England: 0,0,0,0,0,0: ಶೂನ್ಯಕ್ಕೆ ಔಟಾಗುವ ಮೂಲಕ ಹೀನಾಯ ದಾಖಲೆ ಬರೆದ ಇಂಗ್ಲೆಂಡ್
ಇಂಗ್ಲೆಂಡ್ ತಂಡವು ಈ ಬಾರಿ ಆ್ಯಶಸ್ ಸರಣಿಯಲ್ಲಿ ಸತತ ವಿಫಲರಾಗುತ್ತಿದ್ದು, 5 ಪಂದ್ಯಗಳ ಸರಣಿಯಲ್ಲಿ ಮೊದಲೆರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಅಷ್ಟೇ ಅಲ್ಲದೆ ಇದುವರೆಗೆ ಆಡಿದ 5 ಇನ್ನಿಂಗ್ಸ್‌ಗಳಲ್ಲಿ ತಂಡವು 300 ರನ್‌ಗಳ ಗಡಿ ಮುಟ್ಟಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.
ಆಸ್ಟ್ರೇಲಿಯಾ-ಇಂಗ್ಲೆಂಡ್ ನಡುವೆ ಪ್ರತಿಷ್ಠಿತ ಆ್ಯಶಸ್ ಸರಣಿ ನಡೆಯುತ್ತಿದೆ. ಮೊದಲ ಎರಡು ಪಂದ್ಯಗಳಲ್ಲಿ ಸೋತಿರುವ ಇಂಗ್ಲೆಂಡ್ ಇದೀಗ ಅತ್ಯಂತ ಹೀನಾಯ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್ಗಳು ಶೂನ್ಯಕ್ಕೆ ಔಟಾಗುವುದರೊಂದಿಗೆ ಈ ವರ್ಷ ಅತೀ ಹೆಚ್ಚು ಬಾರಿ ಸೊನ್ನೆಗೆ ಔಟಾದ ತಂಡ ಎನಿಸಿಕೊಂಡಿದೆ. ಆಸೀಸ್ ವಿರುದ್ದದ 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆರಂಭಿಕ ಬ್ಯಾಟರ್ ಹಸೀಬ್ ಹಮೀದ್ (0) ಖಾತೆ ತೆರೆಯದೇ ಮರಳುವುದರೊಂದಿಗೆ 2021 ರಲ್ಲಿ 50 ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರುಗಳ ತಂಡ ಎಂಬ ಕೆಟ್ಟ ದಾಖಲೆಯನ್ನು ಇಂಗ್ಲೆಂಡ್ ತನ್ನದಾಗಿಸಿಕೊಂಡಿದೆ.
ಇದಕ್ಕೂ ಮುನ್ನ ಇಂತಹ ಹೀನಾಯ ದಾಖಲೆ ಬರೆದಿದ್ದೂ ಕೂಡ ಇಂಗ್ಲೆಂಡ್ ಎಂಬುದು ವಿಶೇಷ. 1998 ರಲ್ಲಿ ಇಂಗ್ಲೆಂಡ್ ಆಟಗಾರರು 54 ಬಾರಿ ಶೂನ್ಯಕ್ಕೆ ಔಟಾಗುವ ಮೂಲಕ ಅತಿ ಹೆಚ್ಚು ಬಾರಿ ಸೊನ್ನೆ ಔಟಾದ ತಂಡ ಎನಿಸಿಕೊಂಡಿತು. ಇದೀಗ 2021 ರಲ್ಲೂ 50 ಬಾರಿ ಶೂನ್ಯಕ್ಕೆ ಔಟಾಗಿ ಇಂಗ್ಲೆಂಡ್ ಹೀನಾಯ ದಾಖಲೆಯನ್ನು ಪುನರಾವರ್ತಿಸಿದ್ದಾರೆ. ಇನ್ನೊಂದೆಡೆ ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ನ 2ನೇ ಇನಿಂಗ್ಸ್ ಇನ್ನೂ ಕೂಡ ಬಾಕಿಯಿದ್ದು, ಹೀಗಾಗಿ 54 ಶೂನ್ಯದ ದಾಖಲೆಯನ್ನು ಇಂಗ್ಲೆಂಡ್ ಮುರಿಯಲಿದ್ದಾರಾ ಕಾದು ನೋಡಬೇಕಿದೆ.
ಇನ್ನು ಇಂಗ್ಲೆಂಡ್ ತಂಡವು ಈ ಬಾರಿ ಆ್ಯಶಸ್ ಸರಣಿಯಲ್ಲಿ ಸತತ ವಿಫಲರಾಗುತ್ತಿದ್ದು, 5 ಪಂದ್ಯಗಳ ಸರಣಿಯಲ್ಲಿ ಮೊದಲೆರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಅಷ್ಟೇ ಅಲ್ಲದೆ ಇದುವರೆಗೆ ಆಡಿದ 5 ಇನ್ನಿಂಗ್ಸ್‌ಗಳಲ್ಲಿ ತಂಡವು 300 ರನ್‌ಗಳ ಗಡಿ ಮುಟ್ಟಲು ಸಾಧ್ಯವಾಗಿಲ್ಲ ಎಂಬುದು ವಿಶೇಷ. 5 ಇನ್ನಿಂಗ್ಸ್‌ಗಳಲ್ಲಿ ತಂಡವು ಕ್ರಮವಾಗಿ 147, 297, 236, 192 ಮತ್ತು 185 ರನ್ ಮಾತ್ರ ಗಳಿಸಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಒಂದು ವೇಳೆ ಇಂಗ್ಲೆಂಡ್ ತಂಡ ಈ ಪಂದ್ಯದಲ್ಲಿ ಸೋತರೆ ಅದು ಈ ವರ್ಷದ 9ನೇ ಸೋಲಾಗಲಿದೆ. ಇದರೊಂದಿಗೆ ಟೆಸ್ಟ್ ಇತಿಹಾಸದಲ್ಲಿ ಒಂದು ವರ್ಷದಲ್ಲಿ ಇಂಗ್ಲೆಂಡ್ ತಂಡದ ಅತ್ಯಂತ ಕಳಪೆ ಪ್ರದರ್ಶನವಾಗಿರಲಿದೆ.
ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…
ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್ಸಿಬಿ ನಾಯಕ
(England Batters Dismissed 50 Times For Zero In 2021)