AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ತಂಡಗಳಿಗೆ ಮಾತ್ರ ಅವಕಾಶ! ಚಾಂಪಿಯನ್ಸ್ ಟ್ರೋಫಿಯಿಂದ ಇಂಗ್ಲೆಂಡ್ ಔಟ್..?

ICC Champions Trophy 2025: ಪಾಕಿಸ್ತಾನ ಈಗಾಗಲೇ ಆತಿಥೇಯರಾಗಿ ಅರ್ಹತೆ ಪಡೆದಿದ್ದು, ವಿಶ್ವಕಪ್​ನಲ್ಲಿ ಅಗ್ರ 7 ಸ್ಥಾನ ಪಡೆಯುವ ತಂಡಗಳು ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲ್ಲಿವೆ. ಇದರರ್ಥ ಪ್ರಸ್ತುತ ವಿಶ್ವಕಪ್ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ಇಂಗ್ಲೆಂಡ್‌ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳುವ ಸಾಧ್ಯತೆ ಇದೆ.

8 ತಂಡಗಳಿಗೆ ಮಾತ್ರ ಅವಕಾಶ! ಚಾಂಪಿಯನ್ಸ್ ಟ್ರೋಫಿಯಿಂದ ಇಂಗ್ಲೆಂಡ್ ಔಟ್..?
ಇಂಗ್ಲೆಂಡ್ ತಂಡ
ಪೃಥ್ವಿಶಂಕರ
|

Updated on:Oct 30, 2023 | 7:27 AM

Share

ಪ್ರಸ್ತುತ ಭಾರತದಲ್ಲಿ ಏಕದಿನ ವಿಶ್ವಕಪ್ (ICC ODI World Cup 2023) ನಡೆಯುತ್ತಿದ್ದು, ಈ ನಡುವೆ 2025 ರಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (ICC Champions Trophy 2025) ಬಗ್ಗೆ ಐಸಿಸಿ ಬಿಗ್ ಅಪ್​ಡೇಟ್ ನೀಡಿದೆ. ಐಸಿಸಿ (ICC) ನೀಡಿರುವ ಮಾಹಿತಿ ಪ್ರಕಾರ ವಿಶ್ವಕಪ್‌ನಲ್ಲಿ ಲೀಗ್ ಹಂತದ ಅಂತ್ಯದ ನಂತರ ಪಾಯಿಂಟ್ ಪಟ್ಟಿಯಲ್ಲಿ ಅಗ್ರ 8 ಸ್ಥಾನ ಪಡೆಯುವ ತಂಡಗಳು ಪಾಕಿಸ್ತಾನ ಆತಿಥ್ಯ ವಹಿಸುತ್ತಿರುವ ಚಾಂಪಿಯನ್ಸ್ ಟ್ರೋಫಿಯನ್ನು ಆಡಲಿವೆ. ಪಾಕಿಸ್ತಾನ ಈಗಾಗಲೇ ಆತಿಥೇಯರಾಗಿ ಅರ್ಹತೆ ಪಡೆದಿದ್ದು, ವಿಶ್ವಕಪ್​ನಲ್ಲಿ ಅಗ್ರ 7 ಸ್ಥಾನ ಪಡೆಯುವ ತಂಡಗಳು ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲ್ಲಿವೆ. ಇದರರ್ಥ ಪ್ರಸ್ತುತ ವಿಶ್ವಕಪ್ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ಇಂಗ್ಲೆಂಡ್‌ (England) ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳುವ ಸಾಧ್ಯತೆ ಇದೆ.

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ 8 ತಂಡಗಳು ಈ ವಿಶ್ವಕಪ್‌ನಿಂದ ನಿರ್ಧರಿಸಲ್ಪಡುತ್ತವೆ ಎಂದು ಐಸಿಸಿ ಹೇಳಿದೆ. 8 ತಂಡಗಳ ಪಂದ್ಯಾವಳಿಯನ್ನು ಜೂನ್ 2025 ರಲ್ಲಿ ಪಾಕಿಸ್ತಾನದಲ್ಲಿ ಆಯೋಜಿಸಲಾಗುತ್ತದೆ ಎಂದು ಸುದ್ದಿ ವೆಬ್‌ಸೈಟ್ ಕ್ರಿಕ್‌ಇನ್ಫೋ ವರದಿ ಮಾಡಿದೆ.

8 ತಂಡಗಳ ನಡುವೆ ಪಾಕಿಸ್ತಾನದಲ್ಲಿ ನಡೆಯಲ್ಲಿದೆ ಚಾಂಪಿಯನ್ಸ್ ಟ್ರೋಫಿ

ಇಂಗ್ಲೆಂಡ್​ಗೆ ಕೈತಪ್ಪುತ್ತಾ ಅವಕಾಶ?

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯದ ನಂತರ ಪ್ರಸ್ತುತ ವಿಶ್ವಕಪ್ ಅಂಕಪಟ್ಟಿಯಲ್ಲಿ ಭಾರತ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಆಸ್ಟ್ರೇಲಿಯಾ, ಶ್ರೀಲಂಕಾ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಅಗ್ರ-8 ಸ್ಥಾನಗಳಲ್ಲಿವೆ. ಲೀಗ್ ಹಂತದ ಕೊನೆಯವರೆಗೂ ಈ ತಂಡಗಳು ಅಗ್ರ-8ರಲ್ಲಿ ಉಳಿದರೆ, ನೆದರ್ಲೆಂಡ್ಸ್ ಮತ್ತು ಅಫ್ಘಾನಿಸ್ತಾನ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯುತ್ತವೆ. ಅಂದರೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡ ತನ್ನ ಸೋಲಿನ ಸರಣಿಯನ್ನು ಮುಂದುವರೆಸಿದರೆ, ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳಲಿದೆ.

3 ಪಂದ್ಯಗಳಲ್ಲಿ 2 ರಲ್ಲಿ ಗೆಲುವು ಸಾಧಿಸಬೇಕು

ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತನ್ನ ಮುಂದಿನ ಪಂದ್ಯಗಳನ್ನು ಆಸ್ಟ್ರೇಲಿಯಾ, ನೆದರ್ಲೆಂಡ್ಸ್ ಮತ್ತು ಪಾಕಿಸ್ತಾನ ವಿರುದ್ಧ ಆಡಲಿದೆ. ಸದ್ಯ 6 ಪಂದ್ಯಗಳನ್ನಾಡಿರುವ ಇಂಗ್ಲೆಂಡ್ 5 ಸೋಲು ಮತ್ತು ಒಂದು ಗೆಲುವಿನಿಂದ ಕೇವಲ 2 ಅಂಕಗಳನ್ನು ಹೊಂದಿದೆ. ಹೀಗಾಗಿ ಇಂಗ್ಲೆಂಡ್ ಅಗ್ರ-8ರಲ್ಲಿ ಸ್ಥಾನ ಪಡೆಯಬೇಕೆಂದರೆ ಉಳಿದಿರುವ 3 ಪಂದ್ಯಗಳಲ್ಲಿ ಕನಿಷ್ಠ 2 ಪಂದ್ಯಗಳನ್ನು ಗೆಲ್ಲಬೇಕು. ಆದರೆ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ವಿರುದ್ಧದ ಪಂದ್ಯಗಳಲ್ಲಿ ತಂಡವು ಸೋತಿರುವುದನ್ನು ನೋಡಿದರೆ, ಉಳಿದ 3 ಪಂದ್ಯಗಳಲ್ಲಿ 2 ರಲ್ಲಿ ಗೆಲುವು ಸಾಧಿಸುವುದು ಆಂಗ್ಲ ತಂಡಕ್ಕೆ ತುಂಬಾ ಕಷ್ಟಕರವಾಗಿದೆ.

ಬಾಂಗ್ಲಾ- ಇಂಗ್ಲೆಂಡ್​ಗೆ ಬಿಗ್ ಶಾಕ್

ಬಾಂಗ್ಲಾದೇಶ ತಂಡ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಲೀಗ್ ಹಂತದ ಅಂತ್ಯದ ನಂತರವೂ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು 9 ಮತ್ತು 10 ನೇ ಸ್ಥಾನದಲ್ಲಿದ್ದರೆ, ಉಭಯ ತಂಡಗಳಿಗೆ 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಆಡಲು ಸಾಧ್ಯವಾಗುವುದಿಲ್ಲ. ಪಾಕಿಸ್ತಾನ ಅಂಕಪಟ್ಟಿಯಲ್ಲಿ ಸದ್ಯ ಆರನೇ ಸ್ಥಾನದಲ್ಲಿದೆ. ಅಂಕಪಟ್ಟಿಯಲ್ಲಿ ಅಗ್ರ-8ರಲ್ಲಿ ಎಲ್ಲಾದರೂ ಸ್ಥಾನ ಪಡೆದರೆ, ಉಳಿದ ಟಾಪ್ 7 ತಂಡಗಳು ಅವರ ಜೊತೆಗೆ ಅರ್ಹತೆ ಪಡೆಯುತ್ತವೆ. ಒಂದು ವೇಳೆ ಪಾಕಿಸ್ತಾನ 9 ಅಥವಾ 10ನೇ ಸ್ಥಾನ ಪಡೆದರೆ, ಪಾಯಿಂಟ್‌ ಪಟ್ಟಿಯಲ್ಲಿ ಅಗ್ರ-7 ಸ್ಥಾನದಲ್ಲಿರುವ ತಂಡಗಳು ಅವರೊಂದಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಆಡುತ್ತವೆ.

ಹೀಗಾದರೂ ಇಂಗ್ಲೆಂಡ್​ಗೆ ಅವಕಾಶ ಕೈತಪ್ಪಲಿದೆ

ಒಂದು ವೇಳೆ ಪಾಕಿಸ್ತಾನ ಅಂಕಪಟ್ಟಿಯಲ್ಲಿ 10ನೇ ಸ್ಥಾನ ಪಡೆದು, ಇಂಗ್ಲೆಂಡ್ 8ನೇ ಸ್ಥಾನ, ಬಾಂಗ್ಲಾದೇಶ 9ನೇ ಸ್ಥಾನ ಹಾಗೂ ನೆದರ್ಲೆಂಡ್ಸ್ 7ನೇ ಸ್ಥಾನ ಪಡೆದರೆ, ಈ ಪರಿಸ್ಥಿತಿಯಲ್ಲಿ ಇಂಗ್ಲೆಂಡ್ ಅಗ್ರ-8ರಲ್ಲಿದ್ದರೂ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲಿದೆ. ಆದರೆ ನೆದರ್ಲೆಂಡ್ಸ್ ಅರ್ಹತೆ ಪಡೆಯುತ್ತದೆ. ಪ್ರಸ್ತುತ ನೆದರ್ಲೆಂಡ್ಸ್ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ತಂಡವು ಇನ್ನೂ ಒಂದು ಪಂದ್ಯವನ್ನು ಗೆದ್ದರೆ ಅದು ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯುತ್ತದೆ.

ಈ ಮೂರು ತಂಡಗಳಿಗೆ ಕೈತಪ್ಪಿದ ಅವಕಾಶ

ಟೆಸ್ಟ್ ಆಡುವ ರಾಷ್ಟ್ರಗಳಾದ ವೆಸ್ಟ್ ಇಂಡೀಸ್, ಜಿಂಬಾಬ್ವೆ ಮತ್ತು ಐರ್ಲೆಂಡ್ ತಂಡಗಳು ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆದಿಲ್ಲ. ಇದರರ್ಥ ಈಗ ಹೊರಬಿದ್ದಿರುವ ಚಾಂಪಿಯನ್ಸ್ ಟ್ರೋಫಿ ಅರ್ಹತಾ ನಿಯಮಗಳ ಪ್ರಕಾರ ಈ ಮೂರು ತಂಡಗಳಿಗೆ ಚಾಂಪಿಯನ್ಸ್ ಟ್ರೋಫಿ ಆಡುವ ಅವಕಾಶ ಕೈತಪ್ಲಿದೆ ಎಂದೇ ಹೇಳಬಹುದು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:26 am, Mon, 30 October 23

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್