AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ಗೆ ಆಸ್ಟ್ರೇಲಿಯಾ, ಇಂಗ್ಲೆಂಡ್ ಸಂಭಾವ್ಯ ತಂಡಗಳು ಪ್ರಕಟ

ODI World Cup 2023: ಈ ಬಾರಿಯ ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದ್ದು, ಈ ಪಂದ್ಯ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ನಡೆಯಲಿದೆ.

ಏಕದಿನ ವಿಶ್ವಕಪ್​ಗೆ ಆಸ್ಟ್ರೇಲಿಯಾ, ಇಂಗ್ಲೆಂಡ್ ಸಂಭಾವ್ಯ ತಂಡಗಳು ಪ್ರಕಟ
Australia-England
TV9 Web
| Edited By: |

Updated on: Aug 16, 2023 | 9:34 PM

Share

ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​​ಗಾಗಿ ದಿನಗಣನೆ ಶುರುವಾಗಿದೆ. ಈ ಕ್ರಿಕೆಟ್ ಮಹಾಸಮರಕ್ಕೂ ಮುನ್ನ ಪೂರ್ವಭಾವಿ ಏಕದಿನ ಪಂದ್ಯಗಳನ್ನಾಡಲು ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಂದಾಗಿವೆ. ಆಸ್ಟ್ರೇಲಿಯಾ ತಂಡವು ಸೌತ್ ಆಫ್ರಿಕಾ ವಿರುದ್ಧ ಸೆಪ್ಟೆಂಬರ್ 7 ರಿಂದ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಯ ಬಳಿಕ ಆಸೀಸ್ ಪಡೆ ಭಾರತಕ್ಕೆ ಬರಲಿದ್ದು ಸೆಪ್ಟೆಂಬರ್ 22 ರಿಂದ ಟೀಮ್ ಇಂಡಿಯಾ ವಿರುದ್ಧ 5 ಏಕದಿನ ಪಂದ್ಯಗಳನ್ನಾಡಲಿದೆ.

ಮತ್ತೊಂದೆಡೆ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಸೆಪ್ಟೆಂಬರ್ 8 ರಿಂದ ಶುರುವಾಗಲಿದೆ. ಇದರ ಬೆನ್ನಲ್ಲೇ ಆಂಗ್ಲರು ಐರ್ಲೆಂಡ್ ವಿರುದ್ದ 3 ಪಂದ್ಯಗಳ ಮತ್ತೊಂದು ಏಕದಿನ ಸರಣಿ ಆಡಲಿದೆ. ಈ ಸರಣಿಗಳಿಗಾಗಿ ಈಗಾಗಲೇ ಉಭಯ ತಂಡಗಳು ಬಲಿಷ್ಠ ಪಡೆಯನ್ನು ರೂಪಿಸಿರುವುದು ವಿಶೇಷ. ಅಂದರೆ ಮುಂದಿನ ವಿಶ್ವಕಪ್​ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್​ 15 ಸದಸ್ಯರ ಬಳಗವನ್ನು ಆಯ್ಕೆ ಮಾಡಿದೆ.

ಸೆಪ್ಟೆಂಬರ್ ಅಂತ್ಯಕ್ಕೆ ಮುಗಿಯುವ ಸರಣಿ:

ಉಭಯ ತಂಡಗಳ ಈ ಸರಣಿಯು ಸೆಪ್ಟೆಂಬರ್ ಅಂತ್ಯದಲ್ಲಿ ಮುಗಿಯಲಿದ್ದು, ಇದಾದ ಬಳಿಕ ಇಂಗ್ಲೆಂಡ್ ಏಕದಿನ ವಿಶ್ವಕಪ್​ಗಾಗಿ ಭಾರತಕ್ಕೆ ಆಗಮಿಸಲಿದೆ. ಇನ್ನು ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಮುಗಿಯುವುದು ಸೆಪ್ಟೆಂಬರ್ 27 ರಂದು. ಇದಾದ ಬಳಿಕ ಆಸ್ಟ್ರೇಲಿಯಾ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳನ್ನಾಡಲಿದೆ.

ಹೀಗಾಗಿ ಪ್ರಸ್ತುತ ಆಯ್ಕೆ ಮಾಡಲಾಗಿರುವ ಉಭಯ ತಂಡಗಳ 15 ಸದಸ್ಯರ ಬಳಗದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆ ತುಂಬಾ ಕಡಿಮೆ. ಒಂದು ವೇಳೆ ಗಾಯದ ಸಮಸ್ಯೆ ಕಂಡು ಬಂದರೆ ಮಾತ್ರ ತಂಡದಲ್ಲಿ ಬದಲಾವಣೆಯಾಗಬಹುದು.

ಇದರ ಹೊರತಾಗಿ ಈಗ ಆಯ್ಕೆ ಮಾಡಲಾಗಿರುವ ಆಟಗಾರರೇ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾದ ಸಂಭವನೀಯ ಏಕದಿನ ವಿಶ್ವಕಪ್ ತಂಡಗಳು ಈ ಕೆಳಗಿನಂತಿದೆ.

ಆಸ್ಟ್ರೇಲಿಯಾ ತಂಡ:

ಪ್ಯಾಟ್ ಕಮ್ಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವ್ ಸ್ಮಿತ್, ಅಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ. ಸೀನ್ ಅಬಾಟ್, ತನ್ವಿರ್ ಸಂಘ, ಆರನ್ ಹಾರ್ಡಿ.

ಇದನ್ನೂ  ಓದಿ: ಜಸ್​ಪ್ರೀತ್ ಬುಮ್ರಾ ಟಿ20 ತಂಡದ 11ನೇ ನಾಯಕ: ಉಳಿದ 10 ಕ್ಯಾಪ್ಟನ್​ಗಳ ಪಟ್ಟಿ ಇಲ್ಲಿದೆ

ಇಂಗ್ಲೆಂಡ್ ತಂಡ:

ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್.

ಏಕದಿನ ವಿಶ್ವಕಪ್ ವೇಳಾಪಟ್ಟಿ:

ಈ ಬಾರಿಯ ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದ್ದು, ಈ ಪಂದ್ಯ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ನಡೆಯಲಿದೆ. ಹಾಗೆಯೇ ಫೈನಲ್ ಪಂದ್ಯವು ನವೆಂಬರ್ 19 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?