AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 5ನೇ ಟೆಸ್ಟ್ ಪಂದ್ಯಕ್ಕೆ 15 ಸದಸ್ಯರ ಬಲಿಷ್ಠ ತಂಡ ಪ್ರಕಟಿಸಿದ ಇಂಗ್ಲೆಂಡ್‌

India vs England 5th Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಓವಲ್‌ನಲ್ಲಿ ನಡೆಯಲಿದೆ. ಇದೀಗ ಈ ಟೆಸ್ಟ್ ಪಂದ್ಯಕ್ಕೆ ಆತಿಥೇಯ ಇಂಗ್ಲೆಂಡ್ ತನ್ನ 15 ಸದಸ್ಯರ ತಂಡವನ್ನು ಘೋಷಿಸಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಯಾವ ತಂಡ ಜಯಗಳಿಸುತ್ತದೆ ಎಂಬುದು ಕುತೂಹಲಕಾರಿಯಾಗಿದೆ.

IND vs ENG: 5ನೇ ಟೆಸ್ಟ್ ಪಂದ್ಯಕ್ಕೆ 15 ಸದಸ್ಯರ ಬಲಿಷ್ಠ ತಂಡ ಪ್ರಕಟಿಸಿದ ಇಂಗ್ಲೆಂಡ್‌
ಇಂಗ್ಲೆಂಡ್ ತಂಡ
ಪೃಥ್ವಿಶಂಕರ
|

Updated on:Jul 28, 2025 | 2:53 PM

Share

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ 4ನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇದೀಗ ಉಭಯ ತಂಡಗಳ ನಡುವಿನ ಸರಣಿಯ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಓವಲ್‌ನಲ್ಲಿ (Oval Test Match) ನಡೆಯಲಿದ್ದು, ಈ ನಿರ್ಣಾಯಕ ಟೆಸ್ಟ್ ಪಂದ್ಯಕ್ಕೆ ಆತಿಥೇಯ ಇಂಗ್ಲೆಂಡ್ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. 5ನೇ ಟೆಸ್ಟ್‌ಗೆ ಆಯ್ಕೆಯಾದ ತಂಡದ ವಿಶೇಷವೆಂದರೆ 3 ವರ್ಷಗಳ ಹಿಂದೆ ತಮ್ಮ ವೃತ್ತಿಜೀವನದ ಏಕೈಕ ಟೆಸ್ಟ್ ಪಂದ್ಯವನ್ನಾಡಿದ ಆಲ್​ರೌಂಡರ್ ಜೇಮೀ ಓವರ್ಟನ್ (Jamie Overton) ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಉಳಿದಂತೆ ಇಂಗ್ಲೆಂಡ್ ತನ್ನ ತಂಡದಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಿಲ್ಲ.

ಡ್ರಾಗೊಂಡ ಮ್ಯಾಂಚೆಸ್ಟರ್ ಟೆಸ್ಟ್

ಪ್ರಸ್ತುತ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಪಡೆದುಕೊಂಡಿರುವ ಬೆನ್ ಸ್ಟೋಕ್ಸ್ ಪಡೆ, ಮ್ಯಾಂಚೆಸ್ಟರ್ ಟೆಸ್ಟ್ ಗೆಲ್ಲುವ ಆತ್ಮ ವಿಶ್ವಾಸದಿಂದ ಬೀಗುತ್ತಿತ್ತು. ಇದಕ್ಕೆ ಕಾರಣ, ಈ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ ಕಲೆಹಾಕಿದ ರನ್​ಗಳು. ಭಾರತವನ್ನು 358 ರನ್​ಗಳಿಗೆ ಆಲೌಟ್ ಮಾಡಿ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಬರೋಬ್ಬರಿ 669 ರನ್ ಪೇರಿಸಿತ್ತು. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ 311 ರನ್​ಗಳ ಬೃಹತ್ ಮುನ್ನಡೆಯನ್ನು ಪಡೆದುಕೊಂಡಿತ್ತು. ಅಲ್ಲದೆ ಎರಡನೇ ಇನ್ನಿಂಗ್ಸ್​ನಲ್ಲಿ ಭಾರತದ 2 ವಿಕೆಟ್​ಗಳನ್ನು ಶೂನ್ಯಕ್ಕೆ ಉರುಳಿಸಿತ್ತು. ಹೀಗಾಗಿ ಆತಿಥೇಯ ಆಂಗ್ಲರು ಇನ್ನಿಂಗ್ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದರೆ ಮೊದಲೆರಡು ಆಘಾತಗಳಿಂದ ಎಚ್ಚೆತ್ತುಕೊಂಡಿದ್ದ ಗಿಲ್ ಪಡೆ, ಆಂಗ್ಲರ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಓವಲ್​ನಲ್ಲಿ ನಿರ್ಣಾಯಕ ಪಂದ್ಯ

ಹೀಗಾಗಿ ಓವಲ್​​ನಲ್ಲಿ ನಡೆಯಲ್ಲಿರುವ ಐದನೇ ಟೆಸ್ಟ್ ಪಂದ್ಯದ ಉಭಯ ತಂಡಗಳಿಗೂ  ನಿರ್ಣಾಯಕವಾಗಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ ಸರಣಿ ಅದರ ಕೈವಶವಾಗಲಿದೆ. ಇತ್ತ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದರೆ, ಸರಣಿ 2-2 ರ ಸಮಬಲದೊಂದಿಗೆ ಅಂತ್ಯಗೊಳ್ಳಲಿದೆ. ಹೀಗಾಗಿ ಶತಾಯಗತಾಯ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡ ಉಭಯ ತಂಡಗಳಿಗಿದೆ. ಅದರಂತೆ ಇಂಗ್ಲೆಂಡ್ ತನ್ನ ತಂಡಕ್ಕೆ ಆಲ್‌ರೌಂಡರ್ ಜೇಮೀ ಓವರ್ಟನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದರೆ, ಇತ್ತ ಟೀಂ ಇಂಡಿಯಾ ಕೂಡ ಗಾಯಗೊಂಡಿರುವ ರಿಷಭ್ ಪಂತ್ ಬದಲಿಗೆ ಎನ್ ಜಗದೀಸನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ.

IND vs ENG: ಭಾರತದ ಸಾಂಘಿಕ ಹೋರಾಟಕ್ಕೆ ತಲೆಬಾಗಿದ ಇಂಗ್ಲೆಂಡ್‌; 4ನೇ ಟೆಸ್ಟ್ ಡ್ರಾನಲ್ಲಿ ಅಂತ್ಯ

3 ವರ್ಷಗಳ ನಂತರ ಅವಕಾಶ

ಇನ್ನು ಇಂಗ್ಲೆಂಡ್ ಆಯ್ಕೆ ಮಾಡಿರುವ ತಂಡಕ್ಕೆ ಹೊಸದಾಗಿ ಎಂಟ್ರಿಕೊಟ್ಟಿರುವ ಆಲ್​ರೌಂಡರ್ ಜೇಮೀ ಓವರ್ಟನ್ 3 ವರ್ಷಗಳ ನಂತರ ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 2022 ರಲ್ಲಿ ಇಂಗ್ಲೆಂಡ್ ಪರ ಪಾದಾರ್ಪಣೆ ಮಾಡಿದ್ದ ಓವರ್ಟನ್, ಲೀಡ್ಸ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ 2 ವಿಕೆಟ್‌ಗಳನ್ನು ಪಡೆಯುವುದರ ಜೊತೆಗೆ ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 97 ರನ್‌ ಕಲೆಹಾಕಿದರು. ಆದಾಗ್ಯೂ, ಆ ಒಂದು ಟೆಸ್ಟ್ ನಂತರ, ಜೇಮೀ ಓವರ್ಟನ್ ಮತ್ತೆ ಇಂಗ್ಲೆಂಡ್‌ ಟೆಸ್ಟ್ ತಂಡದಿಂದ ಹೊರಗುಳಿದಿದ್ದರು. ಆದರೀಗ 3 ವರ್ಷಗಳ ನಂತರ ಮತ್ತೆ ತಂಡಕ್ಕೆ ಮರಳಿರುವ ಓವರ್ಟನ್​ಗೆ ಪ್ಲೇಯಿಂಗ್ 11ನಲ್ಲೂ ಅವಕಾಶ ಸಿಗುವ ಸಾಧ್ಯತೆಗಳಿವೆ

5ನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್‌ ತಂಡ: ಬೆನ್ ಸ್ಟೋಕ್ಸ್ (ನಾಯಕ), ಜೋ ರೂಟ್, ಕ್ರಿಸ್ ವೋಕ್ಸ್, ಜ್ಯಾಕ್ ಕ್ರೌಲಿ, ಹ್ಯಾರಿ ಬ್ರೂಕ್, ಬೆನ್ ಡಕೆಟ್, ಬ್ರೈಡನ್ ಕಾರ್ಸೆ, ಗಸ್ ಅಟ್ಕಿನ್ಸನ್, ಜೇಮೀ ಓವರ್ಟನ್, ಓಲಿ ಪೋಪ್, ಲಿಯಾಮ್ ಡಾಸನ್, ಜೇಮೀ ಸ್ಮಿತ್, ಜಾಕೋಬ್ ಬೆಥೆಲ್, ಜೋಫ್ರಾ ಆರ್ಚರ್, ಜೋಶ್ ಟಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Mon, 28 July 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ