ENG vs PAK: ಪಾಕ್ ವಿರುದ್ಧದ 2ನೇ ಟೆಸ್ಟ್‌ಗೆ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್; ತಂಡದಲ್ಲಿ 2 ಬದಲಾವಣೆ
ENG vs PAK: ಮೂರು ಪಂದ್ಯಗಳ ಟೆಸ್ಟ್ ಸರಣಿಗಾಗಿ ಪಾಕಿಸ್ತಾನ ಪ್ರವಾಸ ಮಾಡಿರುವ ಇಂಗ್ಲೆಂಡ್ ತಂಡ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮುಲ್ತಾನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಇನ್ನಿಂಗ್ಸ್ ಗೆಲುವು ಸಾಧಿಸಿತ್ತು. ಇದೀಗ ಉಭಯ ತಂಡಗಳ ನಡುವೆ ಅದೇ ಮೈದಾನದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲ್ಲಿದ್ದು, ಈ ಪಂದ್ಯಕ್ಕಾಗಿ ಇದೀಗ ಇಂಗ್ಲೆಂಡ್ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ.
ಮೂರು ಪಂದ್ಯಗಳ ಟೆಸ್ಟ್ ಸರಣಿಗಾಗಿ ಪಾಕಿಸ್ತಾನ ಪ್ರವಾಸ ಮಾಡಿರುವ ಇಂಗ್ಲೆಂಡ್ ತಂಡ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮುಲ್ತಾನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಇನ್ನಿಂಗ್ಸ್ ಗೆಲುವು ಸಾಧಿಸಿತ್ತು. ಇದೀಗ ಉಭಯ ತಂಡಗಳ ನಡುವೆ ಅದೇ ಮೈದಾನದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲ್ಲಿದ್ದು, ಈ ಪಂದ್ಯಕ್ಕಾಗಿ ಇದೀಗ ಇಂಗ್ಲೆಂಡ್ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡದಲ್ಲಿ ಆಂಗ್ಲ ಪಡೆ ಎರಡು ಬದಲಾವಣೆಗಳನ್ನು ಮಾಡಿದ್ದು, ಅದರಂತೆ ತಂಡದ ಅನುಭವಿ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಈ ತಂಡಕ್ಕೆ ಮರಳಿದ್ದಾರೆ. ಅವರೊಂದಿಗೆ ಮ್ಯಾಟ್ ಪಾಟ್ಸ್ ಕೂಡ ಪ್ಲೇಯಿಂಗ್ 11 ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಆಗಸ್ಟ್ನಲ್ಲಿ ಮಂಡಿರಜ್ಜು ಗಾಯಕ್ಕೆ ತುತ್ತಾಗಿ ತಂಡದಿಂದ ಹೊರಬಿದ್ದಿದ್ದ ಸ್ಟೋಕ್ಸ್ ಇದುವರೆಗೆ ನಾಲ್ಕು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದರು. ಆದರೆ ಚೇತರಿಸಿಕೊಂಡು ತಂಡಕ್ಕೆ ವಾಪಸ್ಸಾಗಿರುವ ಸ್ಟೋಕ್ಸ್ ಮತ್ತೊಮ್ಮೆ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಸ್ಟೋಕ್ಸ್ ಅನುಪಸ್ಥಿತಿಯಲ್ಲಿ ಓಲಿ ಪೋಪ್ ತಂಡವನ್ನು ಮುನ್ನಡೆಸಿದ್ದರು. ಇನ್ನು ಮೊದಲ ಟೆಸ್ಟ್ ಪಂದ್ಯದಲ್ಲಿದ್ದ ವೇಗದ ಬೌಲರ್‌ಗಳಾದ ಕ್ರಿಸ್ ವೋಕ್ಸ್ ಮತ್ತು ಗಸ್ ಅಟ್ಕಿನ್ಸನ್ ಎರಡನೇ ಟೆಸ್ಟ್ನಿಂದ ಹೊರಬಿದ್ದಿದ್ದಾರೆ.
ಎರಡನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ: ಜಾಕ್ ಕ್ರೌಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ಜೇಮೀ ಸ್ಮಿತ್, ಬ್ರೈಡನ್ ಕಾರ್ಸೆ, ಮ್ಯಾಟ್ ಪಾಟ್ಸ್, ಜಾಕ್ ಲೀಚ್, ಶೋಯೆಬ್ ಬಶೀರ್.
⬅️ Gus Atkinson ⬅️ Chris Woakes
➡️ Matt Potts ➡️ Ben Stokes
Full focus on securing the series win 👊 pic.twitter.com/wUU8gD6q4g
— England Cricket (@englandcricket) October 14, 2024
ಪಾಕ್ ತಂಡದಲ್ಲಿ ಸಾಕಷ್ಟು ಬದಲಾವಣೆ
ಇತ್ತ ಇಂಗ್ಲೆಂಡ್ ವಿರುದ್ಧ ಉಳಿದಿರುವ ಇನ್ನೇರಡು ಟೆಸ್ಟ್ ಪಂದ್ಯಗಳಿಗೆ ಆತಿಥೇಯ ಪಾಕಿಸ್ತಾನ ತಂಡವನ್ನು ಪ್ರಕಟಿಸಿದೆಯಾದರೂ, ಪ್ಲೇಯಿಂಗ್ 11 ನಲ್ಲಿ ಯಾರಿಗೆಲ್ಲ ಅವಕಾಶ ನೀಡಿದೆ ಎಂಬುದನ್ನು ಇದುವರೆಗೆ ಬಹಿರಂಗಪಡಿಸಿಲ್ಲ. ಉಳಿದಂತೆ ಎರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿರುವ ತಂಡದಲ್ಲಿ ಮಹತ್ವದ ಬದಲಾವಣೆಗಳನ್ನುನ ಮಾಡಿದ್ದು, ಸ್ಟಾರ್ ಆಟಗಾರರನ್ನೇ ತಂಡದಿಂದ ಹೊರಹಾಕಲಾಗಿದೆ. ಆ ಪ್ರಕಾರ ಕಳೆದ ಕೆಲವು ದಿನಗಳಿಂದ ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಮಾಜಿ ನಾಯಕ ಬಾಬರ್ ಆಝಂ, ಶಾಹೀನ್ ಆಫ್ರಿದಿ ಮತ್ತು ನಸೀಮ್ ಶಾ ಅವರಂತಹ ಆಟಗಾರರಿಗೆ ಗೇಟ್ ಪಾಸ್ ನೀಡಲಾಗಿದ್ದು, ಅವರ ಸ್ಥಾನದಲ್ಲಿ ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಅನ್ಕ್ಯಾಪ್ಡ್ ಆಟಗಾರರಿಗೆ ಅವಕಾಶ ನೀಡಲಾಗಿದೆ.
Pakistan name squad for 2nd and 3rd England Tests
Details here ➡️ https://t.co/vWp6IJeDkj#PAKvENG | #TestAtHome
— PCB Media (@TheRealPCBMedia) October 13, 2024
ಉಳಿದೆರಡು ಟೆಸ್ಟ್ ಪಂದ್ಯಗಳಿಗೆ ಪಾಕ್ ತಂಡ: ಶಾನ್ ಮಸೂದ್ (ನಾಯಕ), ಸೌದ್ ಶಕೀಲ್ (ಉಪನಾಯಕ), ಅಮೀರ್ ಜಮಾಲ್, ಅಬ್ದುಲ್ಲಾ ಶಫೀಕ್, ಹಸೀಬುಲ್ಲಾ, ಕಮ್ರಾನ್ ಗುಲಾಮ್, ಮೆಹ್ರಾನ್ ಮುಮ್ತಾಜ್, ಮೀರ್ ಹಮ್ಜಾ, ಮೊಹಮ್ಮದ್ ಅಲಿ, ಮೊಹಮ್ಮದ್ ಹುರೈರಾ, ಮೊಹಮ್ಮದ್ ರಿಜ್ವಾನ್, ನೋಮನ್ ಅಲಿ, ಸೈಮ್ ಅಯೂಬ್, ಸಾಜಿದ್ ಖಾನ್, ಸಲ್ಮಾನ್ ಅಘಾ ಮತ್ತು ಜಾಹಿದ್ ಮಹಮೂದ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:25 pm, Mon, 14 October 24