
ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಆಶಸ್ ಟೆಸ್ಟ್ ಪಂದ್ಯದ ವೇಳೆ ಗಬ್ಬಾದಲ್ಲಿ ನಡೆದ ಕುತೂಹಲಕಾರಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ಇಂಗ್ಲೆಂಡ್‌ನ ಯುವ ಕ್ರಿಕೆಟ್ ಅಭಿಮಾನಿಯೊಬ್ಬ ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ನಲ್ಲಿ ಮೈದಾನದ ಹೊರಗೆ ತನ್ನ ಪ್ರೇಯಸಿಗೆ ಪ್ರೇಮ ನಿವೇದನೆ ಮಾಡಿ ಎಲ್ಲರ ಹುಬ್ಬೆರುವಂತೆ ಮಾಡಿದ್ದಾನೆ. ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಹುಡುಗ ಆಸ್ಟ್ರೇಲಿಯಾದ ತನ್ನ ಗೆಳತಿಗೆ ಪಂದ್ಯದ ಸಮಯದಲ್ಲಿ ಪ್ರಪೋಸ್ ಮಾಡಿದ್ದಾನೆ. ಅದಕ್ಕೆ ಹುಡುಗಿ ಓಕೆ ಕೂಡ ಅಂದಿದ್ದಾಳೆ.
ಪ್ರಪೋಸಲ್ ಒಪ್ಪಿಕೊಂಡ ಹುಡುಗಿ ತನ್ನ ಬಾಯ್ ಫ್ರೆಂಡ್ ನನ್ನು ಅಪ್ಪಿಕೊಂಡಳು. ಅದರ ನಂತರ ಉಂಗುರಗಳನ್ನು ಬದಲಾಯಿಸಲಾಯಿತು. ಈ ವೇಳೆ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಇಬ್ಬರನ್ನೂ ಅಭಿನಂದಿಸಿದರು. ಹುಡುಗಿಯ ಹೆಸರು ನಟಾಲಿಯಾ ಮತ್ತು ಹುಡುಗನ ಹೆಸರು ರಾಬ್ ಎಂದು ತಿಳಿದುಬಂದಿದೆ. ಮೈದಾನದಲ್ಲಿ ದೊಡ್ಡ ಪರದೆಯ ಮೇಲೆ ಈ ವಿಶೇಷ ಕ್ಷಣವನ್ನು ನೇರಪ್ರಸಾರ ಮಾಡಲಾಯಿತು. ಈಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ.
YES ?
Massive shoutout to Rob Hale, he met Natalie back in 2017 during the last #Ashes with the Barmy Army!
Congrats guys ?????????
pic.twitter.com/iZsLTxSGAi— England’s Barmy Army (@TheBarmyArmy) December 10, 2021
ಪಂದ್ಯದ ಮೇಲೆ ಆಸಿಸ್ ಹಿಡಿತ
ಆಶಸ್ ಸರಣಿಯ ಭಾಗವಾಗಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಪಂದ್ಯದ ಮೂರನೇ ದಿನವಾದ ಶುಕ್ರವಾರ ಆಸ್ಟ್ರೇಲಿಯ ಮೊದಲ ಇನಿಂಗ್ಸ್ 425ಕ್ಕೆ ಕೊನೆಗೊಂಡಿತು. ಟ್ರಾವಿಸ್ ಹೆಡ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ 148 ಎಸೆತಗಳಲ್ಲಿ 152 ರನ್ ಗಳಿಸಿದರು. ಅದೇ ಸಮಯದಲ್ಲಿ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ 23 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಮೊದಲ ಇನಿಂಗ್ಸ್‌ನಲ್ಲಿ ಖಾತೆ ತೆರೆಯಲು ಸಾಧ್ಯವಾಗದ ರೋರಿ ಬರ್ನ್ಸ್ ಎರಡನೇ ಇನಿಂಗ್ಸ್‌ನಲ್ಲಿ 13 ರನ್ ಗಳಿಸಿ ಔಟಾದರು. ನಂತರ ಹಬೀದಾ ಹಮೀದ್ 27 ರನ್ ಗಳಿಸಿ ಪೆವಿಲಿಯನ್ ಸೇರಿದರು. ಸದ್ಯ ಇಂಗ್ಲೆಂಡ್ 2 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿದೆ. ಇನ್ನೂ 119 ರನ್‌ಗಳ ಹಿನ್ನಡೆಯಲ್ಲಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 147 ರನ್‌ಗಳಿಗೆ ಆಲೌಟ್ ಆಗಿತ್ತು. ಆಸ್ಟ್ರೇಲಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.