ENG vs SL: ಮೂರನೇ ಟೆಸ್ಟ್ ಗೆದ್ದ ಶ್ರೀಲಂಕಾ; ಆಂಗ್ಲರ ಪಾಲಾದ ಟೆಸ್ಟ್ ಸರಣಿ

ENG vs SL: ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಪ್ರವಾಸಿ ಶ್ರೀಲಂಕಾ ತಂಡ ಆತಿಥೇಯ ಇಂಗ್ಲೆಂಡ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದೆ. ಇದರೊಂದಿಗೆ ಉಭಯ ತಂಡಗಳ ನಡುವಿನ ಟೆಸ್ಟ್ ಸರಣಿ ಅಂತ್ಯಗೊಂಡಿದ್ದು, ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ.

ENG vs SL: ಮೂರನೇ ಟೆಸ್ಟ್ ಗೆದ್ದ ಶ್ರೀಲಂಕಾ; ಆಂಗ್ಲರ ಪಾಲಾದ ಟೆಸ್ಟ್ ಸರಣಿ
ಶ್ರೀಲಂಕಾ ತಂಡ
Follow us
ಪೃಥ್ವಿಶಂಕರ
|

Updated on:Sep 09, 2024 | 6:48 PM

ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಪ್ರವಾಸಿ ಶ್ರೀಲಂಕಾ ತಂಡ ಆತಿಥೇಯ ಇಂಗ್ಲೆಂಡ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದೆ. ಇದರೊಂದಿಗೆ ಉಭಯ ತಂಡಗಳ ನಡುವಿನ ಟೆಸ್ಟ್ ಸರಣಿ ಅಂತ್ಯಗೊಂಡಿದ್ದು, ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಇನ್ನು 4 ದಿನಗಳಲ್ಲಿ ಮುಕ್ತಾಯಗೊಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ಸಾಂಘೀಕ ಹೋರಾಟ ನೀಡಿದ ಶ್ರೀಲಂಕಾ ವೈಟ್ ವಾಶ ಮುಖಭಂಗದಿಂದ ಪಾರಾಯಿತು.

ಲಂಕಾ ವೇಗಿಗಳ ಪ್ರಾಬಲ್ಯ

ಈ ಸರಣಿಯ ಮೊದಲೆರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿದ್ದ ಇಂಗ್ಲೆಂಡ್ ತಂಡ ಮೂರನೇ ಪಂದ್ಯವನ್ನೂ ಸುಲಭವಾಗಿ ಜಯಿಸುವ ಗುರಿ ಇಟ್ಟುಕೊಂಡಿತ್ತು. ಆದರೆ ಇದಕ್ಕೆ ಲಂಕಾ ವೇಗಿಗಳು ಅವಕಾಶ ನೀಡಲಿಲ್ಲ. ವಾಸ್ತವವಾಗಿ ಈ ಟೆಸ್ಟ್​ ಪಂದ್ಯದ ಮೊದಲೆರಡು ದಿನಗಳಲ್ಲಿ ಇಂಗ್ಲೆಂಡ್ ತಂಡ ಪ್ರಾಬಲ್ಯ ಮೆರೆದಿತ್ತು. ಆದರೆ ಮೂರನೇ ದಿನದಿಂದ ಇಡೀ ಆಟವೇ ಬದಲಾಯಿತು. ಮೂರನೇ ದಿನದಾಟದಲ್ಲಿ ಶ್ರೀಲಂಕಾ ತಂಡದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿ ಎರಡನೇ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಕೇವಲ 156 ರನ್‌ಗಳಿಗೆ ಸೀಮಿತಗೊಳಿಸಿದರು. ಇಲ್ಲಿಂದ ಶ್ರೀಲಂಕಾ ತಂಡ ಪಂದ್ಯದಲ್ಲಿ ತಿರುಗೇಟು ನೀಡುವಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ ಪಂದ್ಯ ಗೆಲ್ಲಲು 219 ರನ್‌ಗಳ ಗುರಿ ಪಡೆದ ಶ್ರೀಲಂಕಾ 2 ವಿಕೆಟ್‌ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.

ಆಂಗ್ಲರು ಎಡವಿದ್ದೇಲ್ಲಿ?

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್​ನಲ್ಲಿ  325 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಶ್ರೀಲಂಕಾ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 263 ರನ್ ಗಳಿಸಲಷ್ಟೇ ಶಕ್ತವಾಯಿತು. ಇಂತಹ ಪರಿಸ್ಥಿತಿಯಲ್ಲಿ ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ  62 ರನ್​ಗಳ ಮುನ್ನಡೆ ಕೂಡ ಪಡೆದುಕೊಂಡಿತು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ತಂಡದ ಪ್ರದರ್ಶನ ತೀರಾ ಕಳಪೆಯಾಗಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ, ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ವಿಫಲರಾದರೆ, ಬೌಲರ್‌ಗಳು ಬೌಲಿಂಗ್​ನಲ್ಲೂ ಕಮಾಲ್ ಮಾಡಲಿಲ್ಲ. ಇದರಿಂದಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಸೋಲನ್ನು ಎದುರಿಸಬೇಕಾಯಿತು.

ಪಾತುಮ್ ನಿಸ್ಸಾಂಕಾ ಗೆಲುವಿನ ಹೀರೋ

ಈ ಪಂದ್ಯದಲ್ಲಿ ಪಾತುಮ್ ನಿಸ್ಸಾಂಕ ಶ್ರೀಲಂಕಾದ ಗೆಲುವಿನ ಹೀರೋ ಎಂದರೆ ತಪ್ಪಾಗಲಾರದು. ಪಂದ್ಯದ ಕೊನೆಯ ಇನ್ನಿಂಗ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಪಾತುಮ್ ನಿಸ್ಸಾಂಕ 124 ಎಸೆತಗಳಲ್ಲಿ ಅಜೇಯ 127 ರನ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು. ಅವರ ಇನ್ನಿಂಗ್ಸ್‌ನಲ್ಲಿ 13 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು. ಮತ್ತೊಂದೆಡೆ, ಏಂಜೆಲೊ ಮ್ಯಾಥ್ಯೂಸ್ 61 ಎಸೆತಗಳಲ್ಲಿ ಅಜೇಯ 32 ರನ್ ಗಳಿಸಿ ನಿಸ್ಸಾಂಕಾಗೆ ಸಂಪೂರ್ಣ ಬೆಂಬಲ ನೀಡಿದರು.

ವಿಶೇಷ ಸಂಗತಿಯೆಂದರೆ ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಶ್ರೀಲಂಕಾ ಇದುವರೆಗೆ 2 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ ಎರಡೂ ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಅಂದರೆ ಲಂಡನ್‌ನ ಕೆನ್ನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಶ್ರೀಲಂಕಾವನ್ನು ಸೋಲಿಸಲು ಇಂಗ್ಲೆಂಡ್ ತಂಡಕ್ಕೆ ಇನ್ನೂ ಸಾಧ್ಯವಾಗಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 pm, Mon, 9 September 24

ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ