ಟ್ರ್ಯಾಕ್ ತಪ್ಪಿದ ಇಂಗ್ಲೆಂಡ್: ಸತತ ಸೋಲುಗಳಿಂದ ಕಂಗೆಟ್ಟ ಆಂಗ್ಲರು

England Team: 2019 ರಲ್ಲಿ ಏಕದಿನ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದ ಇಂಗ್ಲೆಂಡ್ ತಂಡವು ಕಳೆದೊಂದು ವರ್ಷದಿಂದ ಟ್ರ್ಯಾಕ್ ತಪ್ಪಿರುವುದು ಸ್ಪಷ್ಟ. ಇದೇ ಕಾರಣದಿಂದಾಗಿ ಬಲಿಷ್ಠ ಪಡೆಯನ್ನು ಹೊಂದಿದ್ದರೂ ಈ ಬಾರಿಯ ವಿಶ್ವಕಪ್​ನಲ್ಲಿ ಇಂಗ್ಲೆಂಡ್ 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ಟ್ರ್ಯಾಕ್ ತಪ್ಪಿದ ಇಂಗ್ಲೆಂಡ್: ಸತತ ಸೋಲುಗಳಿಂದ ಕಂಗೆಟ್ಟ ಆಂಗ್ಲರು
England
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 10, 2023 | 5:12 PM

ಏಕದಿನ ಕ್ರಿಕೆಟ್​ನ ಬಲಿಷ್ಠ ಪಡೆಗಳಾಗಿ ಗುರುತಿಸಿಕೊಂಡಿದ್ದ ಇಂಗ್ಲೆಂಡ್ (England) ತಂಡವು ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಇದಕ್ಕೆ ಸಾಕ್ಷಿಯೇ ಇತ್ತೀಚಿನ ಏಕದಿನ ವಿಶ್ವಕಪ್​ನಲ್ಲಿನ ಪ್ರದರ್ಶನ. ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಕೂಡ ಸರಣಿ ಸೋತಿದೆ.

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ವೆಸ್ಟ್ ಇಂಡೀಸ್ ತಂಡವು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ವೆಸ್ಟ್ ಇಂಡೀಸ್ 25 ವರ್ಷಗಳ ಬಳಿಕ ಆಂಗ್ಲರ ವಿರುದ್ಧ ಸರಣಿ ಗೆದ್ದಿದೆ. ಅಂದರೆ ಕಳೆದ ಎರಡುವರೆ ದಶಕಗಳಿಂದ ಇಂಗ್ಲೆಂಡ್ ತಂಡ ವಿಂಡೀಸ್ ವಿರುದ್ಧ ಪಾರುಪತ್ಯ ಮೆರೆದಿತ್ತು.

ಇದೀಗ ಆಂಗ್ಲರ ಪಡೆಗೆ ಸೋಲುಣಿಸಿ ವೆಸ್ಟ್ ಇಂಡೀಸ್ ಗೆಲುವಿನ ಲಯಕ್ಕೆ ಮರಳಿದೆ. ಏಕೆಂದರೆ ಈ ಬಾರಿಯ ವಿಶ್ವಕಪ್​ಗೆ ವೆಸ್ಟ್ ಇಂಡೀಸ್ ತಂಡವು ಅರ್ಹತೆ ಪಡೆದಿರಲಿಲ್ಲ. ಇದೀಗ ಅಂತಹ ವೆಸ್ಟ್ ಇಂಡೀಸ್ ವಿರುದ್ಧವೇ ಜೋಸ್ ಬಟ್ಲರ್ ಪಡೆ ಮುಗ್ಗರಿಸಿ ಭಾರೀ ಮುಖಭಂಗಕ್ಕೆ ಒಳಗಾಗಿದ್ದಾರೆ.

ಇಲ್ಲಿ ಮತ್ತೊಂದು ಕುತೂಹಲಕಾರಿ ವಿಷಯ ಎಂದರೆ ಕಳೆದ 12 ಏಕದಿನ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ ಗೆದ್ದಿರುವುದು ಕೇವಲ 4 ಮ್ಯಾಚ್​ಗಳಲ್ಲಿ ಮಾತ್ರ. ಅಂದರೆ 8 ಪಂದ್ಯಗಳಲ್ಲೂ ಸೋಲನುಭವಿಸಿದೆ. ಇದೇ ಕಾರಣದಿಂದ ಜೋಸ್ ಬಟ್ಲರ್ ನಾಯಕತ್ವಕ್ಕೂ ಕುತ್ತು ಬರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಒಟ್ಟಿನಲ್ಲಿ 2019 ರಲ್ಲಿ ಏಕದಿನ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದ ಇಂಗ್ಲೆಂಡ್ ತಂಡವು ಕಳೆದೊಂದು ವರ್ಷದಿಂದ ಟ್ರ್ಯಾಕ್ ತಪ್ಪಿರುವುದು ಸ್ಪಷ್ಟ. ಇದೇ ಕಾರಣದಿಂದಾಗಿ ಬಲಿಷ್ಠ ಪಡೆಯನ್ನು ಹೊಂದಿದ್ದರೂ ಈ ಬಾರಿಯ ವಿಶ್ವಕಪ್​ನಲ್ಲಿ ಇಂಗ್ಲೆಂಡ್ 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಕೂಡ ಸರಣಿ ಸೋಲುವ ಮೂಲಕ ಮುಜುಗರಕ್ಕೊಳಗಾಗಿದೆ. ಹೀಗಾಗಿ ಮುಂಬರುವ ಸರಣಿಗಳಲ್ಲಿ ಇಂಗ್ಲೆಂಡ್ ಪಡೆಯಲ್ಲಿ ಮಹತ್ವದ ಬದಲಾವಣೆ ಕಂಡು ಬಂದರೂ ಅಚ್ಚರಿಪಡಬೇಕಿಲ್ಲ.

ಇದನ್ನೂ ಓದಿ: ಮಾಜಿ RCB ಆಟಗಾರನಿಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

ಪ್ರಸ್ತುತ ಇಂಗ್ಲೆಂಡ್ ಏಕದಿನ ತಂಡ : ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಗಸ್ ಅಟ್ಕಿನ್ಸನ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಝಾಕ್ ಕ್ರಾಲಿ, ಸ್ಯಾಮ್ ಕರನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜಾಕ್ಸ್, ಲಿಯಾಮ್ ಲಿವಿಂಗ್​ಸ್ಟೋನ್, ಒಲಿ ಪೋಪ್, ಫಿಲ್ ಸಾಲ್ಟ್, ಜೋಶ್ ಟಂಗ್ ಮತ್ತು ಜಾನ್ ಟರ್ನರ್.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ