AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಸೋಲಿನತ್ತ ಪಾಕಿಸ್ತಾನ್!

ENG vs PAK: ಲೀಡ್ಸ್‌ನ ಹೆಡಿಂಗ್ಲಿ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನವನ್ನು ಇನಿಂಗ್ಸ್ ಮತ್ತು 103 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿತ್ತು. ಇದೀಗ ಲಾರ್ಡ್ಸ್ ಮೈದಾನದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಇಂಗ್ಲೆಂಡ್ ಸಂಪೂರ್ಣ ಹಿಡಿತ ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲೂ ಪಾಕಿಸ್ತಾನ್ ತಂಡ ಸೋಲುವುದು ಬಹುತೇಕ ಖಚಿತ ಎನ್ನಬಹುದು.

ಮತ್ತೊಂದು ಸೋಲಿನತ್ತ ಪಾಕಿಸ್ತಾನ್!
Pakistan Image Credit source: cricinfo
ಝಾಹಿರ್ ಯೂಸುಫ್
|

Updated on: Aug 29, 2026 | 8:57 AM

Share

ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಇಂಗ್ಲೆಂಡ್ ತಂಡ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ಆತಿಥೇಯ ಇಂಗ್ಲೆಂಡ್‌ ವೇಗಿಗಳ ಭೀಕರ ದಾಳಿಗೆ ತತ್ತರಿಸಿದ ಪಾಕಿಸ್ತಾನ್ ತಂಡ ತನ್ನ ಮೊದಲ ಇನಿಂಗ್ಸ್‌ನಲ್ಲಿ ಕೇವಲ 110 ರನ್‌ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 180 ರನ್‌ಗಳ ಬೃಹತ್ ಮುನ್ನಡೆ ಪಡೆದುಕೊಂಡಿದೆ.

ಪಾಕಿಸ್ತಾನದ ಬ್ಯಾಟಿಂಗ್ ಕುಸಿತ:

ಇಂಗ್ಲೆಂಡ್‌ನ ಮೊದಲ ಇನಿಂಗ್ಸ್ ಮೊತ್ತ 290 ರನ್‌ಗಳಿಗೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ್, ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.

ಏಕಾಂಗಿ ಹೋರಾಟ: ಆರಂಭಿಕ ಆಟಗಾರ ಅಝಾನ್ ಅವೈಸ್ ಮಾತ್ರ ಕೊಂಚ ಪ್ರತಿರೋಧ ಒಡ್ಡಿ 46 ರನ್ ಗಳಿಸಿದರು. ಉಳಿದ ಯಾವುದೇ ಬ್ಯಾಟರ್‌ಗಳು ಇಂಗ್ಲೆಂಡ್ ಬೌಲಿಂಗ್ ದಾಳಿಯನ್ನು ಎದುರಿಸಲಾಗದೆ ಪೆವಿಲಿಯನ್ ಸೇರಿದರು.

ಗಾಯದ ಸಮಸ್ಯೆ: ಗಾಯದ ಸಮಸ್ಯೆಯಿಂದಾಗಿ ಆರಂಭಿಕ ಬ್ಯಾಟರ್ ಇಮಾಮ್-ಉಲ್-ಹಕ್ ಬ್ಯಾಟಿಂಗ್ ಮಾಡಲು ಕ್ರೀಸ್‌ಗೆ ಇಳಿಯಲು ಸಾಧ್ಯವಾಗಲಿಲ್ಲ. ಇದು ಪ್ರವಾಸಿ ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು.

110 ರನ್​ಗೆ ಆಲೌಟ್: ಇಂಗ್ಲೆಂಡ್ ವೇಗಿಗಳ ಮಾರಕ ದಾಳಿಗೆ ತತ್ತರಿಸಿದ ಪಾಕಿಸ್ತಾನ್ ತಂಡವು ಅಂತಿಮವಾಗಿ 37.2 ಓವರ್​ಗಳಲ್ಲಿ 110 ರನ್​ಗಳಿಸಿ ಆಲೌಟ್ ಆಯಿತು.

ಇಂಗ್ಲೆಂಡ್ ಪರ ವೇಗಿ ಒಲೀ ರಾಬಿನ್ಸನ್ ಕೇವಲ 11 ರನ್ ನೀಡಿ 4 ಪ್ರಮುಖ ವಿಕೆಟ್ ಪಡೆದರೆ, ಜೋಫ್ರಾ ಆರ್ಚರ್ 26 ರನ್ ನೀಡಿ 3 ವಿಕೆಟ್ ಕಬಳಿಸಿದರು. ಇನ್ನು ಜೋಶ್ ಟಂಗ್ 2 ವಿಕೆಟ್ ಉರುಳಿಸಿದರು.

ಇಂಗ್ಲೆಂಡ್‌ಗೆ ಬೃಹತ್ ಮುನ್ನಡೆ:

ಪಾಕಿಸ್ತಾನ್ ತಂಡವನ್ನು ಅಲ್ಪ ಮೊತ್ತಕ್ಕೆ ನಿಯಂತ್ರಿಸಿದ ಬಳಿಕ ತನ್ನ ಎರಡನೇ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್, ಎರಡನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 81 ರನ್ ಗಳಿಸಿದೆ. ಈ ಮೂಲಕ ಇಂಗ್ಲೆಂಡ್ ತಂಡವು ಒಟ್ಟಾರೆಯಾಗಿ 261 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದ್ದು, ಪಂದ್ಯದ ಮೇಲಿನ ಹಿಡಿತವನ್ನು ಬಿಗಿಗೊಳಿಸಿದೆ.

ಇಂಗ್ಲೆಂಡ್ ಪ್ಲೇಯಿಂಗ್ 11: ಬೆನ್ ಡಕೆಟ್ , ಎಮಿಲಿಯೊ ಗೇ , ಜೋರ್ಡನ್ ಕಾಕ್ಸ್ , ಜೋ ರೂಟ್ (ನಾಯಕ) , ಹ್ಯಾರಿ ಬ್ರೂಕ್ , ಡಾನ್ ಲಾರೆನ್ಸ್ , ಜೇಮೀ ಸ್ಮಿತ್ (ವಿಕೆಟ್ ಕೀಪರ್), ಒಲೀ ರಾಬಿನ್ಸನ್ , ಗಸ್ ಅಟ್ಕಿನ್ಸನ್ , ಜೋಫ್ರಾ ಆರ್ಚರ್ , ಜೋಶ್ ಟಂಗ್.

ಇದನ್ನೂ ಓದಿ: WTC ಫೈನಲ್‌ಗೇರಲು ಟೀಮ್ ಇಂಡಿಯಾ ಮುಂದಿದೆ 4 ಹಾದಿಗಳಿವು!

ಪಾಕಿಸ್ತಾನ್ ಪ್ಲೇಯಿಂಗ್ 11: ಇಮಾಮ್-ಉಲ್-ಹಕ್ , ಅಝಾನ್ ಅವೈಸ್ , ಅಬ್ದುಲ್ಲಾ ಶಫೀಕ್ , ಶಾನ್ ಮಸೂದ್ , ಬಾಬರ್ ಆಝಂ (ನಾಯಕ) , ಸೌದ್ ಶಕೀಲ್ , ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್) , ಅಲಿ ಉಸ್ಮಾನ್ , ಖುರ್ರಂ ಶಹಜಾದ್ , ಮೊಹಮ್ಮದ್ ಅಬ್ಬಾಸ್ , ಮೊಹಮ್ಮದ್ ಅಲಿ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು