ಐಸಿಸಿ ಏಕದಿನ ವಿಶ್ವಕಪ್ನಲ್ಲಿ (ICC World Cup 2023) ಸೋಲಿನ ಸುಳಿಗೆ ಸಿಲುಕಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ (England Cricket Team) ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ರೀಸ್ ಟೋಪ್ಲಿ (Reece Topley) ಗಾಯದ ಸಮಸ್ಯೆಯಿಂದಾಗಿ ವಿಶ್ವಕಪ್ನಿಂದ ಹೊರಗುಳಿದಿದ್ದಾರೆ. ಈಗಾಗಲೆ ದುರ್ಬಲ ತಂಡಗಳೆದುರು ಸೋತು ಟೂರ್ನಿಯ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿರುವ ಬಟ್ಲರ್ ಪಡೆಗೆ ಇದು ನುಂಗಲಾರದ ಬಿಸಿ ತುಪ್ಪವಾಗಿ ಪರಣಮಿಸಿದೆ. ವಾಸ್ತವವಾಗಿ ಈ ಟೂರ್ನಿ ಆರಂಭಕ್ಕೂ ಮುನ್ನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಇಂಗ್ಲೆಂಡ್ ಕೂಡ ಒಂದಾಗಿತ್ತು. ಆದರೆ, ಟೂರ್ನಿ ಆರಂಭವಾದ ನಂತರ ಸೋಲಿನ ಮೇಲೆ ಸೋಲು ಅನುಭವಿಸಿರುವ ಆಂಗ್ಲ ಪಡೆ ಸೆಮಿಫೈನಲ್ಗೇರುವುದು ಕಷ್ಟವಾಗಿದೆ. ಇದರ ನಡುವೆ ತಂಡದ ಪ್ರಮುಖ ಬೌಲರ್ ರೀಸ್ ಟೋಪ್ಲಿ ವಿಶ್ವಕಪ್ನಿಂತ ಹೊರಬಿದ್ದಿರುವುದು ತಂಡವನ್ನು ಚಿಂತೆಗೆ ದೂಡಿದೆ.
ವಾಸ್ತವವಾಗಿ ಇಂಗ್ಲೆಂಡ್ ತಂಡ ತನ್ನ ಮುಂದಿನ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 29 ರಂದು ನಡೆಯಲಿದೆ. ಈ ಹೈವೋಲ್ಟೇಜ್ ಕದನದ ತಯಾರಿಯಲ್ಲಿದ್ದ ಆಂಗ್ಲರಿಗೆ ಟೋಪ್ಲಿ ಅಲಭ್ಯತೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ. ಇನ್ನು ಟೋಪ್ಲಿ ಇಂಚುರಿ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ‘ರೀಸ್ ಟೋಪ್ಲಿ ಅವರ ಬೆರಳಿಗೆ ಗಾಯವಾಗಿದೆ. ಹೀಗಾಗಿ ರೀಸ್ ವಿಶ್ವಕಪ್ನಿಂದ ಹೊರಬಿದ್ದಿದ್ದಾರೆ ಎಂದು ಬರೆದುಕೊಂಡಿದೆ.
World Cup 2023 Points Table: ಕಿವೀಸ್ ಮಣಿಸಿ ಪಾಯಿಂಟ್ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಭಾರತ..!
ಮೇಲೆ ಹೇಳಿದಂತೆ ಇಂಗ್ಲೆಂಡ್ ತಂಡ ಈಗಾಗಲೇ ಆಡಿರುವ 4 ಪಂದ್ಯಗಳಲ್ಲಿ 3 ರಲ್ಲಿ ಸೋತಿದೆ. ವಿಶ್ವಕಪ್ನಲ್ಲಿ ಇಂಗ್ಲೆಂಡ್ ಕೆಟ್ಟ ಸ್ಥಿತಿಯಲ್ಲಿದ್ದು, ವಿಶ್ವಕಪ್ ವಿಜೇತ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದ ನಂತರದ ಸ್ಥಾನದಲ್ಲಿ ಅಂದರೆ, ಒಂಬತ್ತನೇ ಸ್ಥಾನದಲ್ಲಿದೆ. ಇದೀಗ ಟೋಪ್ಲಿಯ ನಿರ್ಗಮನವು ಇಂಗ್ಲೆಂಡ್ಗೆ ದುಬಾರಿಯಾಗಲಿದೆ.
ಏತನ್ಮಧ್ಯೆ, ಇಂಗ್ಲೆಂಡ್ ಈ ವಿಶ್ವಕಪ್ನಲ್ಲಿ ಇದುವರೆಗೆ ಒಟ್ಟು 4 ಪಂದ್ಯಗಳನ್ನು ಆಡಿದೆ. ಈ 4 ಪಂದ್ಯಗಳಲ್ಲಿ ಇಂಗ್ಲೆಂಡ್ ಕೇವಲ 1 ಪಂದ್ಯದಲ್ಲಿ ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಉಳಿದಂತೆ, ನ್ಯೂಜಿಲೆಂಡ್, ಅಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ಸೋಲುಂಡಿದೆ. ಹೀಗಾಗಿ ರೀಸ್ ಟೋಪ್ಲಿ ಇಲ್ಲದೆ ವಿಶ್ವಕಪ್ನಲ್ಲಿ ಆಡುವುದು ಇಂಗ್ಲೆಂಡ್ಗೆ ಸವಾಲಾಗಿದೆ.
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್ಸ್ಟೋ, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲೆ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ