ENG vs AUS: ಟಿ20, ಏಕದಿನ ಸರಣಿಗಳಿಗೆ ಇಂಗ್ಲೆಂಡ್ ತಂಡ ಪ್ರಕಟ; ಐದು ಹೊಸ ಮುಖಗಳಿಗೆ ಅವಕಾಶ
ENG vs AUS: ಪ್ರಸ್ತುತ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ನಿರತವಾಗಿರುವ ಇಂಗ್ಲೆಂಡ್ ತಂಡ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಐದು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದೀಗ ಈ ಎರಡೂ ಸರಣಿಗಳಿಗೆ ಇಂಗ್ಲೆಂಡ್ ತಂಡ ಪ್ರಕಟವಾಗಿದೆ.
ಪ್ರಸ್ತುತ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ನಿರತವಾಗಿರುವ ಇಂಗ್ಲೆಂಡ್ ತಂಡ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಐದು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದೀಗ ಈ ಎರಡೂ ಸರಣಿಗಳಿಗೆ ಇಂಗ್ಲೆಂಡ್ ತಂಡ ಪ್ರಕಟವಾಗಿದೆ. ವಿಶೇಷವೆಂದರೆ ಟಿ20 ತಂಡದಲ್ಲಿ ಇಂಗ್ಲೆಂಡ್ ಮಂಡಳಿ ಐವರು ಹೊಸ ಆಟಗಾರರ ಅವಕಾಶ ನೀಡಿದೆ. ಈ ಪೈಕಿ ಮೂವರು ಆಟಗಾರರಿಗೆ ಏಕದಿನ ತಂಡದಲ್ಲೂ ಸ್ಥಾನ ನೀಡಲಾಗಿದೆ. ಬ್ಯಾಟ್ಸ್‌ಮನ್ ಜೋರ್ಡಾನ್ ಕಾಕ್ಸ್, ಆಲ್‌ರೌಂಡರ್‌ಗಳಾದ ಜಾಕೋಬ್ ಬೆಥೆಲ್ ಮತ್ತು ಡಾನ್ ಮೌಸ್ಲಿ, ವೇಗದ ಬೌಲರ್‌ಗಳಾದ ಜೋಶ್ ಹಲ್ ಮತ್ತು ಜಾನ್ ಟರ್ನರ್ ತಂಡದಲ್ಲಿ ಸ್ಥಾನ ಪಡೆದ ಹೊಸ ಮುಖಗಳಾಗಿವೆ.
ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಗಾಯಗೊಂಡಿರುವ ಮಾರ್ಕ್ವುಡ್ ಸರಣಿಯಿಂದಲೇ ಹೊರಬಿದ್ದಿದ್ದು, ಅವರ ಬದಲಿಗೆ ಜೋಶ್ ಹಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಇದೀಗ ಆಸ್ಟ್ರೇಲಿಯಾ ವಿರುದ್ಧ ಪ್ರಕಟಗೊಂಡಿರುವ ಎರಡೂ ಸರಣಿಗಳಿಗು ಜೋಶ್ ಹಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಬೆತೆಲ್ ಮತ್ತು ಟರ್ನರ್ ಅವರಿಗೆ ಏಕದಿನ ತಂಡದಲ್ಲಿ ಸ್ಥಾನ ನೀಡಲಾಗಿದೆ.
Who are you excited to see? 😃
A super September in store! 🏏💥
🏴 #ENGvAUS 🇦🇺 #EnglandCricket
— England Cricket (@englandcricket) August 26, 2024
ಉಭಯ ಸರಣಿಗಳಿಗೆ ಇಂಗ್ಲೆಂಡ್ ತಂಡ
ಇಂಗ್ಲೆಂಡ್ ಟಿ20 ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜೋರ್ಡಾನ್ ಕಾಕ್ಸ್, ಸ್ಯಾಮ್ ಕರನ್, ಜೋಶ್ ಹಲ್, ವಿಲ್ ಜಾಕ್ವೆಸ್, ಲಿಯಾಮ್ ಲಿವಿಂಗ್‌ಸ್ಟೋನ್, ಸಾಕಿಬ್ ಮಹಮೂದ್, ಡಾನ್ ಮುಸ್ಲಿ, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಜಾನ್ ಟರ್ನರ್.
ಏಕದಿನ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೋಶ್ ಹಲ್, ವಿಲ್ ಜಾಕ್ಸ್, ಮ್ಯಾಥ್ಯೂ ಪಾಟ್ಸ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೇಮೀ ಸ್ಮಿತ್, ರೀಸ್ ಟೋಪ್ಲಿ, ಜಾನ್ ಟರ್ನರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ