ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಆಂಗ್ಲರಿಗೆ ಬಿಗ್ ಶಾಕ್; ವಿಶ್ವಕಪ್​ನಿಂದ ಹೊರಬಿದ್ದ ಸ್ಟಾರ್ ಬೌಲರ್..!

ICC World Cup 2023: ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಸೋಲಿನ ಸುಳಿಗೆ ಸಿಲುಕಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ರೀಸ್ ಟೋಪ್ಲಿ ಗಾಯದ ಸಮಸ್ಯೆಯಿಂದಾಗಿ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ಈಗಾಗಲೆ ದುರ್ಬಲ ತಂಡಗಳೆದುರು ಸೋತು ಟೂರ್ನಿಯ ಪಾಯಿಂಟ್​ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿರುವ ಬಟ್ಲರ್​ ಪಡೆಗೆ ಇದು ನುಂಗಲಾರದ ಬಿಸಿ ತುಪ್ಪವಾಗಿ ಪರಣಮಿಸಿದೆ.

ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಆಂಗ್ಲರಿಗೆ ಬಿಗ್ ಶಾಕ್; ವಿಶ್ವಕಪ್​ನಿಂದ ಹೊರಬಿದ್ದ ಸ್ಟಾರ್ ಬೌಲರ್..!
ಇಂಗ್ಲೆಂಡ್ ತಂಡ
Follow us
ಪೃಥ್ವಿಶಂಕರ
|

Updated on: Oct 23, 2023 | 6:18 AM

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ (ICC World Cup 2023) ಸೋಲಿನ ಸುಳಿಗೆ ಸಿಲುಕಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ (England Cricket Team) ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ರೀಸ್ ಟೋಪ್ಲಿ (Reece Topley) ಗಾಯದ ಸಮಸ್ಯೆಯಿಂದಾಗಿ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ಈಗಾಗಲೆ ದುರ್ಬಲ ತಂಡಗಳೆದುರು ಸೋತು ಟೂರ್ನಿಯ ಪಾಯಿಂಟ್​ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿರುವ ಬಟ್ಲರ್​ ಪಡೆಗೆ ಇದು ನುಂಗಲಾರದ ಬಿಸಿ ತುಪ್ಪವಾಗಿ ಪರಣಮಿಸಿದೆ. ವಾಸ್ತವವಾಗಿ ಈ ಟೂರ್ನಿ ಆರಂಭಕ್ಕೂ ಮುನ್ನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಇಂಗ್ಲೆಂಡ್ ಕೂಡ ಒಂದಾಗಿತ್ತು. ಆದರೆ, ಟೂರ್ನಿ ಆರಂಭವಾದ ನಂತರ ಸೋಲಿನ ಮೇಲೆ ಸೋಲು ಅನುಭವಿಸಿರುವ ಆಂಗ್ಲ ಪಡೆ ಸೆಮಿಫೈನಲ್​ಗೇರುವುದು ಕಷ್ಟವಾಗಿದೆ. ಇದರ ನಡುವೆ ತಂಡದ ಪ್ರಮುಖ ಬೌಲರ್​ ರೀಸ್ ಟೋಪ್ಲಿ ವಿಶ್ವಕಪ್​ನಿಂತ ಹೊರಬಿದ್ದಿರುವುದು ತಂಡವನ್ನು ಚಿಂತೆಗೆ ದೂಡಿದೆ.

ರೀಸ್ ಟೋಪ್ಲಿ ಬೆರಳಿಗೆ ಗಾಯ

ವಾಸ್ತವವಾಗಿ ಇಂಗ್ಲೆಂಡ್ ತಂಡ ತನ್ನ ಮುಂದಿನ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 29 ರಂದು ನಡೆಯಲಿದೆ. ಈ ಹೈವೋಲ್ಟೇಜ್ ಕದನದ ತಯಾರಿಯಲ್ಲಿದ್ದ ಆಂಗ್ಲರಿಗೆ ಟೋಪ್ಲಿ ಅಲಭ್ಯತೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ. ಇನ್ನು ಟೋಪ್ಲಿ ಇಂಚುರಿ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ‘ರೀಸ್ ಟೋಪ್ಲಿ ಅವರ ಬೆರಳಿಗೆ ಗಾಯವಾಗಿದೆ. ಹೀಗಾಗಿ ರೀಸ್ ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ ಎಂದು ಬರೆದುಕೊಂಡಿದೆ.

World Cup 2023 Points Table: ಕಿವೀಸ್ ಮಣಿಸಿ ಪಾಯಿಂಟ್‌ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಭಾರತ..!

ಮೇಲೆ ಹೇಳಿದಂತೆ ಇಂಗ್ಲೆಂಡ್ ತಂಡ ಈಗಾಗಲೇ ಆಡಿರುವ 4 ಪಂದ್ಯಗಳಲ್ಲಿ 3 ರಲ್ಲಿ ಸೋತಿದೆ. ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ಕೆಟ್ಟ ಸ್ಥಿತಿಯಲ್ಲಿದ್ದು, ವಿಶ್ವಕಪ್ ವಿಜೇತ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದ ನಂತರದ ಸ್ಥಾನದಲ್ಲಿ ಅಂದರೆ, ಒಂಬತ್ತನೇ ಸ್ಥಾನದಲ್ಲಿದೆ. ಇದೀಗ ಟೋಪ್ಲಿಯ ನಿರ್ಗಮನವು ಇಂಗ್ಲೆಂಡ್‌ಗೆ ದುಬಾರಿಯಾಗಲಿದೆ.

4 ಪಂದ್ಯಗಳಲ್ಲಿ 1 ಗೆಲುವು

ಏತನ್ಮಧ್ಯೆ, ಇಂಗ್ಲೆಂಡ್ ಈ ವಿಶ್ವಕಪ್‌ನಲ್ಲಿ ಇದುವರೆಗೆ ಒಟ್ಟು 4 ಪಂದ್ಯಗಳನ್ನು ಆಡಿದೆ. ಈ 4 ಪಂದ್ಯಗಳಲ್ಲಿ ಇಂಗ್ಲೆಂಡ್ ಕೇವಲ 1 ಪಂದ್ಯದಲ್ಲಿ ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಉಳಿದಂತೆ, ನ್ಯೂಜಿಲೆಂಡ್, ಅಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ಸೋಲುಂಡಿದೆ. ಹೀಗಾಗಿ ರೀಸ್ ಟೋಪ್ಲಿ ಇಲ್ಲದೆ ವಿಶ್ವಕಪ್‌ನಲ್ಲಿ ಆಡುವುದು ಇಂಗ್ಲೆಂಡ್‌ಗೆ ಸವಾಲಾಗಿದೆ.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲೆ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ