ಟೀಂ ಇಂಡಿಯಾ ಅಲ್ಲ; ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಗವಾಸ್ಕರ್

|

Updated on: Sep 30, 2023 | 11:28 AM

ODI World Cup 2023: ಸ್ಟಾರ್ ಸ್ಪೋರ್ಟ್‌ನಲ್ಲಿ ಮಾತನಾಡಿದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಈ ವರ್ಷದ ಪ್ರಶಸ್ತಿಗಾಗಿ ಇಂಗ್ಲೆಂಡ್ ಪ್ರಮುಖ ಸ್ಪರ್ಧಿಯಾಗಿದೆ. ಇಂಗ್ಲೆಂಡ್ ತಂಡ ಉತ್ತಮ ಸಾಮರ್ಥ್ಯ ಹೊಂದಿದೆ. ಆಟಗಾರರ ಸಾಮರ್ಥ್ಯವನ್ನು ಪರಿಗಣಿಸಿದರೆ ಇಂಗ್ಲೆಂಡ್ ತಂಡ ಮೇಲುಗೈ ಸಾಧಿಸಲಿದೆ ಎಂದಿದ್ದಾರೆ.

ಟೀಂ ಇಂಡಿಯಾ ಅಲ್ಲ; ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಗವಾಸ್ಕರ್
ಸುನಿಲ್ ಗವಾಸ್ಕರ್
Follow us on

ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ (ODI World Cup 2023) ಆರಂಭವಾಗಲಿದೆ. ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ. ಹೀಗಾಗಿ ಈ ಬಾರಿ ಯಾರು ವಿಶ್ವಕಪ್ ಎತ್ತಿ ಹಿಡಿಯುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಹತ್ತು ತಂಡಗಳು ಪಂದ್ಯಾವಳಿಗೆ ಅರ್ಹತೆ ಪಡೆದಿದ್ದು, 48 ದಿನಗಳವರೆಗೆ ಈ ವಿಶ್ವ ಸಮರ ಭಾರತದಲ್ಲಿ ನಡೆಯಲ್ಲಿದೆ. ಇಲ್ಲಿಯವರೆಗೆ ವೆಸ್ಟ್ ಇಂಡೀಸ್ ಎರಡು ಬಾರಿ, ಭಾರತ ಎರಡು ಬಾರಿ, ಆಸ್ಟ್ರೇಲಿಯಾ 4 ಬಾರಿ, ಪಾಕಿಸ್ತಾನ ಒಮ್ಮೆ, ಶ್ರೀಲಂಕಾ ಒಂದು ಮತ್ತು ಇಂಗ್ಲೆಂಡ್ ಒಂದು ಬಾರಿ ವಿಶ್ವಕಪ್ ಗೆದ್ದಿದೆ. ಈ ವರ್ಷ ಭಾರತ, ಇಂಗ್ಲೆಂಡ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳನ್ನು ವಿಶ್ವಕಪ್ ಗೆಲ್ಲುವ ಸ್ಪರ್ಧಿಗಳೆಂದು ಪರಿಗಣಿಸಲಾಗಿದೆ. ಈ ನಡುವೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ (Irfan Pathan) ಮತ್ತು ಸುನಿಲ್ ಗವಾಸ್ಕರ್ (Sunil Gavaskar) ಈ ಬಾರಿಯ ಪ್ರಶಸ್ತಿ ಗೆಲ್ಲುವ ತಮ್ಮ ನೆಚ್ಚಿನ ತಂಡಗಳ ಹೆಸರನ್ನು ಪ್ರಕಟಿಸಿದ್ದಾರೆ.

ಯಾವ ತಂಡ ಪ್ರಮುಖ ಸ್ಪರ್ಧಿ?

ಸ್ಟಾರ್ ಸ್ಪೋರ್ಟ್‌ನಲ್ಲಿ ಮಾತನಾಡಿದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ‘ಈ ವರ್ಷದ ಪ್ರಶಸ್ತಿಗಾಗಿ ಇಂಗ್ಲೆಂಡ್ ಪ್ರಮುಖ ಸ್ಪರ್ಧಿಯಾಗಿದೆ. ಇಂಗ್ಲೆಂಡ್ ತಂಡ ಉತ್ತಮ ಸಾಮರ್ಥ್ಯ ಹೊಂದಿದೆ. ಆಟಗಾರರ ಸಾಮರ್ಥ್ಯವನ್ನು ಪರಿಗಣಿಸಿದರೆ ಇಂಗ್ಲೆಂಡ್ ತಂಡ ಮೇಲುಗೈ ಸಾಧಿಸಲಿದೆ. ಅವರ ಅಗ್ರ ಕ್ರಮಾಂಕ, ಮಧ್ಯಮ ಕ್ರಮಾಂಕ ಮತ್ತು ಮೂವರು ವಿಶ್ವ ದರ್ಜೆಯ ಆಲ್‌ರೌಂಡರ್‌ಗಳು ಪಂದ್ಯ ಗೆಲ್ಲುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅಲ್ಲದೆ, ಬೌಲಿಂಗ್ ತಂಡದಲ್ಲಿ ಅನುಭವಿ ಬೌಲರ್‌ಗಳಿದ್ದಾರೆ’. ಹೀಗಾಗಿ ಈ ಬಾರಿ ವಿಶ್ವಕಪ್ ಗೆಲ್ಲುವ ನನ್ನ ನೆಚ್ಚಿನ ತಂಡವೆಂದರೆ ಅದು ಇಂಗ್ಲೆಂಡ್ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಸೂರ್ಯನಿಗೆ ಪ್ಲೇಯಿಂಗ್​ ಇಲೆವೆನ್‌ನಲ್ಲಿ ಅವಕಾಶ ಸಿಗುವುದಿಲ್ಲ ಎಂದ ಗವಾಸ್ಕರ್..!

 ಪಠಾಣ್ ನೆಚ್ಚಿನ ತಂಡ ಯಾವುದು?

ಈ ಬಗ್ಗೆ ಇರ್ಫಾನ್ ಪಠಾಣ್ ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ‘ಭಾರತ ತಂಡದ ಪ್ರದರ್ಶನವನ್ನು ನೋಡಲು ನಾನು ಉತ್ಸುಕನಾಗಿದ್ದೇನೆ. ನನ್ನ ಅಭಿಪ್ರಾಯದಲ್ಲಿ ಭಾರತ ಈ ಬಾರಿಯ ವಿಶ್ವಕಪ್ ಗೆಲ್ಲುವ ಪ್ರಮುಖ ಸ್ಪರ್ಧಿ. ಕಳೆದ ಕೆಲವು ಸರಣಿಗಳಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದೆ. ಆಸ್ಟ್ರೇಲಿಯವನ್ನು ಸೋಲಿಸಿದೆ. ಹೀಗಾಗಿ ಟೀಂ ಇಂಡಿಯಾ ಸರಿಯಾದ ಹಾದಿಯಲ್ಲಿದೆ. ತಂಡದಲ್ಲಿ ಮೊಹಮ್ಮದ್ ಶಮಿಯಂತಹ ಅದ್ಭುತ ಬೌಲರ್ ಇದ್ದಾರೆ. ಆದರೆ ಅವರಿಗೆ ತಂಡದಲ್ಲಿ ಸ್ಥಾನ ಪಡೆಯುವುದು ಕಷ್ಟಕರವಾಗಿ ಪರಿಣಮಿಸಿದೆ. ಇದು ಭಾರತದಲ್ಲಿ ಎಷ್ಟು ಉತ್ತಮ ಆಟಗಾರರಿದ್ದಾರೆ ಎಂಬುದನ್ನು ತೋರಿಸುತ್ತದೆ. ಹೀಗಾಗಿ ಈ ಬಾರಿ ವಿಶ್ವಕಪ್ ಗೆಲ್ಲುವ ನನ್ನ ನೆಚ್ಚಿನ ತಂಡ ಭಾರತವೆಂದು’ ಇರ್ಫಾನ್ ಪಠಾಣ್ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶರ್ಮಿ ಬುಮ್ರಾ, ಮೊಹಮ್ಮದ್ ಶರ್ಮಿ ಬುಮ್ರಾ , ಕುಲ್ದೀಪ್ ಯಾದವ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ