AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾ ತಂಡಕ್ಕೆ ಮತ್ತೆ ನಿರಾಸೆ; ಟಿ20 ವಿಶ್ವಕಪ್ ಫೈನಲ್​ಗೇರಿದ ಇಂಗ್ಲೆಂಡ್

Women's T20 World Cup 2026: 2026ರ ICC ಮಹಿಳಾ T20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್, ದಕ್ಷಿಣ ಆಫ್ರಿಕಾವನ್ನು 40 ರನ್‌ಗಳಿಂದ ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ. ನಾಯಕಿ ನ್ಯಾಟ್ ಸಿವರ್-ಬ್ರಂಟ್ (75) ಮತ್ತು ಹೀದರ್ ನೈಟ್ (58) ಅವರ ಅಮೋಘ ಜೊತೆಯಾಟದಿಂದ ಇಂಗ್ಲೆಂಡ್ 169 ರನ್ ಗಳಿಸಿತು. ದಕ್ಷಿಣ ಆಫ್ರಿಕಾ 129 ರನ್ ಗಳಿಸಿ ಸೋತಿತು. ಇಂಗ್ಲೆಂಡ್ ಈಗ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

ಆಫ್ರಿಕಾ ತಂಡಕ್ಕೆ ಮತ್ತೆ ನಿರಾಸೆ; ಟಿ20 ವಿಶ್ವಕಪ್ ಫೈನಲ್​ಗೇರಿದ ಇಂಗ್ಲೆಂಡ್
Eng Vs Sa
ಪೃಥ್ವಿಶಂಕರ
|

Updated on:Jul 03, 2026 | 2:13 PM

Share

ಜುಲೈ 2 ರಂದು ನಡೆದ 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ (Women’s T20 World Cup 2026) ಎರಡನೇ ಸೆಮಿಫೈನಲ್‌ನಲ್ಲಿ, ಆತಿಥೇಯ ಇಂಗ್ಲೆಂಡ್, ದಕ್ಷಿಣ ಆಫ್ರಿಕಾವನ್ನು (England vs South Africa ) 40 ರನ್‌ಗಳಿಂದ ಸೋಲಿಸುವ ಮೂಲಕ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಲಂಡನ್‌ನ ದಿ ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 20 ಓವರ್​ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು 169 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 129 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಹೀಗಾಗಿ ಆಫ್ರಿಕಾ ತಂಡಕ್ಕೆ ಮತ್ತೊಂದು ಫೈನಲ್ ಆಡುವ ಅವಕಾಶವೂ ಕೈತಪ್ಪಿತು. ಇತ್ತ ಅಫ್ರಿಕಾ ತಂಡವನ್ನು ಏಕಪಕ್ಷಿಯವಾಗಿ ಮಣಿಸಿ ಫೈನಲ್​ಗೇರಿರುವ ಇಂಗ್ಲೆಂಡ್‌ ತಂಡ ಭಾನುವಾರ ಲಾರ್ಡ್ಸ್‌ನಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ಆರು ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

ಇಂಗ್ಲೆಂಡ್​ಗೆ ಕಳಪೆ ಆರಂಭ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡಕ್ಕೆ ಕಳಪೆ ಆರಂಭ ಸಿಕ್ಕಿತು. ದಕ್ಷಿಣ ಆಫ್ರಿಕಾದ ವೇಗಿಗಳಾದ ಶಬ್ನಿಮ್ ಇಸ್ಮಾಯಿಲ್ ಮತ್ತು ಮರಿಜಾನ್ನೆ ಕಪ್ಪ್ ತಮ್ಮ ಮಾರಕ ಬೌಲಿಂಗ್ ಮೂಲಕ ಇಂಗ್ಲೆಂಡ್ ತಂಡದ ಅಗ್ರ ಕ್ರಮಾಂಕವನ್ನು ಧ್ವಂಸಗೊಳಿಸಿದರು. ಆರಂಭಿಕ ಆಟಗಾರ್ತಿ ಆಮಿ ಜೋನ್ಸ್ 2 ರನ್‌ಗಳಿಗೆ ಔಟಾದರೆ, ಅದ್ಭುತ ಫಾರ್ಮ್‌ನಲ್ಲಿದ್ದ ಬ್ಯಾಟ್ಸ್‌ಮನ್ ಡ್ಯಾನಿ ವ್ಯಾಟ್-ಹಾಡ್ಜ್ ಕೂಡ ಕೇವಲ 12 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಇದರಿಂದಾಗಿ ಇಂಗ್ಲೆಂಡ್ 3.2 ಓವರ್‌ಗಳಲ್ಲಿ 23 ರನ್​ಗಳನ್ನು ಕಲೆಹಾಕಿ 3 ವಿಕೆಟ್‌ಗಳನ್ನು ಕಳೆದುಕೊಂಡಿತು.

133 ರನ್‌ಗಳ ಪಾಲುದಾರಿಕೆ

ಆದರೆ ಈ ಆರಂಭಿಕ ಆಘಾತದಿಂದ ತಂಡವನ್ನು ಹೊರತಂದ ನಾಯಕಿ ನ್ಯಾಟ್ ಸಿವರ್ ಬ್ರಂಟ್ ಮತ್ತು ಅನುಭವಿ ಹೀದರ್ ನೈಟ್ ನಿರ್ಣಾಯಕ ಸಮಯದಲ್ಲಿ ಉತ್ತಮ ಜೊತೆಯಾಟ ಕಟ್ಟಿದರು. ಇವರಿಬ್ಬರು ನಾಲ್ಕನೇ ವಿಕೆಟ್‌ಗೆ 133 ರನ್‌ಗಳ ಪಾಲುದಾರಿಕೆಯನ್ನು ನಿರ್ಮಿಸಿದರು, ಇದು ಪಂದ್ಯಾವಳಿಯ ನಾಕೌಟ್ ಇತಿಹಾಸದಲ್ಲಿ ಅತ್ಯಧಿಕ ಜೊತೆಯಾಟವೆಂಬ ದಾಖಲೆಯನ್ನೂ ಬರೆಯಿತು. ನ್ಯಾಟ್ ಸಿವರ್ ಬ್ರಂಟ್ ಕೇವಲ 47 ಎಸೆತಗಳಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ಸೇರಿದಂತೆ 75 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರೆ, ಹೀದರ್ ನೈಟ್ 47 ಎಸೆತಗಳಲ್ಲಿ 6 ಬೌಂಡರಿಗಳು ಮತ್ತು 1 ಸಿಕ್ಸರ್ ಸೇರಿದಂತೆ 58 ರನ್ ಬಾರಿಸಿದರು. ಇವರಿಬ್ಬರ ಇನ್ನಿಂಗ್ಸ್‌ನಿಂದಾಗಿ ಇಂಗ್ಲೆಂಡ್ 20 ಓವರ್‌ಗಳಲ್ಲಿ ಒಟ್ಟು 169 ರನ್‌ ಕಲೆಹಾಕಿತು.

ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲೆಂಡ್; ನಿವೃತ್ತಿ ಘೋಷಿಸಿದ ಮೂವರು ಲೆಜೆಂಡರಿ ಪ್ಲೇಯರ್ಸ್​

ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ವೈಫಲ್ಯ

170 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಉತ್ತಮ ಆರಂಭ ಪಡೆಯಿತು. ನಾಯಕಿ ಲಾರಾ ವೋಲ್ವಾರ್ಡ್ ಮತ್ತು ಟಾಜ್ಮಿನ್ ಬ್ರಿಟ್ಸ್ ಮೊದಲ ವಿಕೆಟ್‌ಗೆ 43 ರನ್‌ಗಳನ್ನು ಸೇರಿಸಿದರು. ಆದಾಗ್ಯೂ, ಸೋಫಿ ಎಕ್ಲೆಸ್ಟೋನ್, ವೋಲ್ವಾರ್ಡ್ ನೀಡಿದ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಈ ಪಾಲುದಾರಿಕೆಯನ್ನು ಮುರಿದರು. ಇದರ ನಂತರ, ಇಂಗ್ಲೆಂಡ್‌ನ ಬೌಲರ್‌ಗಳು ಪಂದ್ಯವನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತೆಗೆದುಕೊಂಡರು. ಆದಾಗ್ಯೂ ಆರಂಭಿಕ ಬ್ಯಾಟರ್ ಟಾಜ್ಮಿನ್ ಬ್ರಿಟ್ಸ್ 45 ಎಸೆತಗಳಲ್ಲಿ 51 ರನ್‌ಗಳ ಹೋರಾಟದ ಇನ್ನಿಂಗ್ಸ್ ಆಡಿದರು, ಆದರೆ ಇನ್ನೊಂದು ತುದಿಯಿಂದ ಅವರಿಗೆ ಬೆಂಬಲ ಸಿಗಲಿಲ್ಲ. ಪರಿಣಾಮವಾಗಿ, ಆಫ್ರಿಕಾ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 129 ರನ್‌ಗಳನ್ನು ಮಾತ್ರ ಗಳಿಸಲಷ್ಟೇ ಶಕ್ತವಾಗಿ ಪಂದ್ಯವನ್ನು 40 ರನ್‌ಗಳಿಂದ ಸೋತಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:10 pm, Fri, 3 July 26

Follow Us
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..