AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನವನ್ನು ವೈಟ್ ವಾಶ್ ಮಾಡಿದ ಇಂಗ್ಲೆಂಡ್‌

ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ಪಾಕಿಸ್ತಾನ ತಂಡ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-0 ವೈಟ್‌ವಾಶ್ ಸೋಲನುಭವಿಸಿದೆ. ಇಂಗ್ಲೆಂಡ್ ನೆಲದಲ್ಲಿ ಒಂದೂ ಪಂದ್ಯ ಗೆಲ್ಲಲು ಪಾಕ್ ವಿಫಲವಾಗಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ ಪಾಕಿಸ್ತಾನವನ್ನು 8 ವಿಕೆಟ್‌ಗಳಿಂದ ಮಣಿಸಿತು. 130 ರನ್‌ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿತು.

ಪಾಕಿಸ್ತಾನವನ್ನು ವೈಟ್ ವಾಶ್ ಮಾಡಿದ ಇಂಗ್ಲೆಂಡ್‌
ಇಂಗ್ಲೆಂಡ್ Vs ಪಾಕಿಸ್ತಾನ
ಪೃಥ್ವಿಶಂಕರ
|

Updated on:Sep 12, 2026 | 6:39 PM

Share

ಮೂರು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್‌ ಪ್ರವಾಸ ಮಾಡಿದ್ದ ಪಾಕಿಸ್ತಾನ ತಂಡ ವೈಟ್ ವಾಶ್ ಮುಖಭಂಗವನ್ನು ಅನುಭವಿಸಿದೆ. ಇಂಗ್ಲೆಂಡ್‌ ನೆಲದಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲದ ಪಾಕಿಸ್ತಾನ 3-0 ಅಂತರದಿಂದ ಸರಣಿಯನ್ನು ಕಳೆದುಕೊಂಡಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌, ಪಾಕಿಸ್ತಾನವನ್ನು 8 ವಿಕೆಟ್​ಗಳಿಂದ ಮಣಿಸುವಲ್ಲಿ ಯಶಸ್ವಿಯಾಯಿತು. ಪೂರ್ಣ 4 ದಿನಗಳು ನಡೆಯದ ಈ ಪಂದ್ಯದಲ್ಲಿ ಇಂಗ್ಲೆಂಡ್‌ ಗೆಲುವಿಗೆ 130 ರನ್​ಗಳ ಗುರಿ ನೀಡಲಾಗಿತ್ತು. ಈ ಗುರಿಯನ್ನು ಇಂಗ್ಲೆಂಡ್‌ ಕೇವಲ 2 ವಿಕೆಟ್‌ಗಳನ್ನು ಕಳೆದುಕೊಂಡು ಬೆನ್ನಟ್ಟಿತು. ಇತ್ತ ಮೊದಲೆರಡು ಪಂದ್ಯಗಳಲ್ಲಿ ಏಕಪಕ್ಷೀಯವಾಗಿ ಸೋತಿದ್ದ ಪಾಕಿಸ್ತಾನ ಕೊನೆಯ ಟೆಸ್ಟ್​​ನಲ್ಲಿ ಗೆಲುವಿಗಾಗಿ ಹೋರಾಟ ನೀಡಿತ್ತಾದರೂ ಆಂಗ್ಲರ ಮುಂದೆ ಗೆಲುವು ಸಾಧಿಸುವಲ್ಲಿ ವಿಫಲವಾಯಿತು.

8 ವಿಕೆಟ್​ಗಳಿಂದ ಗೆದ್ದ ಇಂಗ್ಲೆಂಡ್

ಆದಾಗ್ಯೂ 130 ರನ್‌ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್​ಗೆ ಉತ್ತಮ ಆರಂಭ ಸಿಗಲಿಲ್ಲ. ಪಾಕಿಸ್ತಾನದ ವೇಗಿ ಮೊಹಮ್ಮದ್ ಅಬ್ಬಾಸ್ ಮೊದಲ ಓವರ್‌ನಲ್ಲಿಯೇ ಬೆನ್ ಡಕೆಟ್ ಮತ್ತು ಎಮಿಲಿಯೊ ಗೇ ಅವರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಸಂಚಲನ ಮೂಡಿಸಿದರು. ಆದರೆ ಆ ಬಳಿಕ ಜೊತೆಯಾದ ಅನುಭವಿ ಜೋ ರೂಟ್ ಮತ್ತು ಯುವ ಜೋರ್ಡಾನ್ ಕಾಕ್ಸ್ ಪಾಕಿಸ್ತಾನಿ ಬೌಲರ್‌ಗಳ ಮೇಲೆ ಪ್ರಾಬಲ್ಯ ಸಾಧಿಸಿದರು. ಜೋ ರೂಟ್ 69 ಎಸೆತಗಳಲ್ಲಿ ಅಜೇಯ 62 ರನ್ ಗಳಿಸಿದರೆ, ಜೋರ್ಡಾನ್ ಕಾಕ್ಸ್ 76 ಎಸೆತಗಳಲ್ಲಿ ಅಜೇಯ 59 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ಇಬ್ಬರು ಬ್ಯಾಟ್ಸ್‌ಮನ್‌ಗಳು ಮೂರನೇ ವಿಕೆಟ್‌ಗೆ ಪಂದ್ಯ ಗೆಲ್ಲುವ 130 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಳ್ಳುವ ಮೂಲಕ ಊಟದ ವಿರಾಮಕ್ಕೂ ಮೊದಲು ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಇಂಗ್ಲೆಂಡ್​ಗೆ 320 ರನ್ ಮುನ್ನಡೆ

ಈ ಪಂದ್ಯದ ಆರಂಭದಿಂದಲೂ ಇಂಗ್ಲೆಂಡ್‌ ಪ್ರಾಬಲ್ಯ ಸಾಧಿಸಿತ. ಮೊದಲ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನದ ಬ್ಯಾಟಿಂಗ್ ತೀರ ಕಳಪೆಯಾಗಿತ್ತು. ಹೀಗಾಗಿ ಇಡೀ ತಂಡವು ಕೇವಲ 33.5 ಓವರ್‌ಗಳಲ್ಲಿ 133 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 453 ರನ್‌ಗಳ ಬೃಹತ್ ಮೊತ್ತವನ್ನು ದಾಖಲಿಸಿತು. ತಂಡದ ಪರ ಹ್ಯಾರಿ ಬ್ರೂಕ್, ಡಾನ್ ಲಾರೆನ್ಸ್, ಎಮಿಲಿಯೊ ಗೇ, ಜೇಮೀ ಸ್ಮಿತ್ ಮತ್ತು ಓಲಿ ರಾಬಿನ್ಸನ್ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಹೀಗಾಗಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್​ನಲ್ಲಿ 320 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿತು.

7 ಸಾವಿರ ಕಿ.ಮೀ ಪ್ರಯಾಣಿಸಿ 2 ಇನ್ನಿಂಗ್ಸ್​ಗಳಲ್ಲೂ ಸೊನ್ನೆ ಸುತ್ತಿದ ಪಾಕ್ ಆರಂಭಿಕ

449 ರನ್ ಬಾರಿಸಿಯೂ ಸೋತ ಪಾಕ್

ಎರಡನೇ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನದ ಬ್ಯಾಟಿಂಗ್‌ ಅಮೋಘವಾಗಿತ್ತು. ತಂಡದ ಪರ ಶಾನ್ ಮಸೂದ್ 95, ಅಜಾನ್ ಅವೈಸ್ 59, ಬಾಬರ್ ಆಝಂ 76, ರಜೌಲ್ಲಾ 81 ಮತ್ತು ಮೊಹಮ್ಮದ್ ಅಬ್ಬಾಸ್ 42 ರನ್‌ಗಳ ಇನ್ನಿಂಗ್ಸ್ ಆಡಿದರು. ಇವರ ಆಟದಿಂದಾಗಿ ಪಾಕಿಸ್ತಾನ ಎರಡನೇ ಇನ್ನಿಂಗ್ಸ್​ನಲ್ಲಿ 449 ರನ್ ಗಳಿಸಿ ಇಂಗ್ಲೆಂಡ್‌ಗೆ 130 ರನ್‌ಗಳ ಗುರಿ ನೀಡಿತು. ಆದಾಗ್ಯೂ, ಮೊದಲ ಇನ್ನಿಂಗ್ಸ್‌ನ ಬೃಹತ್ ವೈಫಲ್ಯ ಮತ್ತು ರೂಟ್ ಮತ್ತು ಕಾಕ್ಸ್ ನಡುವಿನ ಅಜೇಯ ಜೊತೆಯಾಟ, ಪಾಕಿಸ್ತಾನವನ್ನು ಸೋಲಿಗೆ ದವಡೆಗೆ ತಳ್ಳಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:04 pm, Sat, 12 September 26

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್