ENG vs WI: ವಿಶ್ವಕಪ್​ಗೆ ಅರ್ಹತೆ ಪಡೆಯಲಾಗದ ವಿಂಡೀಸ್ ದೈತ್ಯರ ಮುಂದೆ ಮಂಡಿಯೂರಿದ ಆಂಗ್ಲರು

ENG vs WI: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ನಿಗದಿತ 50 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 325 ರನ್ ಕಲೆಹಾಕಿತು. ಈ ಗುರಿಯನ್ನು ವೆಸ್ಟ್ ಇಂಡೀಸ್ ತಂಡ ಆರು ವಿಕೆಟ್ ಕಳೆದುಕೊಂಡು ಸಾಧಿಸಿತು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಗೆಲುವಿನ ಇನ್ನಿಂಗ್ಸ್ ಆಡಿದ್ದು, ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ENG vs WI: ವಿಶ್ವಕಪ್​ಗೆ ಅರ್ಹತೆ ಪಡೆಯಲಾಗದ ವಿಂಡೀಸ್ ದೈತ್ಯರ ಮುಂದೆ ಮಂಡಿಯೂರಿದ ಆಂಗ್ಲರು
ಇಂಗ್ಲೆಂಡ್- ವೆಸ್ಟ್ ಇಂಡೀಸ್
Follow us
ಪೃಥ್ವಿಶಂಕರ
|

Updated on:Dec 04, 2023 | 7:51 AM

ಏಕದಿನ ವಿಶ್ವಕಪ್​ಗೆ (ODI World Cup 2023) ಅರ್ಹತೆ ಪಡೆಯುವಲ್ಲಿ ವಿಫಲವಾಗಿದ್ದ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ನಿನ್ನೆ ರಾತ್ರಿ ಆಂಗ್ಲರ (West Indies vs England) ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಮೊದಲ ಏಕದಿನ ಪಂದ್ಯವನ್ನು ಗೆದ್ದುಕೊಂಡಿದೆ. ನಾರ್ತ್ ಸೌಂಡ್​ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿದ ವೆಸ್ಟ್ ಇಂಡೀಸ್ ತಂಡ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ನಿಗದಿತ 50 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 325 ರನ್ ಕಲೆಹಾಕಿತು. ಈ ಗುರಿಯನ್ನು ವೆಸ್ಟ್ ಇಂಡೀಸ್ ತಂಡ ಆರು ವಿಕೆಟ್ ಕಳೆದುಕೊಂಡು ಸಾಧಿಸಿತು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ (Shai Hope) ಗೆಲುವಿನ ಇನ್ನಿಂಗ್ಸ್ ಆಡಿದ್ದು, ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್

ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದರು. ನಾಯಕನ ನಿರೀಕ್ಷೆಯಂತೆ ಆರಂಭಿಕರು ಮೊದಲ ವಿಕೆಟ್​ಗೆ 77 ರನ್​ಗಳ ಜೊತೆಯಾಟ ಹಂಚಿಕೊಂಡರು. ಈ ವೇಳೆ ಕೇವಲ 28 ಎಸೆತಗಳಲ್ಲಿ 45 ರನ್ ಚಚ್ಚಿದ ಸಾಲ್ಟ್ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಮತ್ತೊಬ್ಬ ಆರಂಭಿಕ ವಿಲ್ ಜಾಕ್ಸ್ ಕೂಡ 26 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು. ಕ್ರೌಲಿ ಇನ್ನಿಂಗ್ಸ್ ಕೂಡ 48 ರನ್​ಗಳಿಗೆ ಅಂತ್ಯವಾಯಿತು.

Breaking: 100 ರನ್​ಗಳಿಂದ ಗೆದ್ದ ಭಾರತ; ವಿಶ್ವಕಪ್​ನಿಂದ ಹೊರಬಿದ್ದ ಹಾಲಿ ಚಾಂಪಿಯನ್ ಆಂಗ್ಲರು..!

ಬ್ರೂಕ್ ಅರ್ಧಶತಕ

ಹೀಗಾಗಿ ತಂಡದ ಹೆಚ್ಚಿನ ಬ್ಯಾಟ್ಸ್‌ಮನ್‌ಗಳು ಉತ್ತಮ ಆರಂಭ ಪಡೆದ ನಂತರವೂ ಅದನ್ನು ದೊಡ್ಡ ಇನ್ನಿಂಗ್ಸ್‌ ಆಗಿ ಪರಿವರ್ತಿಸಲು ವಿಫಲರಾದರು. ಈ ಪಂದ್ಯದಲ್ಲಿ ಇಂಗ್ಲೆಂಡ್ ಪರ ಅರ್ಧಶತಕ ಸಿಡಿಸಿದ ಹ್ಯಾರಿ ಬ್ರೂಕ್, 72 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಒಳಗೊಂಡ 71 ರನ್‌ ಕಲೆ ಹಾಕಿದರು. ಉಳಿದಂತೆ ಆಲ್​ರೌಂಡರ್ ಸ್ಯಾಮ್ ಕರನ್ 26 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ ಸಹಿತ 38 ರನ್ ಗಳಿಸಿ ತಂಡವನ್ನು ಮುನ್ನೂರರ ಗಡಿ ದಾಟಿಸಿದರು.

ಶತಕದ ಇನ್ನಿಂಗ್ಸ್ ಆಡಿದ ಹೋಪ್

ಇಂಗ್ಲೆಂಡ್ ನೀಡಿದ ಬೃಹತ್ ಮೊತ್ತ ಬೆನ್ನಟ್ಟಿದ ವಿಂಡೀಸ್​ಗೆ ಶತಕದ ಜೊತೆಯಾಟದ ಆರಂಭ ಸಿಕ್ಕಿತು. ಆರಂಭಿಕ ಅಲಿಕ್ ಅತಾನಾಜೆ 65 ಎಸೆತಗಳಲ್ಲಿ ಒಂಬತ್ತು ಬೌಂಡರಿ ಮತ್ತು ಎರಡು ಸಿಕ್ಸರ್‌ ಸಹಿತ 66 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರು. ಮತ್ತೊಬ್ಬ ಆರಂಭಿಕ ಬ್ರಂಡನ್ ಕಿಂಗ್ ಕೂಡ 33 ರನ್​ಗಳ ಕೊಡುಗೆ ನೀಡಿದರು. ಹೀಗಾಗಿ ಮೊದಲ ವಿಕೆಟ್​ಗೆ ತಂಡ 104 ರನ್ ಕಲೆಹಾಕಿತು. ಈ ಇಬ್ಬರ ಬಳಿಕ ನಾಯಕನ ಇನ್ನಿಂಗ್ಸ್ ಆಡಿದ ಶಾಯ್​ ಹೋಪ್ 83 ಎಸೆತಗಳಲ್ಲಿ 109 ರನ್​ಗಳ ಗೆಲುವಿನ ಅಜೇಯ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ ಅವರು ನಾಲ್ಕು ಬೌಂಡರಿ ಮತ್ತು ಏಳು ಸಿಕ್ಸರ್‌ಗಳನ್ನು ಸಹ ಹೊಡೆದರು. ಕೊನೆಯಲ್ಲಿ ರೊಮಾರಿಯೊ ಶೆಫರ್ಡ್ 28 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಿತ ಅಜೇಯ 48 ರನ್ ಚಚ್ಚಿದರು. ಇದು ವೆಸ್ಟ್ ಇಂಡೀಸ್‌ನ ಏಕದಿನದಲ್ಲಿ ಎರಡನೇ ಅತ್ಯಂತ ಯಶಸ್ವಿ ರನ್ ಚೇಸ್ ಆಗಿದೆ. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕೆರಿಬಿಯನ್ನರು 1-0 ಮುನ್ನಡೆ ಸಾಧಿಸಿದ್ದಾರೆ.

ದುಬಾರಿಯಾದ ಕರನ್

ವಾಸ್ತವವಾಗಿ ಕೊನೆಯ ಎರಡು ಓವರ್‌ಗಳಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ 19 ರನ್‌ಗಳ ಅಗತ್ಯವಿತ್ತು. ಹೀಗಾಗಿ ವೆಸ್ಟ್ ಇಂಡೀಸ್ ಸೋಲಿನ ಭೀತಿಯಲ್ಲಿತ್ತು. 49ನೇ ಓವರ್ ಬೌಲ್ ಮಾಡಲು ಬಂದ ಕರನ್ ಅವರ ಓವರ್​ನ ಎರಡನೇ ಎಸೆತದಲ್ಲಿ ಹೋಪ್ ಸಿಕ್ಸರ್ ಬಾರಿಸಿದರು. ಇದಾದ ಬಳಿಕ ನಾಲ್ಕನೇ ಎಸೆತದಲ್ಲೂ ಮತ್ತೊಂದು ಸಿಕ್ಸರ್ ಬಾರಿಸಿದರು. ಐದನೇ ಎಸೆತದಲ್ಲೂ ಸಿಕ್ಸರ್ ಬಂತು. ನಾಲ್ಕನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಹೋಪ್ ಕೂಡ ಶತಕ ಪೂರೈಸಿದರು. ಇದರೊಂದಿಗೆ ವಿಂಡೀಸ್ ತಂಡ ಗೆಲುವಿನ ದಡವನ್ನು ಮುಟ್ಟಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 am, Mon, 4 December 23

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು