ENG vs NZ Playing XI: ಇಬ್ಬರು ಸ್ಟಾರ್ ಆಟಗಾರರು ಅಲಭ್ಯ: ಹೀಗಿದೆ ಪ್ಲೇಯಿಂಗ್ ಇಲೆವೆನ್
ICC Men’s ODI world cup England vs New Zealand Playing XI: ಏಕದಿನ ಕ್ರಿಕೆಟ್ನಲ್ಲಿ ಉಭಯ ತಂಡಗಳು 95 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಇಂಗ್ಲೆಂಡ್ 45 ಬಾರಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 44 ಮ್ಯಾಚ್ಗಳಲ್ಲಿ ಗೆಲುವು ಸಾಧಿಸಿದೆ. ಇನ್ನು 2 ಪಂದ್ಯ ಟೈ ಆದರೆ, 4 ಮ್ಯಾಚ್ಗಳು ರದ್ದಾಗಿದೆ.
ಏಕದಿನ ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡದ ಹಂಗಾಮಿ ನಾಯಕ ಟಾಮ್ ಲಾಥಮ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಇನ್ನು ಫಿಟ್ನೆಸ್ ಸಮಸ್ಯೆಯ ಕಾರಣ ಈ ಪಂದ್ಯದಿಂದ ನ್ಯೂಝಿಲೆಂಡ್ ಕ್ಯಾಪ್ಟನ್ ಕೇನ್ ವಿಲಿಯಮ್ಸನ್ ಹೊರಗುಳಿದಿದ್ದಾರೆ. ಹಾಗೆಯೇ ಗಾಯದಿಂದ ಬಳಲುತ್ತಿರುವ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಕೂಡ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
Two of the finest white ball cricketers in the world face up in the @MRFWorldwide key battles ⚔️
Who will have the bigger impact in the #CWC23 opener? 🤔 pic.twitter.com/6uxUAJ4UhP
— ICC Cricket World Cup (@cricketworldcup) October 5, 2023
ಮುಖಾಮುಖಿ ಅಂಕಿ ಅಂಶಗಳು:
ಏಕದಿನ ಕ್ರಿಕೆಟ್ನಲ್ಲಿ ಉಭಯ ತಂಡಗಳು 95 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಇಂಗ್ಲೆಂಡ್ 45 ಬಾರಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 44 ಮ್ಯಾಚ್ಗಳಲ್ಲಿ ಗೆಲುವು ಸಾಧಿಸಿದೆ. ಇನ್ನು 2 ಪಂದ್ಯ ಟೈ ಆದರೆ, 4 ಮ್ಯಾಚ್ಗಳು ರದ್ದಾಗಿದೆ.
ಈ ಬಾರಿ ಉಭಯ ತಂಡಗಳು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗುತ್ತಿರುವುದು ವಿಶೇಷ. ಈ ಮೈದಾನದಲ್ಲಿ ಇಂಗ್ಲೆಂಡ್ 2 ಪಂದ್ಯಗಳನ್ನಾಡಿದೆ. ಇದರಲ್ಲಿ ಗೆದ್ದಿರುವುದು 1 ಮ್ಯಾಚ್ ಮಾತ್ರ.
ಇನ್ನು ಇದೇ ಮೈದಾನದಲ್ಲಿ ನ್ಯೂಝಿಲೆಂಡ್ ಆಡಿದ 2 ಪಂದ್ಯಗಳನ್ನೂ ಕೂಡ ಗೆದ್ದುಕೊಂಡಿದೆ. ಹೀಗಾಗಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಇಂಗ್ಲೆಂಡ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯೀನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್.
ಇದನ್ನೂ ಓದಿ: ICC World Cup 2023 Schedule: ಏಕದಿನ ವಿಶ್ವಕಪ್ನ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
ನ್ಯೂಝಿಲೆಂಡ್ (ಪ್ಲೇಯಿಂಗ್ XI): ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮ್ಯಾಟ್ ಹೆನ್ರಿ, ಮಿಚೆಲ್ ಸ್ಯಾಂಟ್ನರ್, ಜೇಮ್ಸ್ ನೀಶಮ್, ಟ್ರೆಂಟ್ ಬೌಲ್ಟ್.