AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ben Stokes: ಗಾಯಗೊಂಡ ಬೆನ್ ಸ್ಟೋಕ್ಸ್​: ಮುಂದಿನ ಸರಣಿಗೆ ಅನುಮಾನ

ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಣ ಮೊದಲ ಟೆಸ್ಟ್ ಪಂದ್ಯವು ಆಗಸ್ಟ್ 21 ರಿಂದ ಶುರುವಾಗಲಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಓಲ್ಡ್ ಟ್ರಾಫರ್ಡ್ ಮೈದಾನ ಆತಿಥ್ಯವಹಿಸಲಿದ್ದು, 2ನೇ ಟೆಸ್ಟ್ ಪಂದ್ಯವು ಆಗಸ್ಟ್ 29 ರಂದು ಶುರುವಾಗಲಿದೆ. ಹಾಗೆಯೇ ಮೂರನೇ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 6 ರಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಗಳಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಕಣಕ್ಕಿಳಿಯುವುದು ಅನುಮಾನ.

Ben Stokes: ಗಾಯಗೊಂಡ ಬೆನ್ ಸ್ಟೋಕ್ಸ್​: ಮುಂದಿನ ಸರಣಿಗೆ ಅನುಮಾನ
Ben Stokes
ಝಾಹಿರ್ ಯೂಸುಫ್
|

Updated on: Aug 12, 2024 | 1:42 PM

Share

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮತ್ತೆ ಗಾಯಗೊಂಡಿದ್ದಾರೆ. ದಿ ಹಂಡ್ರೆಡ್ ಲೀಗ್​ ಟೂರ್ನಿಯಲ್ಲಿ ಕಣಕ್ಕಿಳಿದಿದ್ದ ಸ್ಟೋಕ್ಸ್ ಮಂಡಿರಜ್ಜು ಗಾಯದ ಸಮಸ್ಯೆಗೆ ತುತ್ತಾಗಿದ್ದು, ಹೀಗಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದಾರೆ. ಮ್ಯಾಚೆಂಸ್ಟರ್​ನ ಒಲ್ಡ್​ ಟ್ರಾಫರ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ vs ನಾರ್ಥನ್ ಸೂಪರ್‌ಚಾರ್ಜರ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು 100 ಎಸೆತಗಳಲ್ಲಿ 7 ವಿಕೆಟ್ ಕಳೆದುಕೊಂಡು 152 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಲು ನಾರ್ಥನ್ ಸೂಪರ್​​ಚಾರ್ಜರ್ಸ್ ಪರ ಬೆನ್ ಸ್ಟೋಕ್ಸ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಬ್ಯಾಟಿಂಗ್ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾದ ಸ್ಟೋಕ್ಸ್ ಮೈದಾನದಲ್ಲೇ ಕುಸಿದು ಬಿದ್ದಿದ್ದರು.

ಆ ಬಳಿಕ ಅವರಿಗೆ ನಿಲ್ಲಲು ಕೂಡ ಸಾಧ್ಯವಾಗಿರಲಿಲ್ಲ. ಹೀಗಾಗಿ ತಂಡದ ಸಿಬ್ಬಂದಿಗಳ ತೋಳಿನ ನೆರವಿನೊಂದಿಗೆ ಬೆನ್ ಸ್ಟೋಕ್ಸ್ ಮೈದಾನ ತೊರೆದಿದ್ದರು. ಅಲ್ಲದೆ ಅವರು ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ನಾರ್ಥನ್ ಸೂಪರ್​​ಚಾರ್ಜರ್ಸ್ ಮೂಲಗಳು ತಿಳಿಸಿವೆ.

ಆಗಸ್ಟ್ 21 ರಿಂದ ಟೆಸ್ಟ್ ಸರಣಿ:

ಅತ್ತ ಬೆನ್ ಸ್ಟೋಕ್ಸ್ ಗಾಯಗೊಂಡಿದ್ದ ಇತ್ತ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಗೆ ಡೇಟ್ ಫಿಕ್ಸ್ ಆಗಿದೆ. ಅದರಂತೆ ಆಗಸ್ಟ್ 21 ರಿಂದ ಲಂಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ಶುರುವಾಗಲಿದೆ. ಇದೀಗ ಗಾಯಗೊಂಡಿರುವ ಬೆನ್ ಸ್ಟೋಕ್ಸ್ ಈ ಸರಣಿಗೆ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

ಇಂಗ್ಲೆಂಡ್ ನಾಯಕ ಯಾರು?

ಬೆನ್ ಸ್ಟೋಕ್ಸ್ ಹೊರಗುಳಿದರೆ ಇಂಗ್ಲೆಂಡ್ ಟೆಸ್ಟ್ ತಂಡವನ್ನು ಒಲೀ ಪೋಪ್ ಮುನ್ನಡೆಸುವ ಸಾಧ್ಯತೆಯಿದೆ. ಏಕೆಂದರೆ ಅತ್ತ ಗಾಯಗೊಂಡಿರುವ ಝಾಕ್ ಕ್ರಾಲಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಸ್ಟೋಕ್ಸ್ ಅವರ ಹಂಗಾಮಿ ನಾಯಕನಾಗಿ ಒಲೀ ಪೋಪ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಯ ದಾಖಲೆ ಮುರಿದ ಬೆನ್ ಸ್ಟೋಕ್ಸ್​

ಇಂಗ್ಲೆಂಡ್ ಟೆಸ್ಟ್ ತಂಡ: ಜೋ ರೂಟ್, ಗಸ್ ಅಟ್ಕಿನ್ಸನ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಜೋರ್ಡಾನ್ ಕಾಕ್ಸ್, ಬೆನ್ ಡಕೆಟ್, ಡಾನ್ ಲಾರೆನ್ಸ್, ಒಲೀ ಪೋಪ್, ಮ್ಯಾಥ್ಯೂ ಪಾಟ್ಸ್,  ಜೇಮಿ ಸ್ಮಿತ್ (ವಿಕೆಟ್ ಕೀಪರ್), ಓಲಿ ಸ್ಟೋನ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಬೆನ್ ಸ್ಟೋಕ್ಸ್ (ಅನುಮಾನ).

ಇಂಗ್ಲೆಂಡ್ vs ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ:

  • ಮೊದಲ ಟೆಸ್ಟ್: ಓಲ್ಡ್ ಟ್ರಾಫರ್ಡ್, ಆಗಸ್ಟ್ 21 ರಿಂದ 25
  • ಎರಡನೇ ಟೆಸ್ಟ್: ಲಾರ್ಡ್ಸ್, ಆಗಸ್ಟ್ 29 ರಿಂದ ಸೆಪ್ಟೆಂಬರ್ 2
  • ಮೂರನೇ ಟೆಸ್ಟ್: ಓವಲ್, ಸೆಪ್ಟೆಂಬರ್ 6 ರಿಂದ 10
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ