AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s T20 World Cup 2026: ಇಂದಿನಿಂದ ಟಿ20 ವಿಶ್ವಕಪ್ ಆರಂಭ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

Women's T20 World Cup 2026: 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಜೂನ್ 12ರಂದು ಇಂಗ್ಲೆಂಡ್‌ನಲ್ಲಿ ಆರಂಭವಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಬರ್ಮಿಂಗ್ಹ್ಯಾಮ್‌ನಲ್ಲಿ ಮುಖಾಮುಖಿಯಾಗಲಿವೆ. ಇಂಗ್ಲೆಂಡ್ ಇತ್ತೀಚೆಗೆ ಭಾರತದ ವಿರುದ್ಧ ಸರಣಿ ಗೆದ್ದ ಆತ್ಮವಿಶ್ವಾಸದಲ್ಲಿದ್ದರೆ, ಲಂಕಾ ಕಳೆದ ಬಾರಿ ಇಂಗ್ಲೆಂಡ್ ತಂಡವನ್ನು ಸೋಲಿಸಿತ್ತು. ಈ ಮಹತ್ವದ ಪಂದ್ಯದ ಲೈವ್ ಪ್ರಸಾರ, ಸಮಯ ಮತ್ತು ತಂಡಗಳ ವಿವರಗಳನ್ನು ಇಲ್ಲಿ ಪಡೆಯಿರಿ.

Women's T20 World Cup 2026: ಇಂದಿನಿಂದ ಟಿ20 ವಿಶ್ವಕಪ್ ಆರಂಭ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?
T20 World Cup 2026Image Credit source: ICC X
ಪೃಥ್ವಿಶಂಕರ
|

Updated on:Jun 12, 2026 | 3:36 PM

Share

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಇಂದಿನಿಂದ ಅಂದರೆ ಜೂನ್ 12 ರಿಂದ ಆರಂಭವಾಗುತ್ತಿದೆ. ಇಂಗ್ಲೆಂಡ್‌ ಆತಿಥ್ಯದಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ 12 ತಂಡಗಳು ಭಾಗವಹಿಸುತ್ತಿದ್ದು, 24 ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯವೂ ಸೇರಿದಂತೆ ಒಟ್ಟು 33 ಪಂದ್ಯಗಳು ನಡೆಯಲಿವೆ. ಉದ್ಘಾಟನಾ ಪಂದ್ಯದಲ್ಲಿ ಬಿ ಗುಂಪಿನಲ್ಲಿರುವ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ (England vs Sri Lanka) ಮುಖಾಮುಖಿಯಾಗುತ್ತಿವೆ. ಆತಿಥೇಯ ಇಂಗ್ಲೆಂಡ್‌, ಈ ಟೂರ್ನಿ ಆರಂಭಕ್ಕೂ ಮುನ್ನ ನಡೆದ ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಯನ್ನು ಗೆದ್ದುಕೊಂಡಿದ್ದು, ಇದೀಗ ಅದೇ ಗೆಲುವಿನ ಸರಣಿಯನ್ನು ಮುಂದುವರೆಸಲು ನೋಡುತ್ತಿದೆ. ಇತ್ತ ಲಂಕಾ ಪಡೆ ಗೆಲುವಿನೊಂದಿಗೆ ಪಂದ್ಯಾವಳಿಯನ್ನು ಆರಂಭಿಸುವ ಇರಾದೆಯಲ್ಲಿದೆ.

ಇಂಗ್ಲೆಂಡ್-ಶ್ರೀಲಂಕಾ ಮುಖಾಮುಖಿ ದಾಖಲೆ

ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಕೊನೆಯ ಟಿ20 ಪಂದ್ಯವು 2023 ರಲ್ಲಿ ನಡೆದಿತ್ತು. ಆಗ ಶ್ರೀಲಂಕಾ ಇಂಗ್ಲೆಂಡ್ ತಂಡವನ್ನು ಸೋಲಿಸಿತ್ತು. ಇನ್ನು ಟಿ20 ಕ್ರಿಕೆಟ್ ಇತಿಹಾಸದಲ್ಲಿ, ಇಂಗ್ಲೆಂಡ್ ಮತ್ತು ಶ್ರೀಲಂಕಾ ಮಹಿಳಾ ತಂಡಗಳು ಒಟ್ಟು 12 ಪಂದ್ಯಗಳನ್ನು ಆಡಿವೆ. ಈ 12 ಪಂದ್ಯಗಳಲ್ಲಿ ಇಂಗ್ಲೆಂಡ್ 10 ಪಂದ್ಯಗಳಲ್ಲಿ ಶ್ರೀಲಂಕಾವನ್ನು ಸೋಲಿಸಿದರೆ, ಇತ್ತ ಶ್ರೀಲಂಕಾ ಕೇವಲ 2 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಯಾವಾಗ ನಡೆಯಲಿದೆ?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಜೂನ್ 12 ರ ಶುಕ್ರವಾರದಂದು ನಡೆಯಲಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಎಲ್ಲಿ ನಡೆಯಲಿದೆ?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಭಾರತೀಯ ಕಾಲಮಾನ ರಾತ್ರಿ 11 ಗಂಟೆಗೆ ಆರಂಭವಾಗಲಿದ್ದು, ಟಾಸ್ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಪ್ರಸಾರ ಮಾಡಲಾಗುತ್ತದೆ.

ಇಂಗ್ಲೆಂಡ್​ನಲ್ಲಿ ಮಹಿಳಾ ಟಿ20 ವಿಶ್ವಕಪ್; ಭಾರತದ ಕಾಲಮಾನದ ಪ್ರಕಾರ ಪಂದ್ಯಗಳು ಎಷ್ಟು ಗಂಟೆಗೆ ಆರಂಭ?

ಉಭಯ ತಂಡಗಳು

ಇಂಗ್ಲೆಂಡ್ ತಂಡ: ನ್ಯಾಟ್ ಸಿವರ್-ಬ್ರಂಟ್ (ನಾಯಕಿ), ಲಾರೆನ್ ಬೆಲ್, ಆಲಿಸ್ ಕ್ಯಾಪ್ಸೆ, ಟಿಲ್ಲಿ ಕಾರ್ಟೀನ್-ಕೋಲ್ಮನ್, ಚಾರ್ಲಿ ಡೀನ್, ಸೋಫಿಯಾ ಡಂಕ್ಲೆ, ಸೋಫಿ ಎಕ್ಲೆಸ್ಟೋನ್, ಲಾರೆನ್ ಫೈಲರ್, ಡ್ಯಾನಿ ಗಿಬ್ಸನ್, ಆಮಿ ಜೋನ್ಸ್, ಫ್ರೇಯಾ ಕೆಂಪ್, ಹೀದರ್ ನೈಟ್, ಲಿನ್ಸೆ ಸ್ಮಿತ್, ಇಸ್ಸಿ ವಾಂಗ್, ಡ್ಯಾನಿ ವ್ಯಾಟ್-ಹಾಡ್ಜ್

ಶ್ರೀಲಂಕಾ ತಂಡ: ಚಾಮರಿ ಅಥಾಪತ್ತು (ನಾಯಕಿ), ಹಾಸಿನಿ ಪೆರೇರಾ, ವಿಶ್ಮಿ ಗುಣರತ್ನೆ, ಹರ್ಷಿತಾ ಸಮರವಿಕ್ರಮ, ಇಮೇಶಾ ದುಲಾನಿ, ನೀಲಾಕ್ಷಿಕಾ ಸಿಲ್ವಾ, ಕವೀಶಾ ದಿಲ್ಹಾರಿ, ಹನ್ಸಿಮಾ ಕರುಣಾರತ್ನೆ, ಕೌಶಿನಿ ನುತ್ಯಂಗನಾ, ಸುಗಂದಿಕಾ ದಾಸನಾಯಕ, ನಿಮಾಶಾ ಮದುಶಾನಿ, ಕಾವ್ಯಾ ಕವಿಂದಿ, ಮಾಲ್ಕಿ ಮಾದರ, ಮಿಥಾಲಿ ಅಯೋಧ್ಯಾ, ಚೇತನಾ ವಿಮುಕ್ತಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:34 pm, Fri, 12 June 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?