2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿಯ ಆತಿಥ್ಯಕ್ಕೆ ಸಂಬಂಧಿಸಿದಂತೆ ಎದ್ದಿದ್ದ ಗೊಂದಲಗಳಿಗೆ ಕೊನೆಗೂ ತೆರೆ ಬಿದ್ದಿದ್ದು, ಈ ಐಸಿಸಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಹೀಗಾಗಿ ಸ್ವಲ್ಪ ದಿನದಲ್ಲೇ ಈ ಟೂರ್ನಿಯ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ. ಆದರೆ ಈ ನಡುವೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ಮುಂದಿನ ವರ್ಷ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ಹಾಗೂ ಭಾರತ ಪ್ರವಾಸಕ್ಕಾಗಿ ತನ್ನ ತಂಡವನ್ನು ಪ್ರಕಟಿಸಿದೆ. ಈ ಮೂಲಕ ಟೂರ್ನಿಗೆ ತನ್ನ ತಂಡವನ್ನು ಪ್ರಕಟಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಇಂಗ್ಲೆಂಡ್ ಪಾತ್ರವಾಗಿದೆ. ಚಾಂಪಿಯನ್ಸ್ ಟ್ರೋಫಿ ಮಾತ್ರವಲ್ಲದೆ, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ಏಕದಿನ ಮತ್ತು ಟಿ20 ತಂಡಗಳನ್ನು ಸಹ ಪ್ರಕಟಿಸಿದೆ.
ಇಂಗ್ಲೆಂಡ್ ಆಯ್ಕೆ ಮಾಡಿರುವ ತಂಡಕ್ಕೆ ಜೋಸ್ ಬಟ್ಲರ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಇದಲ್ಲದೇ ಟೆಸ್ಟ್ ಮಾದರಿಯಲ್ಲಿ ರನ್ಗಳ ಶಿಖರ ಕಟ್ಟುತ್ತಿರುವ ಜೋ ರೂಟ್ ಅವರನ್ನು ಸಹ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೆ ತಂಡದ ಸ್ಫೋಟಕ ಬ್ಯಾಟರ್ ಬೆನ್ ಸ್ಟೋಕ್ಸ್ಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ವಾಸ್ತವವಾಗಿ ಏಕದಿನ ಮಾದರಿಗೆ ವಿದಾಯ ಹೇಳಿದ್ದ ಬೆನ್ ಸ್ಟೋಕ್ಸ್ 2023ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಆಡುವ ಸಲುವಾಗಿ ತಮ್ಮ ನಿರ್ಧಾರವನ್ನು ಬದಲಾಯಿಸಿದ್ದರು. ಆದಾಗ್ಯೂ ಏಕದಿನ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡಕ್ಕೆ ಯಾವುದೇ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಪ್ರಸ್ತುತ, ಗಾಯದ ಕಾರಣ ಭಾರತ ಪ್ರವಾಸ ಮತ್ತು ಚಾಂಪಿಯನ್ಸ್ ಟ್ರೋಫಿಗೆ ಬೆನ್ ಸ್ಟೋಕ್ಸ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ ಎಂದು ಹೇಳಲಾಗುತ್ತಿದೆ.
Breaking squad news! 🚨
Our squads to tour India and for the Champions Trophy! 📝
Click below for the details 👇
— England Cricket (@englandcricket) December 22, 2024
ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬ್ಯಾಚೆಲರ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬ್ಯಾಟ್ಚೆಲರ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:33 pm, Sun, 22 December 24