IND vs ENG: ಬಲಿಷ್ಠ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್

India vs England: ಭಾರತ ಮತ್ತು ಇಂಗ್ಲೆಂಡ್ ನಡುವೆ ಒಟ್ಟು 8 ಪಂದ್ಯಗಳ ಸರಣಿ ನಡೆಯಲಿದೆ. ಮೊದಲಿಗೆ ಐದು ಮ್ಯಾಚ್​ಗಳ ಟಿ20 ಸರಣಿ ಜರುಗಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಪಂದ್ಯಗಳ ಮೂಲಕ ಮನರಂಜನೆಯ ಅಸಲಿ ರಸದೌತಣ ಒದಗಿಸಲು ಉಭಯ ತಂಡಗಳು ಸಜ್ಜಾಗಿ ನಿಂತಿದೆ.

IND vs ENG: ಬಲಿಷ್ಠ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್
England
Image Credit source: Espn

Updated on: Jul 01, 2026 | 8:09 AM

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ಇಂದಿನಿಂದ (ಜು.1) ಶುರುವಾಗಲಿದೆ. ಚೆಸ್ಟರ್-ಲೆ-ಸ್ಟ್ರೀಟ್‌ನ ರಿವರ್‌ಸೈಡ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡವು ತನ್ನ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದೆ. ಬಲಿಷ್ಠ ದಾಂಡಿಗರ ದಂಡನ್ನೇ ಹೊಂದಿರುವ ಈ ಆಡುವ ಬಳಗವನ್ನು ಯುವ ಸ್ಫೊಟಕ ಬ್ಯಾಟರ್ ಹ್ಯಾರಿ ಬ್ರೂಕ್ ಮುನ್ನಡೆಸಲಿದ್ದಾರೆ.

ಇನ್ನು ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ ನಾಲ್ವರು ಬ್ಯಾಟರ್​ಗಳಿದ್ದರೆ, 4 ಮಂದಿ ಆಲ್​ರೌಂಡರ್​ಗಳಿದ್ದಾರೆ. ಅಂದರೆ 8ನೇ ಕ್ರಮಾಂಕದವರೆಗೆ ಬ್ಯಾಟ್ಸ್​ಮನ್​ಗಳು ಮುಂದುವರೆಯಲಿದ್ದಾರೆ. ಇನ್ನು ಬೌಲರ್​ಗಳಾಗಿ 2 ವೇಗಿಗಳನ್ನು ಹಾಗೂ ಏಕೈಕ ಸ್ಪಿನ್ನರ್ ಅನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಇಂಗ್ಲೆಂಡ್ ಪ್ಲೇಯಿಂಗ್ XI

ಆಟಗಾರರು ಪಾತ್ರ
ಫಿಲ್ ಸಾಲ್ಟ್  ಬ್ಯಾಟರ್
ಜೋಸ್ ಬಟ್ಲರ್ ವಿಕೆಟ್ ಕೀಪರ್/ ಬ್ಯಾಟರ್
ಹ್ಯಾರಿ ಬ್ರೂಕ್  ನಾಯಕ / ಬ್ಯಾಟರ್
ಜೇಕಬ್ ಬೆಥೆಲ್ ಆಲ್ ರೌಂಡರ್
ಟಾಮ್ ಬ್ಯಾಂಟನ್ ಬ್ಯಾಟರ್
ಸ್ಯಾಮ್ ಕರನ್ ಆಲ್ ರೌಂಡರ್
ವಿಲ್ ಜಾಕ್ಸ್ ಆಲ್ ರೌಂಡರ್
ಲಿಯಾಮ್ ಡಾಸನ್ ಆಲ್ ರೌಂಡರ್
ಸಾಕಿಬ್ ಮಹಮೂದ್ ವೇಗದ ಬೌಲರ್
ಆದಿಲ್ ರಶೀದ್  ಸ್ಪಿನ್ ಬೌಲರ್
ಲ್ಯೂಕ್ ವುಡ್ ವೇಗದ ಬೌಲರ್

ಯಾರೆಲ್ಲಾ ಅಲಭ್ಯ?

ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ವೇಗಿಗಳಾದ ಜೋಫ್ರಾ ಆರ್ಚರ್ ಮತ್ತು ಜೋಶ್ ಟಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಫಿಟ್​ನೆಸ್ ಸಮಸ್ಯೆಯ ಕಾರಣ ಜೇಮಿ ಓವರ್ಟನ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ರಿವರ್‌ಸೈಡ್ ಮೈದಾನದಲ್ಲಿ ಟೀಮ್ ಇಂಡಿಯಾ ವಿರುದ್ಧ ವೇಗಿಗಳಾಗಿ ಸಾಕಿಬ್ ಮಹಮೂದ್ ಹಾಗೂ ಲ್ಯೂಕ್ ವುಡ್ ಕಣಕ್ಕಿಳಿಯಲಿದ್ದಾರೆ.

ಇಂಗ್ಲೆಂಡ್ ಟಿ20 ತಂಡ: ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಫಿಲ್ ಸಾಲ್ಟ್, ಜೋರ್ಡನ್ ಕಾಕ್ಸ್ (ವಿಕೆಟ್ ಕೀಪರ್), ಟಾಮ್ ಬ್ಯಾಂಟನ್, ಜೋಫ್ರಾ ಆರ್ಚರ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಕಬ್ ಬೆಥೆಲ್, ಜೇಮ್ಸ್ ಕೋಲ್ಸ್, ಆದಿಲ್ ರಶೀದ್, ರೆಹಾನ್ ಅಹ್ಮದ್, ಲಿಯಾಮ್ ಡಾಸನ್, ಸಾಕಿಬ್ ಮಹಮೂದ್, ಜೋಶ್ ಟಂಗ್, ಲ್ಯೂಕ್ ವುಡ್, ಸೋನಿ ಬೇಕರ್.

ಇದನ್ನೂ ಓದಿ: IND vs ENG: 6 ಎಡಗೈ ದಾಂಡಿಗರು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

 

Published On - 8:04 am, Wed, 1 July 26

Follow Us