ENG vs WI: ಶತಕ ವಂಚಿತ ಜೋಸ್ ಬಟ್ಲರ್; ವಿಂಡೀಸ್ ವಿರುದ್ಧ ಇಂಗ್ಲೆಂಡ್ಗೆ ಗೆಲುವಿನ ಆರಂಭ
England Wins 1st T20 Against West Indies: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಇಂಗ್ಲೆಂಡ್ 21 ರನ್‌ಗಳಿಂದ ಗೆದ್ದಿದೆ. ಜೋಸ್ ಬಟ್ಲರ್ ಅವರ 96 ರನ್‌ಗಳ ಅದ್ಭುತ ಇನ್ನಿಂಗ್ಸ್ ಮತ್ತು ಲಿಯಾಮ್ ಡಾಸನ್ ಅವರ 4 ವಿಕೆಟ್‌ಗಳ ಮಾರಕ ಬೌಲಿಂಗ್ ಗೆಲುವಿಗೆ ಪ್ರಮುಖ ಕಾರಣ. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 186 ರನ್ ಗಳಿಸಿತು. ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ 167 ರನ್‌ಗಳಿಗೆ ಸೀಮಿತವಾಯಿತು. ಈ ಗೆಲುವಿನೊಂದಿಗೆ ಇಂಗ್ಲೆಂಡ್ ಟಿ20 ಸರಣಿಯಲ್ಲಿ ಉತ್ತಮ ಆರಂಭ ಮಾಡಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದ್ದ ಇಂಗ್ಲೆಂಡ್ (England vs West Indies), ಟಿ20 ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸಿದೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ (Jos Buttler) ಅವರ ಅದ್ಭುತ ಅರ್ಧಶತಕ ಮತ್ತು ಲಿಯಾಮ್ ಡಾಸನ್ ಅವರ ಮಾರಕ ಬೌಲಿಂಗ್‌ನಿಂದ ವೆಸ್ಟ್ ಇಂಡೀಸ್ ತಂಡ ಸೋಲು ಅನುಭವಿಸಿತು. ಚೆಸ್ಟರ್ ಲೀ ಸ್ಟ್ರೀಟ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 186 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ವಿಂಡೀಸ್ 167 ರನ್ ಕಲೆಹಾಕಲಷ್ಟೇ ಶಕ್ತವಾಗಿ 21 ರನ್‌ಗಳ ಸೋಲನ್ನು ಎದುರಿಸಬೇಕಾಯಿತು. ಇಂಗ್ಲೆಂಡ್ ಪರ ಗೆಲುವಿನ ಇನ್ನಿಂಗ್ಸ್ ಆಡಿದ ಜೋಸ್ ಬಟ್ಲರ್ ಕೇವಲ 4 ರನ್‌ಗಳಿಂದ ಶತಕ ವಂಚಿತರಾದರೂ ತಮ್ಮ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.
ಬಟ್ಲರ್ ಅದ್ಭುತ ಇನ್ನಿಂಗ್ಸ್
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ಇಂಗ್ಲೆಂಡ್ಗೆ ಉತ್ತಮ ಆರಂಭ ಸಿಗಲಿಲ್ಲ. ಬೆನ್ ಡಕೆಟ್ ಇನ್ನಿಂಗ್ಸ್‌ನ ಎರಡನೇ ಓವರ್‌ನಲ್ಲಿ ಪೆವಿಲಿಯನ್ ಸೇರಿಕೊಂಡರು. ಇದಾದ ನಂತರ, ಜೇಮೀ ಸ್ಮಿತ್ ಮತ್ತು ಜೋಸ್ ಬಟ್ಲರ್ ಇಂಗ್ಲೆಂಡ್‌ನ ಇನ್ನಿಂಗ್ಸ್ ಮುನ್ನಡೆಸಿ ಇಬ್ಬರೂ ಎರಡನೇ ವಿಕೆಟ್‌ಗೆ 39 ಎಸೆತಗಳಲ್ಲಿ 79 ರನ್‌ಗಳ ಜೊತೆಯಾಟ ನಡೆಸಿದರು.
ಬಟ್ಲರ್ 59 ಎಸೆತಗಳಲ್ಲಿ 6 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 96 ರನ್‌ಗಳ ಇನ್ನಿಂಗ್ಸ್ ಆಡಿದರು. ಆದರೆ, ಅವರು ಕೇವಲ 4 ರನ್‌ಗಳಿಂದ ತಮ್ಮ ಶತಕವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಬಟ್ಲರ್ ಹೊರತುಪಡಿಸಿ, ಆರಂಭಿಕ ಆಟಗಾರ ಜೇಮೀ ಸ್ಮಿತ್ 20 ಎಸೆತಗಳಲ್ಲಿ 38 ರನ್ ಗಳಿಸಿದರೆ, ಜಾಕೋಬ್ ಬೆಥೆಲ್ 23 ಎಸೆತಗಳಲ್ಲಿ 23 ರನ್‌ಗಳ ಇನ್ನಿಂಗ್ಸ್ ಆಡಿದರು. ಈ ರೀತಿಯಾಗಿ, ಇಂಗ್ಲೆಂಡ್ 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 188 ರನ್ ಗಳಿಸಿತು. ವೆಸ್ಟ್ ಇಂಡೀಸ್ ಪರ ರೊಮಾರಿಯೊ ಶೆಫರ್ಡ್ ಗರಿಷ್ಠ ಎರಡು ವಿಕೆಟ್‌ಗಳನ್ನು ಪಡೆದರು.
Virat Kohli: ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
189 ರನ್‌ಗಳ ಗುರಿಯನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ ಸ್ಥಿರ ಆರಂಭ ಪಡೆಯಿತು. ಎವಿನ್ ಲೂಯಿಸ್ ಮತ್ತು ಜಾನ್ಸನ್ ಚಾರ್ಲ್ಸ್ ಮೊದಲ ವಿಕೆಟ್‌ಗೆ 20 ಎಸೆತಗಳಲ್ಲಿ 27 ರನ್‌ಗಳ ಜೊತೆಯಾಟ ನೀಡಿತು. ಆದರೆ ಇದಾದ ನಂತರ ವೆಸ್ಟ್ ಇಂಡೀಸ್ ಇನ್ನಿಂಗ್ಸ್ ಕುಸಿಯಲು ಪ್ರಾರಂಭಿಸಿತು. ತಂಡದ ವಿಕೆಟ್ಗಳು ನಿಯಮಿತ ಅಂತರದಲ್ಲಿ ಬೀಳಲು ಪ್ರಾರಂಭಿಸಿದವು. ಎವಿನ್ ಲೂಯಿಸ್ ಹೊರತುಪಡಿಸಿ, ಯಾವುದೇ ಬ್ಯಾಟ್ಸ್ಮನ್ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್. ಅಂತಿಮವಾಗಿ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 167 ರನ್ ಗಳಿಸಲಷ್ಟೇ ಶಕ್ತವಾಯಿತು.
ವಿಂಡೀಸ್ ಪರ ಲೂಯಿಸ್ 23 ಎಸೆತಗಳಲ್ಲಿ 39 ರನ್ ಗಳಿಸಿದರು. ಇಂಗ್ಲೆಂಡ್ ಪರ ಲಿಯಾಮ್ ಡಾಸನ್ ಅದ್ಭುತ ಬೌಲಿಂಗ್ ಮಾಡಿ 4 ಓವರ್‌ಗಳಲ್ಲಿ ಕೇವಲ 20 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದರು. ಮ್ಯಾಥ್ಯೂ ಪಾಟ್ಸ್ ಮತ್ತು ಜಾಕೋಬ್ ಬೆಥೆಲ್ ತಲಾ ಎರಡು ವಿಕೆಟ್‌ಗಳನ್ನು ಪಡೆದರು. ಲಿಯಾಮ್ ಡಾಸನ್ ತಮ್ಮ ಅದ್ಭುತ ಬೌಲಿಂಗ್‌ಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:11 pm, Sat, 7 June 25
