AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಒಂದು ದಿನ ಮುಂಚಿತವಾಗಿ ಬಲಿಷ್ಠ ಪ್ಲೇಯಿಂಗ್ 11 ಘೋಷಿಸಿದ ಇಂಗ್ಲೆಂಡ್

India vs England 1st Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ನಾಳೆಯಿಂದ ಶುರುವಾಗಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಕ್ರಿಕೆಟ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡವು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ಹೆಸರಿಸಿದೆ.

IND vs ENG: ಒಂದು ದಿನ ಮುಂಚಿತವಾಗಿ ಬಲಿಷ್ಠ ಪ್ಲೇಯಿಂಗ್ 11 ಘೋಷಿಸಿದ ಇಂಗ್ಲೆಂಡ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 24, 2024 | 2:30 PM

Share

India vs England: ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಾಳೆಯಿಂದ (ಜ.25) ಶುರುವಾಗಲಿರುವ ಈ ಪಂದ್ಯಕ್ಕೂ ಒಂದು ದಿನ ಮುಂಚಿತವಾಗಿ ಇಂಗ್ಲೆಂಡ್ ಆಡುವ ಬಳಗವನ್ನು (England Playing XI) ಹೆಸರಿಸಿರುವುದು ವಿಶೇಷ.

ಬೆನ್ ಸ್ಟೋಕ್ಸ್ ಸಾರಥ್ಯದಲ್ಲಿ ಕಣಕ್ಕಿಳಿಯಲಿರುವ ಈ ತಂಡದಲ್ಲಿ ಮೂವರು ಸ್ಪಿನ್ನರ್​ಗಳಿಗೆ ಸ್ಥಾನ ಕಲ್ಪಿಸಲಾಗಿದೆ. ಅಲ್ಲದೆ ಏಕೈಕ ವೇಗದ ಬೌಲರ್​ನೊಂದಿಗೆ ಆಂಗ್ಲ ಪಡೆ ಭಾರತದ ವಿರುದ್ಧ ರಣತಂತ್ರ ರೂಪಿಸಿದೆ.

ಮೂವರು ಸ್ಪಿನ್ನರ್​ಗಳು:

ಹೈದರಾಬಾದ್ ಪಿಚ್ ಸ್ಪಿನ್​ ಬೌಲರ್​ಗಳಿಗೆ ಸಹಕಾರಿಯಾಗುವುದರಿಂದ ಇಂಗ್ಲೆಂಡ್ ತಂಡವು ಆಡುವ ಬಳಗದಲ್ಲಿ ಮೂವರು ಸ್ಪಿನ್ನರ್​ಗಳಿಗೆ ಮಣೆಹಾಕಿದೆ. ಅದರಂತೆ ಸ್ಪಿನ್ನರ್​ಗಳಾಗಿ ಜ್ಯಾಕ್ ಲೀಚ್, ರೆಹಾನ್ ಅಹ್ಮದ್ ಹಾಗೂ ಟಾಮ್ ಹಾರ್ಟ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಟಾಮ್ ಹಾರ್ಟ್ಲಿಗೆ ಇದು ಚೊಚ್ಚಲ ಪಂದ್ಯ ಎಂಬುದು ವಿಶೇಷ.

ಹ್ಯಾರಿ ಬ್ರೂಕ್ ಬದಲಿ ಆಟಗಾರ ಯಾರು?

ವೈಯುಕ್ತಿಕ ಕಾರಣಗಳಿಂದಾಗಿ ಈ ಸರಣಿಯಿಂದ ಹೊರಗುಳಿದಿರುವ ಸ್ಪೋಟಕ ದಾಂಡಿಗ ಹ್ಯಾರಿ ಬ್ರೂಕ್ ಬದಲಿಗೆ ತಂಡದಲ್ಲಿ ಬೆನ್ ಫೋಕ್ಸ್​ ಸ್ಥಾನ ಪಡೆದಿದ್ದಾರೆ. ಇಲ್ಲಿ ಫೋಕ್ಸ್ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಂಡರೆ, ಮತ್ತೋರ್ವ ವಿಕೆಟ್ ಕೀಪರ್ ಜಾನಿ ಬೈರ್​ಸ್ಟೋವ್ ಕೇವಲ ಬ್ಯಾಟರ್ ರೂಪದಲ್ಲಿ ಕಣಕ್ಕಿಳಿಯಲಿದ್ದಾರೆ.

ಬಲಿಷ್ಠ ಬ್ಯಾಟಿಂಗ್ ಲೈನಪ್:

ಇಂಗ್ಲೆಂಡ್ ತಂಡವು ನಾಲ್ವರು ಬೌಲರ್​ಗಳೊಂದಿಗೆ ಕಣಕ್ಕಿಳಿಯುವ ಮೂಲಕ ಬಲಿಷ್ಠ ಬ್ಯಾಟಿಂಗ್ ಲೈನಪ್ ಅನ್ನು ರೂಪಿಸಿದೆ. ಅದರಂತೆ ಝಾಕ್ ಕ್ರಾಲಿ ಹಾಗೂ ಬೆನ್ ಡಕೆಟ್ ಇನಿಂಗ್ಸ್​ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಒಲಿ ಪೋಪ್ ಕಣಕ್ಕಿಳಿಯಲಿದ್ದು, ನಾಲ್ಕನೇ ಕ್ರಮಾಂಕದಲ್ಲಿ ಜೋ ರೂಟ್ ಬ್ಯಾಟ್ ಬೀಸಲಿದ್ದಾರೆ.

ಐದನೇ ಕ್ರಮಾಂಕದಲ್ಲಿ ಹೊಡಿಬಡಿ ದಾಂಡಿಗ ಜಾನಿ ಬೈರ್​ಸ್ಟೋವ್ ಕಣಕ್ಕಿಳಿಯಲಿದ್ದು, ಆರನೇ ಸ್ಥಾನದಲ್ಲಿ ಬೆನ್ ಸ್ಟೋಕ್ಸ್ ಆಡಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ಬೆನ್ ಫೋಕ್ಸ್ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರಲಿದ್ದಾರೆ. ಅದರಂತೆ ಇಂಗ್ಲೆಂಡ್ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

  • 1. ಝಾಕ್ ಕ್ರಾಲಿ
  • 2. ಬೆನ್ ಡಕೆಟ್
  • 3. ಒಲಿ ಪೋಪ್
  • 4. ಜೋ ರೂಟ್
  • 5. ಜಾನಿ ಬೈರ್‌ಸ್ಟೋವ್
  • 6. ಬೆನ್ ಸ್ಟೋಕ್ಸ್ (ನಾಯಕ)
  • 7. ಬೆನ್ ಫೋಕ್ಸ್ (ವಿಕೆಟ್ ಕೀಪರ್)
  • 8. ರೆಹಾನ್ ಅಹ್ಮದ್
  • 9. ಟಾಮ್ ಹಾರ್ಟ್ಲಿ
  • 10. ಮಾರ್ಕ್ ವುಡ್
  • 11. ಜ್ಯಾಕ್ ಲೀಚ್

ಇದನ್ನೂ ಓದಿ: Virat Kohli: ಅದ್ಭುತ ಫೀಲ್ಡಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ ವಿರಾಟ್ ಕೊಹ್ಲಿ

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

Published On - 2:29 pm, Wed, 24 January 24

Follow Us
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ