ENG vs SL: ಗಸ್ ಮಿಂಚಿಂಗ್: ಶ್ರೀಲಂಕಾ ವಿರುದ್ಧ ಸರಣಿ ಗೆದ್ದ ಇಂಗ್ಲೆಂಡ್

England vs Sri Lanka: ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫೋರ್ಡ್ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ಲಾರ್ಡ್ಸ್​ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಆಂಗ್ಲರು ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಮೊದಲೆರಡು ಪಂದ್ಯಗಳ ಮೂಲಕವೇ ವಶಪಡಿಸಿಕೊಂಡಿದೆ.

ENG vs SL: ಗಸ್ ಮಿಂಚಿಂಗ್: ಶ್ರೀಲಂಕಾ ವಿರುದ್ಧ ಸರಣಿ ಗೆದ್ದ ಇಂಗ್ಲೆಂಡ್
England
Follow us
ಝಾಹಿರ್ ಯೂಸುಫ್
|

Updated on: Sep 02, 2024 | 7:21 AM

ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಇಂಗ್ಲೆಂಡ್ ತಂಡ ಜಯಭೇರಿ ಬಾರಿಸಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ 190 ರನ್​ಗಳ ಅಮೋಘ ಗೆಲುವಿನೊಂದಿಗೆ ಆತಿಥೇಯರು ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಧನಂಜಯ ಡಿಸಿಲ್ವಾ ಬೌಲಿಂಗ್ ಆಯ್ದುಕೊಂಡಿದ್ದರು.

ಪ್ರಥಮ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಆರಂಭಿಕ ಆಟಗಾರ ಬೆನ್ ಡಕೆಟ್ 40 ರನ್ ಬಾರಿಸಿದ್ದರು. ಆ ಬಳಿಕ ಕಣಕ್ಕಿಳಿದ ಜೋ ರೂಟ್ 143 ರನ್​ಗಳ ಆಕರ್ಷಕ ಶತಕ ಸಿಡಿಸಿದರೆ, ಗಸ್ ಅಟ್ಕಿನ್ಸನ್ 118 ರನ್ ಬಾರಿಸಿದರು. ಈ ಮೂಲಕ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 427 ರನ್​ ಪೇರಿಸಿ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಶ್ರೀಲಂಕಾ ಪರ ಕಮಿಂದು ಮೆಂಡಿಸ್ 74 ರನ್ ಬಾರಿಸಿದರೂ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 196 ರನ್​ಗಳಿಗೆ ಆಲೌಟ್ ಆದರು.

231 ರನ್​ಗಳ ಬೃಹತ್ ಮುನ್ನಡೆ:

ಪ್ರಥಮ ಇನಿಂಗ್ಸ್​ನ 231 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಲಂಕಾ ಬೌಲರ್​ಗಳ ಸಾಂಘಿಕ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದರು. ಇದಾಗ್ಯೂ ಒಂದೆಡೆ ಬಂಡೆಯಂತೆ ನೆಲೆಯೂರಿದ ಜೋ ರೂಟ್ 121 ಎಸೆತಗಳಲ್ಲಿ 103 ರನ್​ಗಳ ಕೊಡುಗೆ ನೀಡಿದರು. ಈ ಶತಕದ ನೆರವಿನಿಂದ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 251 ರನ್​ಗಳಿಸಿತು.

ಶ್ರೀಲಂಕಾಗೆ 483 ರನ್​ಗಳ ಗುರಿ:

ಮೊದಲ ಇನಿಂಗ್ಸ್​ನ 231 ರನ್​ಗಳ ಹಿನ್ನಡೆಯೊಂದಿಗೆ ಶ್ರೀಲಂಕಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 483 ರನ್​ಗಳ ಗುರಿ ಪಡೆಯಿತು. ಈ ಗುರಿಯನ್ನು ಬೆನ್ನತ್ತಿದ ಲಂಕನ್ನರಿಗೆ ವೇಗಿ ಗಸ್ ಅಟ್ಕಿನ್ಸನ್ ಆಘಾತದ ಮೇಲೆ ಆಘಾತ ನೀಡಿದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ದಿನೇಶ್ ಚಂಡಿಮಲ್ (58) ಹಾಗೂ ಧನಂಜಯ ಡಿಸಿಲ್ವಾ (50) ತಂಡಕ್ಕೆ ಆಸರೆಯಾಗಿ ನಿಂತರು.

ಆದರೆ ಆಂಗ್ಲರ ಸಾಂಘಿಕ ದಾಳಿಗೆ ನಲುಗಿದ ಶ್ರೀಲಂಕಾ ಅಂತಿಮವಾಗಿ 292 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 190 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಗಸ್ ಮಿಂಚಿಂಗ್:

ಮೊದಲ ಇನಿಂಗ್ಸ್​ನಲ್ಲಿ 118 ರನ್​ಗಳ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ಗಸ್ ಅಟ್ಕಿನ್ಸನ್ ದ್ವಿತೀಯ ಇನಿಂಗ್ಸ್​ನಲ್ಲಿ 5 ವಿಕೆಟ್ ಕಬಳಿಸಿದ್ದು ವಿಶೇಷ. ಎರಡನೇ ಇನಿಂಗ್ಸ್​ನಲ್ಲಿ 16 ಓವರ್​ಗಳನ್ನು ಎಸೆದ ಗಸ್ 62 ರನ್​ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಲಂಕಾ ತಂಡ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಭರ್ಜರಿ ಪ್ರದರ್ಶನಗಳ ಫಲವಾಗಿ ಗಸ್ ಅಟ್ಕಿನ್ಸನ್​ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿಯಿತು.

ಶ್ರೀಲಂಕಾ ಪ್ಲೇಯಿಂಗ್ 11: ದಿಮುತ್ ಕರುಣಾರತ್ನೆ , ಪಾತುಮ್ ನಿಸ್ಸಾಂಕ , ನಿಶಾನ್ ಮದುಷ್ಕ (ವಿಕೆಟ್ ಕೀಪರ್) , ಏಂಜೆಲೊ ಮ್ಯಾಥ್ಯೂಸ್ , ದಿನೇಶ್ ಚಂಡಿಮಾಲ್ , ಧನಂಜಯ ಡಿ ಸಿಲ್ವಾ (ನಾಯಕ) , ಕಮಿಂದು ಮೆಂಡಿಸ್ , ಪ್ರಭಾತ್ ಜಯಸೂರ್ಯ , ಅಸಿತ ಫೆರ್ನಾಂಡೋ , ಲಹಿರು ಕುಮಾರ , ಮಿಲನ್ ಪ್ರಿಯನಾಥ ರತ್ನಾಯಕೆ.

ಇದನ್ನೂ ಓದಿ: IPL 2025: LSG ನಾಯಕತ್ವದಿಂದ ಕೆಎಲ್ ರಾಹುಲ್​ ಕಿಕ್ ಔಟ್?

ಇಂಗ್ಲೆಂಡ್ ಪ್ಲೇಯಿಂಗ್ 11: ಬೆನ್ ಡಕೆಟ್ , ಡೇನಿಯಲ್ ಲಾರೆನ್ಸ್ , ಒಲೀ ಪೋಪ್ (ನಾಯಕ) , ಜೋ ರೂಟ್ , ಹ್ಯಾರಿ ಬ್ರೂಕ್ , ಜೇಮೀ ಸ್ಮಿತ್ (ವಿಕೆಟ್ ಕೀಪರ್) ಕ್ರಿಸ್ ವೋಕ್ಸ್ , ಗಸ್ ಅಟ್ಕಿನ್ಸನ್ , ಮ್ಯಾಥ್ಯೂ ಪಾಟ್ಸ್ , ಓಲೀ ಸ್ಟೋನ್ , ಶೋಯೆಬ್ ಬಶೀರ್.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ