ENG vs SL: ಟಿ20 ವಿಶ್ವಕಪ್‌ನಿಂದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಔಟ್! ಸೇಮಿಸ್​ಗೆ ಇಂಗ್ಲೆಂಡ್

T20 World Cup 2022: ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿಯುವ ಕನಸಿನಲ್ಲಿದ್ದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಟಿ20 ವಿಶ್ವಕಪ್​ನಿಂದ ಸೂಪರ್ 12 ಸುತ್ತಿನಿಂದಲೇ ಹೊರಬಿದ್ದಿದೆ.

ENG vs SL: ಟಿ20 ವಿಶ್ವಕಪ್‌ನಿಂದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಔಟ್! ಸೇಮಿಸ್​ಗೆ ಇಂಗ್ಲೆಂಡ್
ಎರಡನೇ ಕಾಕತಾಳೀಯ- ಈ ವಿಶ್ವಕಪ್​ನಂತೆಯೇ ಆತಿಥೇಯ ಆಸ್ಟ್ರೇಲಿಯಾ 1992 ರ ಏಕದಿನ ವಿಶ್ವಕಪ್‌ನಲ್ಲಿ ಗುಂಪು ಹಂತದಿಂದಲೇ ಹೊರಬಿದ್ದಿತ್ತು.
Follow us
TV9 Web
| Updated By: ಪೃಥ್ವಿಶಂಕರ

Updated on:Nov 05, 2022 | 5:11 PM

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ ಸೂಪರ್ 12 ಸುತ್ತಿನ ಮೊದಲ ಗುಂಪಿನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾ (England defeated Sri Lanka) ತಂಡವನ್ನು 4 ವಿಕೆಟ್‌ಗಳಿಂದ ಮಣಿಸುವುದರೊಂದಿಗೆ ಟಿ20 ವಿಶ್ವಕಪ್ (T20 World Cup)​ನ ಸೆಮಿಫೈನಲ್​ಗೆ ಎಂಟ್ರಿಕೊಟ್ಟಿದೆ. ಈ ಮೂಲಕ ಮೊದಲ ಗುಂಪಿನಿಂದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಅಧಿಕೃತವಾಗಿ ಸೆಮಿಫೈನಲ್​ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಇದರೊಂದಿಗೆ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿಯುವ ಕನಸಿನಲ್ಲಿದ್ದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ (Australia) ಟಿ20 ವಿಶ್ವಕಪ್​ನಿಂದ ಸೂಪರ್ 12 ಸುತ್ತಿನಿಂದಲೇ ಹೊರಬಿದ್ದಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ತಂಡ ಉತ್ತಮ ಆರಂಭದ ಲಾಭ ಪಡೆಯಲು ಸಾಧ್ಯವಾಗದೆ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿತು. ತಂಡದ ಪರ ಅರ್ಧಶತಕ ಸಿಡಿಸಿ ಮಿಂಚಿದ ಪಾತುಮ್ ನಿಸಂಕಾ 45 ಎಸೆತಗಳಲ್ಲಿ 67 ರನ್ ಗಳಿಸಿ, ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಅದೇ ಸಮಯದಲ್ಲಿ, ಭಾನುಕಾ ರಾಜಪಕ್ಸೆ 22 ಎಸೆತಗಳಲ್ಲಿ 22 ರನ್ ಗಳಿಸಿದರೆ, ಇಂಗ್ಲೆಂಡ್ ಪರ ವೇಗಿ ಮಾರ್ಕ್​ವುಡ್ 3 ವಿಕೆಟ್ ಪಡೆದು ಮಿಂಚಿದರು.

ಅರ್ಧಶತಕ ವಂಚಿತರಾದ ಹೇಲ್ಸ್

ಸುಲಭ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ಉತ್ತಮ ಆರಂಭ ಪಡೆಯಿತು. ನಾಯಕ ಜಾಸ್ ಬಟ್ಲರ್ ಮತ್ತು ಅಲೆಕ್ಸ್ ಹೇಲ್ಸ್ ಬಿರುಸಿನ ಬ್ಯಾಟಿಂಗ್ ಮಾಡಿ ಏಳು ಓವರ್‌ಗಳಲ್ಲಿಯೇ ಟಾರ್ಗೆಟ್​ನ ಅರ್ಧದಷ್ಟು ರನ್ ಕಲೆಹಾಕಿದರು. ಆದರೆ ಎಂಟನೇ ಓವರ್‌ನ ಎರಡನೇ ಎಸೆತದಲ್ಲಿ ಈ ಜೊತೆಯಾಟ ಮುರಿದುಬಿತ್ತು. 28 ರನ್ ಗಳಿಸಿದ್ದ ಬಟ್ಲರ್​ಗೆ ಧನಂಜಯ್ ಡಿ ಸಿಲ್ವಾ ಪೆವಿಲಿಯನ್ ಹಾದಿ ತೋರಿಸಿದರು. ಈ ವಿಕೆಟ್ ನಂತರ ಹೇಲ್ಸ್ ಕೂಡ ಅರ್ಧಶತಕ ಪೂರೈಸಲು ಸಾಧ್ಯವಾಗದೆ 47ರ ವೈಯಕ್ತಿಕ ಸ್ಕೋರ್‌ನಲ್ಲಿ ಔಟಾದರು. ತಮ್ಮ ಇನ್ನಿಂಗ್ಸ್‌ನಲ್ಲಿ 30 ಎಸೆತಗಳನ್ನು ಎದುರಿಸಿದ ಹೇಲ್ಸ್ ಏಳು ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದರು.

ಆದರೆ ಈ ನಡುವೆ ಇಂಗ್ಲೆಂಡ್ ತ್ವರಿತವಾಗಿ ವಿಕೆಟ್ ಕಳೆದುಕೊಂಡಿತು. ನಾಲ್ಕು ರನ್ ಗಳಿಸಿದ ಹ್ಯಾರಿ ಬ್ರೂಕ್ ಬೇಗನೆ ಪೆವಿಲಿಯನ್​ಗೆ ಮರಳಿದರೆ, ಲಿಯಾಮ್ ಲಿವಿಂಗ್‌ಸ್ಟನ್ ಕೂಡ ನಾಲ್ಕು ರನ್‌ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಆದರೆ ಕೊನೆಯವರೆಗೂ ಹೋರಾಡಿದ ಆಲ್​ರೌಂಡರ್ ಬೆನ್​ಸ್ಟೋಕ್ಸ್​ ತಂಡವನ್ನು ಗೆಲುವಿನ ದಡ ಸೇರಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 36 ಎಸೆತಗಳನ್ನು ಎದುರಿಸಿದ ಸ್ಟೋಕ್ಸ್ 2 ಬೌಂಡರಿ ಸಹಿತ ಅಜೇಯ 42 ರನ್ ಬಾರಿಸಿದರು.

ನಿಸಂಕಾ ಅರ್ಧಶತಕ

ಶ್ರೀಲಂಕಾ ಪರ ಓಪನರ್ ಪಾತುಮ್ ನಿಸಂಕಾ ಅದ್ಭುತ ಇನ್ನಿಂಗ್ಸ್ ಆಡಿ 67 ರನ್ ಗಳಿಸಿದರು. ಈ ಬ್ಯಾಟ್ಸ್‌ಮನ್ ಕುಶಾಲ್ ಮೆಂಡಿಸ್ ಜೊತೆಗೂಡಿ ಮೊದಲ ವಿಕೆಟ್‌ಗೆ ನಾಲ್ಕು ಓವರ್‌ಗಳಲ್ಲಿ 39 ರನ್ ಸೇರಿಸುವುದರೊಂದಿಗೆ ಉತ್ತಮ ಆರಂಭ ನೀಡಿದರು. ಆದರೆ ನಾಲ್ಕನೇ ಓವರ್‌ನ ಕೊನೆಯ ಎಸೆತದಲ್ಲಿ ಮೆಂಡಿಸ್ ಔಟಾದರು. ಇದಾದ ನಂತರ ಶ್ರೀಲಂಕಾ ತಂಡ ಚೇತರಿಸಿಕೊಳ್ಳಲು ಸಾಧ್ಯವಾಗದೆ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಲೇ ಇತ್ತು. ಆದರೂ ನಿಸಂಕಾ ಒಂದು ತುದಿಯಲ್ಲಿ ನಿಂತು ರನ್ ಗಳಿಸುತ್ತಲೇ ಇದ್ದರು. ಇದೇ ವೇಳೆ ಶ್ರೀಲಂಕಾ ಧನಂಜಯ ಡಿ ಸಿಲ್ವಾ ಮತ್ತು ಚರಿತ ಅಸಲಂಕಾ ಅವರ ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಧನಂಜಯ್ ಒಂಬತ್ತು ಮತ್ತು ಅಸಲಂಕಾ ಎಂಟು ರನ್ ಗಳಿಸಿ ಮರಳಿದರು.

ನಿಸಂಕಾ ರೂಪದಲ್ಲಿ ಶ್ರೀಲಂಕಾ ನಾಲ್ಕನೇ ವಿಕೆಟ್ ಕಳೆದುಕೊಂಡಿತು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 45 ಎಸೆತಗಳನ್ನು ಎದುರಿಸಿ ಎರಡು ಬೌಂಡರಿಗಳ ಜೊತೆಗೆ ಐದು ಸಿಕ್ಸರ್‌ಗಳನ್ನು ಬಾರಿಸಿದರು.

ರಾಜಪಕ್ಸೆ ನಿದಾನಗತಿಯ ಬ್ಯಾಟಿಂಗ್

ಶ್ರೀಲಂಕಾ ಕೊನೆಯದಾಗಿ ಭಾನುಕಾ ರಾಜಪಕ್ಸೆ ಅವರಿಂದ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸಿತ್ತು ಆದರೆ ರಾಜಪಕ್ಸೆಗೆ ವೇಗವಾಗಿ ರನ್ ಗಳಿಸಲು ಸಾಧ್ಯವಾಗಲಿಲ್ಲ. ಈ ಬ್ಯಾಟ್ಸ್‌ಮನ್ 22 ಎಸೆತಗಳಲ್ಲಿ ಮೂರು ಬೌಂಡರಿ ಒಳಗೊಂಡಂತೆ ಕೇವಲ 22 ರನ್ ಗಳಿಸಲಷ್ಟೇ ಶಕ್ತರಾದರು. ನಾಯಕ ದಸುನ್ ಶನಕ ಕೇವಲ ಮೂರು ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು. ವನಿಂದು ಹಸರಂಗ ಅವರ ಇನ್ನಿಂಗ್ಸ್ ಕೂಡ ಒಂಬತ್ತು ರನ್‌ ದಾಟಲು ಸಾಧ್ಯವಾಗಲಿಲ್ಲ. ಚಾಮಿಕಾ ಕರುಣಾರತ್ನೆ ಖಾತೆ ತೆರೆಯದೆ ಔಟಾದರು.

Published On - 4:52 pm, Sat, 5 November 22

ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ
ಸಿಎಂ ಹೀಗೆಲ್ಲ ಮಾತಾಡುತಿದ್ದರೆ ಜನ ತಲೆ ಕೆಟ್ಟಿದೆ ಅಂತಾರೆ: ಕುಮಾರಸ್ವಾಮಿ
ಸಿಎಂ ಹೀಗೆಲ್ಲ ಮಾತಾಡುತಿದ್ದರೆ ಜನ ತಲೆ ಕೆಟ್ಟಿದೆ ಅಂತಾರೆ: ಕುಮಾರಸ್ವಾಮಿ
ಟಿವಿ9 ಸ್ವೀಟ್ ಹೋಂ ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಚಾಲನೆ
ಟಿವಿ9 ಸ್ವೀಟ್ ಹೋಂ ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಚಾಲನೆ
‘ಸಾರಿ ಹನುಮಂತು’, ಅಳುತ್ತ ಕ್ಷಮೆ ಕೇಳಿದ ಗೌತಮಿ
‘ಸಾರಿ ಹನುಮಂತು’, ಅಳುತ್ತ ಕ್ಷಮೆ ಕೇಳಿದ ಗೌತಮಿ
ಜಾಗೃತಿ ಅಭಿಯಾನದಲ್ಲಿ ರಾಜ್ಯಾಧ್ಯಕ್ಷರೂ ಭಾಗವಹಿಸುತ್ತಾರೆ: ಅರವಿಂದ ಲಿಂಬಾವಳಿ
ಜಾಗೃತಿ ಅಭಿಯಾನದಲ್ಲಿ ರಾಜ್ಯಾಧ್ಯಕ್ಷರೂ ಭಾಗವಹಿಸುತ್ತಾರೆ: ಅರವಿಂದ ಲಿಂಬಾವಳಿ