Stuart Broad Retirement: ವೃತ್ತಿ ಬದುಕಿಗೆ ವಿದಾಯ ಹೇಳಿದ ಇಂಗ್ಲೆಂಡ್ ವೇಗಿ ಸ್ಟುವರ್ಟ್​ ಬ್ರಾಡ್

Ashes 2023: ಓವಲ್‌ನಲ್ಲಿ ನಡೆಯುತ್ತಿರುವ ಕೊನೆಯ ಟೆಸ್ಟ್‌ನ ಮೂರನೇ ದಿನದಾಟ ಮುಗಿದ ನಂತರ ಬ್ರಾಡ್ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

Stuart Broad Retirement: ವೃತ್ತಿ ಬದುಕಿಗೆ ವಿದಾಯ ಹೇಳಿದ ಇಂಗ್ಲೆಂಡ್ ವೇಗಿ ಸ್ಟುವರ್ಟ್​ ಬ್ರಾಡ್
ಸ್ಟುವರ್ಟ್​ ಬ್ರಾಡ್ ನಿವೃತ್ತಿImage Credit source: insidesport
Follow us
ಪೃಥ್ವಿಶಂಕರ
|

Updated on:Jul 30, 2023 | 6:22 AM

ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ (England vs Australia) ನಡುವೆ ನಡೆಯುತ್ತಿರುವ ಆ್ಯಶಸ್ ಸರಣಿ (Ashes 2023) ಅಂತಿಮ ಹಂತದಲ್ಲಿದ್ದು, ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯನ್ನು ಡ್ರಾ ಮಾಡಿಕೊಳ್ಳಲು ಆತಿಥೇಯ ಇಂಗ್ಲೆಂಡ್ ನಾನಾ ಕಸರತ್ತು ನಡೆಸುತ್ತಿದೆ. ಆದರೆ ಕೊನೆಯ ಟೆಸ್ಟ್ ಮುಗಿಯುವ ಮುನ್ನವೇ ಇಂಗ್ಲೆಂಡ್ ತಂಡಕ್ಕೆ ಶಾಕ್ ಎದುರಾಗಿದ್ದು, ತಂಡದ ಅನುಭವಿ ವೇಗದ ಬೌಲರ್ ಸ್ಟುವರ್ಟ್ ಬ್ರಾಡ್ (Stuart Broad) ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. ಓವಲ್‌ನಲ್ಲಿ (Oval) ನಡೆಯುತ್ತಿರುವ ಕೊನೆಯ ಟೆಸ್ಟ್‌ನ ಮೂರನೇ ದಿನದಾಟ ಮುಗಿದ ನಂತರ ಬ್ರಾಡ್ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಮೂರನೇ ದಿನದಾಟದಲ್ಲಿ ಅಜೇಯರಾಗಿ ಮರಳಿದ ಬಳಿಕ ಸ್ಕೈ ಸ್ಪೋರ್ಟ್ಸ್ ಜೊತೆ ಮಾತನಾಡಿದ 37ರ ಹರೆಯದ ಸ್ಟುವರ್ಟ್​ ಬ್ರಾಡ್, ‘ಅಂತಿಮ ಟೆಸ್ಟ್ ಮುಗಿಯುವ ಒಂದು ದಿನ ಮುಂಚಿತವಾಗಿ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಈ ಬಗ್ಗೆ ತಮ್ಮ ನಾಯಕ ಸ್ಟೋಕ್ಸ್‌ಗೆ ತಿಳಿಸಿದ್ದೇನೆ. ತಮ್ಮ ತಂಡದೊಂದಿಗೆ ಈ ಸುದ್ದಿಯನ್ನು ಹಂಚಿಕೊಂಡಿದ್ದೇನೆ. ಆ್ಯಶಸ್‌ನಲ್ಲಿ ತನ್ನ ಕೊನೆಯ ಟೆಸ್ಟ್ ಆಡುವುದು ನನ್ನ ಕನಸ್ಸಾಗಿತ್ತು. ಹೀಗಾಗಿ ಆ್ಯಶಸ್ ಸರಣಿಯ ಕೊನೆಯ ಟೆಸ್ಟ್​ನಲ್ಲಿ ನಿವೃತ್ತಿ ನಿರ್ಧಾರಕ್ಕೆ ಬಂದಿದ್ದೇನೆ’ ಎಂದಿದ್ದಾರೆ.

Ashes 2023: 600 ಟೆಸ್ಟ್ ವಿಕೆಟ್; ಆ್ಯಶಸ್​ನಲ್ಲಿ ಮತ್ತೊಂದು ದಾಖಲೆ ಬರೆದ ಸ್ಟುವರ್ಟ್ ಬ್ರಾಡ್..!

ಆಂಡರ್ಸನ್‌ ಬಗ್ಗೆ ಚರ್ಚೆ, ಬ್ರಾಡ್‌ ನಿವೃತ್ತಿ

ಬ್ರಾಡ್ ಅವರ ನಿರ್ಧಾರವು ಆಘಾತಕಾರಿಯಾಗಿದೆ. ಏಕೆಂದರೆ ಸರಣಿ ಆರಂಭಕ್ಕೂ ಮೊದಲು, ಸರಣಿ ಆರಂಭವಾದ ಬಳಿಕ ಬ್ರಾಡ್ ಅವರ ಸಹ ವೇಗಿ ಜೇಮ್ಸ್ ಆಂಡರ್ಸನ್ ಅವರ ನಿವೃತ್ತಿಯ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. 41ರ ಹರೆಯದ ಆ್ಯಂಡರ್ಸನ್ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಇದು ಆಂಡರ್ಸನ್ ಅವರ ಕೊನೆಯ ಸರಣಿ ಎಂದು ಪರಿಗಣಿಸಲಾಗುತ್ತಿದೆ. ಆದರೆ ಆಂಡರ್ಸನ್ ನಿವೃತ್ತಿಯ ಸಾಧ್ಯತೆಯನ್ನು ನಿರಾಕರಿಸಿದ್ದಾರೆ. ಆದರೆ ಅವರ ಪಾಲುದಾರ ಬ್ರಾಡ್ ತಮ್ಮ ನಿವೃತ್ತಿ ನಿರ್ಧಾರದಿಂದ ಸಂಚಲನ ಸೃಷ್ಟಿಸಿದ್ದಾರೆ.

ಯುವರಾಜ್ ಎದುರು 6 ಎಸೆತಗಳಲ್ಲಿ 6 ಸಿಕ್ಸರ್

ಕ್ರಿಕೆಟ್ ಇತಿಹಾಸದಲ್ಲಿ ಅತ್ಯುತ್ತಮ ವೇಗದ ಬೌಲರ್‌ಗಳಲ್ಲಿ ಒಬ್ಬರಾಗಿರುವ ಸ್ಟುವರ್ಟ್ ಬ್ರಾಡ್, 2006 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದರು. ನಂತರ ಇಂಗ್ಲೆಂಡ್ ಪರ ಎಲ್ಲಾ ಮೂರು ಸ್ವರೂಪಗಳಲ್ಲಿ ಆಡಲಾರಂಭಿಸಿದ ಬ್ರಾಡ್, 2007ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಯುವರಾಜ್ ಸಿಂಗ್ ಎದುರು 6 ಎಸೆತಗಳಲ್ಲಿ 6 ಸಿಕ್ಸರ್ ಹೊಡೆಸಿಕೊಂಡು ಸಾಕಷ್ಟು ಚರ್ಚೆಗೊಳಗಾಗಿದ್ದರು. ಇದರ ಹೊರತಾಗಿಯೂ ಧೈರ್ಯವನ್ನು ಕಳೆದುಕೊಳ್ಳದ ಬ್ರಾಡ್, ಕ್ರಮೇಣ ಅತ್ಯುತ್ತಮ ವೇಗದ ಬೌಲರ್ ಆಗಿ ತನ್ನನ್ನು ತಾನು ಸಾಭೀತುಪಡಿಸಿಕೊಂಡರು. ಟೆಸ್ಟ್ ಕ್ರಿಕೆಟ್‌ನಲ್ಲಿ, ವಿಶೇಷವಾಗಿ ಜೇಮ್ಸ್ ಆಂಡರ್ಸನ್‌ ಅವರೊಂದಿಗೆ ಬ್ರಾಡ್, ಇಂಗ್ಲೆಂಡ್ ಬೌಲಿಂಗ್ ವಿಭಾಗದ ಬೆನ್ನೇಲುಬಾಗಿದ್ದರು.

ಬ್ರಾಡ್ ವೃತ್ತಿಜೀವನ

ಬ್ರಾಡ್ ಇಂಗ್ಲೆಂಡ್ ಪರ 167 ಟೆಸ್ಟ್ ಪಂದ್ಯಗಳನ್ನು ಆಡಿದ್ದು , ಇದುವರೆಗೆ 602 ವಿಕೆಟ್ ಪಡೆದಿದ್ದಾರೆ. ಅಲ್ಲದೆ ಆ್ಯಶಸ್ ಇತಿಹಾಸದಲ್ಲಿ 150 ವಿಕೆಟ್ ಪಡೆದ ಮೊದಲ ಇಂಗ್ಲೆಂಡ್ ಬೌಲರ್ ಕೂಡ ಎನಿಸಿಕೊಂಡಿದ್ದಾರೆ. ಅದೇ ಸಮಯದಲ್ಲಿ, 121 ಏಕದಿನ ಪಂದ್ಯಗಳನ್ನಾಡಿರುವ ಬ್ರಾಡ್ 178 ಮತ್ತು 56 ಟಿ20 ಪಂದ್ಯಗಳಲ್ಲಿ 65 ವಿಕೆಟ್ಗಳನ್ನು ಪಡೆದಿದ್ದಾರೆ. ಬ್ಯಾಟಿಂಗ್​​ನಲ್ಲೂ ಮಿಂಚಿರುವ ಬ್ರಾಡ್, ಟೆಸ್ಟ್‌ನಲ್ಲಿ 1 ಶತಕ ಮತ್ತು 13 ಅರ್ಧ ಶತಕಗಳ ಸಹಾಯದಿಂದ 3647 ರನ್ ಕಲೆಹಾಕಿದ್ದಾರೆ. 2010ರಲ್ಲಿ ಟಿ20 ವಿಶ್ವಕಪ್ ಗೆದ್ದ ತಂಡದಲ್ಲಿದ್ದ ಅವರು, 4 ಬಾರಿ ಆ್ಯಶಸ್ ಗೆದ್ದ ತಂಡದ ಭಾಗವಾಗಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:05 am, Sun, 30 July 23

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ