ಆಟಗಾರರು ಕಣಕ್ಕಿಳಿಯಲಿದ್ದಾರೆ. ಅಂದರೆ ಮೊದಲ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳದ 5 ಆಟಗಾರರು ಈ ಬಾರಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಆ ಆಟಗಾರರು ಯಾರೆಂದರೆ…

  • ಜೋರ್ಡನ್ ಕಾಕ್ಸ್ (ವಿಕೆಟ್ ಕೀಪರ್ ಬ್ಯಾಟರ್)
  • ಸನ್ನಿ ಬೇಕರ್ (ವೇಗದ ಬೌಲರ್)
  • ಜೇಮ್ಸ್ ರೀವ್ (ವಿಕೆಟ್ ಕೀಪರ್ ಬ್ಯಾಟರ್)
  • ಜೋಫ್ರಾ ಆರ್ಚರ್ (ವೇಗದ ಬೌಲರ್​)
  • ಮ್ಯಾಥ್ಯೂ ಫಿಶರ್ (ವೇಗದ ಬೌಲರ್)

ಜೋ ರೂಟ್ ಹೆಗಲಿಗೆ ನಾಯಕತ್ವ:

ಈ ಪಂದ್ಯದಿಂದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಅಮಾನತಾಗಿರುವ ಹಿನ್ನೆಲೆಯಲ್ಲಿ ಅನುಭವಿ ಆಟಗಾರ ಜೋ ರೂಟ್ ಹಂಗಾಮಿ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಹೀಗಾಗಿ ತಂಡದ ಸಂಪೂರ್ಣ ಜವಾಬ್ದಾರಿ ರೂಟ್ ಹೆಗಲೇರಲಿದೆ. ಏಕೆಂದರೆ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿರುವ ಆಟಗಾರರ ಒಟ್ಟು ಟೆಸ್ಟ್ ಅನುಭವ 281 ಪಂದ್ಯಗಳು ಮಾತ್ರ. ಇದರಲ್ಲಿ ಜೋ ರೂಟ್ ಒಬ್ಬರದ್ದೇ 164 ಪಂದ್ಯಗಳಿವೆ. ಅಂದರೆ ಇಂಗ್ಲೆಂಡ್ ತಂಡವು ಅನಾನುಭವಿ ಬಳಗದೊಂದಿಗೆ ನ್ಯೂಝಿಲೆಂಡ್ ತಂಡವನ್ನು ಎದುರಿಸಲು ಸಜ್ಜಾಗಿದೆ.

ಇದನ್ನೂ ಓದಿ: ಗೋಲುಗಳ ಮೇಲೆ ಗೋಲು… ವಿಶ್ವ ದಾಖಲೆ ಸರಿಗಟ್ಟಿದ ಮೆಸ್ಸಿ..!

ಇಂಗ್ಲೆಂಡ್ ಪ್ಲೇಯಿಂಗ್ 11: ಬೆನ್ ಡಕೆಟ್, ಎಮಿಲಿಯೊ ಗೇ, ಜೇಕಬ್ ಬೆಥೆಲ್, ಜೋ  ರೂಟ್ (ನಾಯಕ) ಹ್ಯಾರಿ ಬ್ರೂಕ್, ಜೇಮ್ಸ್ ರೀವ್ (ವಿಕೆಟ್‌ಕೀಪರ್), ಜೋರ್ಡನ್ ಕಾಕ್ಸ್, ಜೋಫ್ರಾ ಆರ್ಚರ್, ಮ್ಯಾಥ್ಯೂ ಫಿಶರ್, ಸನ್ನಿ ಬೇಕರ್, ಜೋಶ್ ಟಂಗ್.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ