ವಿಶ್ವಕಪ್ ಉದ್ಘಾಟನಾ ಪಂದ್ಯ; ಅಹಮದಾಬಾದ್‌ ತಲುಪಿದ ಇಂಗ್ಲೆಂಡ್- ನ್ಯೂಜಿಲೆಂಡ್ ತಂಡಗಳು

|

Updated on: Oct 04, 2023 | 12:40 PM

ODI World Cup 2023: ಸೆಪ್ಟೆಂಬರ್ 29 ರಿಂದ ಆರಂಭವಾಗಿದ್ದ ಅಭ್ಯಾಸ ಪಂದ್ಯಗಳು ನಿನ್ನೆಗೆ ಅಂದರೆ ಅಕ್ಟೋಬರ್ 3ಕ್ಕೆ ಅಂತ್ಯಗೊಂಡಿವೆ. ಹೀಗಾಗಿ ನಾಳೆಯಿಂದ ಅಂದರೆ ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ ಆರಂಭವಾಗುತ್ತಿದೆ. ಲೀಗ್​ನ ಉದ್ಘಾಟನಾ ಪಂದ್ಯ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್ ಮತ್ತು ಕಳೆದ ವಿಶ್ವಕಪ್​ನ ರನ್ನರ್ ಅಪ್ ನ್ಯೂಜಿಲೆಂಡ್ ನಡುವೆ ನಡೆಯಲ್ಲಿದೆ.

ವಿಶ್ವಕಪ್ ಉದ್ಘಾಟನಾ ಪಂದ್ಯ; ಅಹಮದಾಬಾದ್‌ ತಲುಪಿದ ಇಂಗ್ಲೆಂಡ್- ನ್ಯೂಜಿಲೆಂಡ್ ತಂಡಗಳು
ಇಂಗ್ಲೆಂಡ್- ನ್ಯೂಜಿಲೆಂಡ್ ತಂಡಗಳು
Follow us on

ಸೆಪ್ಟೆಂಬರ್ 29 ರಿಂದ ಆರಂಭವಾಗಿದ್ದ ವಿಶ್ವಕಪ್ (ICC World Cup 2023) ಅಭ್ಯಾಸ ಪಂದ್ಯಗಳು ನಿನ್ನೆಗೆ ಅಂದರೆ ಅಕ್ಟೋಬರ್ 3ಕ್ಕೆ ಅಂತ್ಯಗೊಂಡಿವೆ. ಹೀಗಾಗಿ ನಾಳೆಯಿಂದ ಅಂದರೆ ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ ಆರಂಭವಾಗುತ್ತಿದೆ. ಲೀಗ್​ನ ಉದ್ಘಾಟನಾ ಪಂದ್ಯ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್ ಮತ್ತು ಕಳೆದ ವಿಶ್ವಕಪ್​ನ ರನ್ನರ್ ಅಪ್ ನ್ಯೂಜಿಲೆಂಡ್ (England vs New Zealand) ನಡುವೆ ನಡೆಯಲ್ಲಿದೆ. ಹೀಗಾಗಿ ಉಭಯ ತಂಡಗಳು ಉದ್ಘಾಟನಾ ಪಂದ್ಯವನ್ನಾಡಲು ಅಹಮದಾಬಾದ್​ಗೆ ಬಂದಿಳಿದಿವೆ. ಎರಡೂ ತಂಡಗಳು ತಮ್ಮ ಅಭ್ಯಾಸ ಪಂದ್ಯಗಳಲ್ಲಿ ಗೆಲುವು ಸಾಧಿಸಿರುವುದು ತಂಡಗಳ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ. ಒಂದೆಡೆ ಇಂಗ್ಲೆಂಡ್, ಬಾಂಗ್ಲಾದೇಶವನ್ನು ಸೋಲಿಸಿದರೆ, ಮತ್ತೊಂದೆಡರ ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಶುಭಾರಂಭ ಮಾಡಿದೆ. ಇನ್ನು ಇಂಗ್ಲೆಂಡ್‌, ಭಾರತದೆದುರು ಇನ್ನೊಂದು ಅಭ್ಯಾಸ ಪಂದ್ಯವನ್ನಾಡಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯ ರದ್ದಾಯಿತು.

ಬಲಿಷ್ಠವಾಗಿದೆ ಇಂಗ್ಲೆಂಡ್

ಸದ್ಯ ಅಹಮದಾಬಾದ್ ತಲುಪಿರುವ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ಎರಡೂ ತಂಡಗಳು ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಆದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ತರಬೇತಿ ನಡೆಸಲ್ಲಿವೆ. ಇನ್ನು ಕಳೆದ ಬಾರಿ ಲಾರ್ಡ್ಸ್ ಸ್ಟೇಡಿಯಂನಲ್ಲಿ ನಡೆದಿದ್ದ 2019 ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಂಗ್ಲರು, ಕಿವೀಸ್ ತಂಡವನ್ನು ಮಣಿಸಿ ವಿಶ್ವಕಪ್ ಎತ್ತಿ ಹಿಡಿದಿದ್ದರು. ಅಂದಿನಿಂದ ಉಭಯ ತಂಡಗಳಲ್ಲೂ ಬಹಳಷ್ಟು ಬದಲಾಗಿದೆ. ಕಳೆದ ಬಾರಿ ಇಂಗ್ಲೆಂಡ್ ತಂಡದ ನಾಯಕತ್ವವಹಿಸಿದ್ದ ಇಯಾನ್ ಮಾರ್ಗನ್ ಅವರು ನಿವೃತ್ತಿ ಹೊಂದಿರುವುದರಿಂದ ಜೋಸ್ ಬಟ್ಲರ್ ಈಗ ತಂಡದ ನಾಯಕತ್ವವಹಿಸಿದ್ದಾರೆ. ಅಲ್ಲದೆ ಬಟ್ಲರ್ ಈಗಾಗಲೇ ಇಂಗ್ಲೆಂಡ್ ತಂಡವನ್ನು 2022 ರ ಟಿ 20 ವಿಶ್ವಕಪ್ ಗೆಲುವಿನತ್ತ ಮುನ್ನಡೆಸಿದ್ದಾರೆ.

ಸತತ ಎರಡನೇ ಅಭ್ಯಾಸ ಪಂದ್ಯದಲ್ಲೂ ಸೋತ ಪಾಕಿಸ್ತಾನ! ಸತತ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ

ನ್ಯೂಜಿಲೆಂಡ್​ಗೆ ಬೌಲಿಂಗ್​ಗೆ ಜೀವಾಳ

ನಿಸ್ಸಂದೇಹವಾಗಿ, ಇಂಗ್ಲೆಂಡ್ ತಂಡ ಈ ಬಾರಿಯ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ. ತಂಡಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಸೇರಿದಂತೆ ಎಲ್ಲ ವಿಭಾಗವೂ ಬಲಿಷ್ಠವಾಗಿದೆ. ಇದಲ್ಲದೆ ತಂಡದ ಬ್ಯಾಟಿಂಗ್ ಲೈನ್-ಅಪ್‌ ಅದ್ಭುತವಾಗಿರುವುದು ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. ಇತ್ತ ನ್ಯೂಜಿಲೆಂಡ್ ತಂಡದಲ್ಲೂ ಸಾಕಷ್ಟು ಬದಲಾವಣೆಗಳಾಗಿದೆ. ಆದರೆ ತಂಡವನ್ನು ಗಮನಿಸಿದರೆ ತಂಡದಲ್ಲಿ ಬ್ಯಾಟಿಂಗ್ ವಿಭಾಗಕ್ಕಿಂತ ಬೌಲಿಂಗ್ ವಿಭಾಗ ಹೆಚ್ಚು ಬಲಿಷ್ಠವಾಗಿ ಕಾಣುತ್ತದೆ.

ವಿಶ್ವಕಪ್​ಗೆ ಉಭಯ ತಂಡಗಳು

ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋ, ಜೋ ರೂಟ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ, ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಡೇವಿಡ್ ವಿಲ್ಲಿ, ಸ್ಯಾಮ್ ಕರನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Wed, 4 October 23