ಏಕದಿನ ವಿಶ್ವಕಪ್​ಗೆ ಪರಿಷ್ಕೃತ ಇಂಗ್ಲೆಂಡ್ ತಂಡ ಪ್ರಕಟ; ಅನುಭವಿ ಔಟ್, ಯುವ ಬ್ಯಾಟರ್ ಇನ್..!

World Cup 2023: ಅಕ್ಟೋಬರ್ 5 ರಿಂದ ಆರಂಭವಾಗಿರುವ ಏಕದಿನ ವಿಶ್ವಕಪ್​ಗೆ ಹಾಲಿ ಚಾಂಪಿಯನ್ ಇಂಗ್ಲೆಂಡ್ ತನ್ನ 15 ಸದಸ್ಯರ ತಂಡವನ್ನು ಹೆಸರಿಸಿದೆ. ವಾಸ್ತವವಾಗಿ ಆಗಸ್ಟ್ 16 ರಂದು ಇಂಗ್ಲೆಂಡ್ ವಿಶ್ವಕಪ್‌ಗೆ ತನ್ನ ಸಂಭಾವ್ಯ ತಂಡವನ್ನು ಪ್ರಕಟಿಸಿತ್ತು. ಆದರೀಗ ಆ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಈ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ಮತ್ತು ಐಸಿಸಿ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ.

ಏಕದಿನ ವಿಶ್ವಕಪ್​ಗೆ ಪರಿಷ್ಕೃತ ಇಂಗ್ಲೆಂಡ್ ತಂಡ ಪ್ರಕಟ; ಅನುಭವಿ ಔಟ್, ಯುವ ಬ್ಯಾಟರ್ ಇನ್..!
ಇಂಗ್ಲೆಂಡ್ ತಂಡ
Follow us
|

Updated on:Sep 18, 2023 | 9:33 AM

ಅಕ್ಟೋಬರ್ 5 ರಿಂದ ಆರಂಭವಾಗಿರುವ ಏಕದಿನ ವಿಶ್ವಕಪ್​ಗೆ (World Cup 2023) ಹಾಲಿ ಚಾಂಪಿಯನ್ ಇಂಗ್ಲೆಂಡ್ ತನ್ನ 15 ಸದಸ್ಯರ ಪರಿಷ್ಕೃತ ತಂಡವನ್ನು ಹೆಸರಿಸಿದೆ. ವಾಸ್ತವವಾಗಿ ಆಗಸ್ಟ್ 16 ರಂದು ಇಂಗ್ಲೆಂಡ್ (England) ವಿಶ್ವಕಪ್‌ಗೆ ತನ್ನ ಸಂಭಾವ್ಯ ತಂಡವನ್ನು ಪ್ರಕಟಿಸಿತ್ತು. ಆದರೀಗ ಆ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಈ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ಮತ್ತು ಐಸಿಸಿ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ. ಅದರ ಪ್ರಕಾರ, ನ್ಯೂಜಿಲೆಂಡ್ ವಿರುದ್ಧದ ಸರಣಿ ವೇಳೆ ಇಂಜುರಿಗೆ ತುತ್ತಾದ ಆರಂಭಿಕ ಆಟಗಾರ ಜೇಸನ್ ರಾಯ್ (Jason Roy) ಅವರನ್ನು ತಂಡದಿಂದ ಕೈಬಿಟ್ಟಿದ್ದು, ಅವರ ಬದಲಾಗಿ ಹ್ಯಾರಿ ಬ್ರೂಕ್ (Harry Brook) ಅವರನ್ನು ವಿಶ್ವಕಪ್ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಈ ದಿಢೀರ್ ನಿರ್ಧಾರದಿಂದ ಕ್ರಿಕೆಟ್ ಅಭಿಮಾನಿಗಳೂ ಶಾಕ್ ಆಗಿದ್ದಾರೆ. ಅಲ್ಲದೆ, ಈ ನಿರ್ಧಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ಕಂಡುಬರುತ್ತಿವೆ.

ರಾಯ್ ಔಟ್, ಬ್ರೂಕ್ ಇನ್

ವಾಸ್ತವವಾಗಿ 2015 ರಲ್ಲಿ ಪ್ರಾರಂಭವಾದ ಇಂಗ್ಲೆಂಡ್‌ನ ವೈಟ್-ಬಾಲ್ ಕ್ರಾಂತಿಯ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿದ್ದ ರಾಯ್, ಗಾಯದ ಕಾರಣ ನ್ಯೂಜಿಲೆಂಡ್ ಸರಣಿಯನ್ನು ಕಳೆದುಕೊಂಡರು. ಹೀಗಾಗಿ ಮುಂಜಾಗೃತ ಕ್ರಮವಾಗಿ ರಾಯ್ ಅವರನ್ನು ವಿಶ್ವಕಪ್ ತಂಡದಿಂದ ಹೊರಗಿಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಹೀಗಾಗಿ ಬ್ರೂಕ್‌ಗೆ ಲಾಟರಿ ಹೊಡೆದಿದೆ. ಇನ್ನು ಇವರೊಂದಿಗೆ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಆಡಿದ್ದ 25ರ ಹರೆಯದ ಸರ್ರೆ ವೇಗಿ ಗಸ್ ಅಟ್ಕಿನ್ಸನ್ ಅವರಿಗೂ ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಾಗಿದೆ. ನ್ಯೂಜಿಲೆಂಡ್ ಸರಣಿಯಲ್ಲಿ ಮೂರು ಪಂದ್ಯಗಳನ್ನು ಆಡಿದ್ದ ಅಟ್ಕಿನ್ಸನ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಸ್ಯಾಮ್ ಕರನ್, ರೀಸ್ ಟೋಪ್ಲೆ, ಡೇವಿಡ್ ವಿಲ್ಲಿ ಸೇರಿದಂತೆ ಪ್ರಬಲ ವೇಗದ ದಾಳಿಯ ಭಾಗವಾಗಲಿದ್ದಾರೆ.

ವಿಶ್ವಕಪ್​ಗೂ ಮುನ್ನ ಬದಲಾದ ಇಂಗ್ಲೆಂಡ್ ನಾಯಕ! ಯುವ ಆಟಗಾರನಿಗೆ ತಂಡದ ನಾಯಕತ್ವ

ಅ.5 ರಂದು ಮೊದಲ ಪಂದ್ಯ

ಇನ್ನು ಇಂಗ್ಲೆಂಡ್ ತನ್ನ ವಿಶ್ವಕಪ್ ಅಭಿಯಾನವನ್ನು ಅಕ್ಟೋಬರ್ 5 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭಿಸಲಿದೆ. ಇಂಗ್ಲೆಂಡ್ ಹಾಲಿ ಚಾಂಪಿಯನ್ ಆಗಿರುವುದರಿಂದ 2019 ರ ಫೈನಲ್‌ನ ರನ್ನರ್ ಅಪ್ ತಂಡವಾಗಿದ್ದ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ತನ್ನ ಮೊದಲ ವಿಶ್ವಕಪ್ ಪಂದ್ಯವನ್ನಾಡಲಿದೆ. ಆದರೆ ವಿಶ್ವಕಪ್‌ಗೂ ಮೊದಲು ಇಂಗ್ಲೆಂಡ್, ಐರ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತದೆ. ಆದರೆ ಈ ಸರಣಿಗೆ ತಂಡದ ಪ್ರಮುಖ ಆಟಗಾರರು ಗೈರಾಗಲಿದ್ದು, ಇಂಗ್ಲೆಂಡ್​ನ 2ನೇ ಗ್ರೇಡ್ ತಂಡ ಕಣಕ್ಕಿಳಿಯಲಿದೆ.

ಇಂಗ್ಲೆಂಡ್ ಪರಿಷ್ಕೃತ ವಿಶ್ವಕಪ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:31 am, Mon, 18 September 23

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್