IND vs ENG: 4ನೇ ಟೆಸ್ಟ್​ಗೆ ಇಂಗ್ಲೆಂಡ್ ತಂಡದಲ್ಲಿ 2 ಬದಲಾವಣೆ: ಇಲ್ಲಿದೆ ಪ್ಲೇಯಿಂಗ್ 11

India vs England 4th Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಮೂರು ಪಂದ್ಯಗಳು ಮುಗಿದಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ. ಇದೀಗ ಉಭಯ ತಂಡಗಳು ಫೆಬ್ರವರಿ 23 ರಿಂದ ಶುರುವಾಗಲಿರುವ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದೆ.

IND vs ENG: 4ನೇ ಟೆಸ್ಟ್​ಗೆ ಇಂಗ್ಲೆಂಡ್ ತಂಡದಲ್ಲಿ 2 ಬದಲಾವಣೆ: ಇಲ್ಲಿದೆ ಪ್ಲೇಯಿಂಗ್ 11
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 22, 2024 | 1:57 PM

ರಾಂಚಿಯಲ್ಲಿ ನಡೆಯಲಿರುವ ಭಾರತದ (India) ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ (England) ಪ್ಲೇಯಿಂಗ್ ಇಲೆವೆನ್​ ಅನ್ನು ಪ್ರಕಟಿಸಲಾಗಿದೆ. ಈ ಬಾರಿ ತಂಡದಲ್ಲಿ 2 ಬದಲಾವಣೆ ಮಾಡಿಕೊಂಡಿದೆ. 3ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವೇಗಿ ಮಾರ್ಕ್​ ವುಡ್ ಅವರನ್ನು ಈ ಮ್ಯಾಚ್​ನಿಂದ ಕೈ ಬಿಡಲಾಗಿದೆ. ಮಾರ್ಕ್​ ವುಡ್ ಸ್ಥಾನದಲ್ಲಿ ವೇಗದ ಬೌಲರ್ ಒಲೀ ರಾಬಿನ್ಸನ್ (Ollie Robinson)​ ಅವಕಾಶ ಪಡೆದಿದ್ದಾರೆ. ಹಾಗೆಯೇ ಸ್ಪಿನ್ನರ್ ರೆಹಾನ್ ಅಹ್ಮದ್ ಹೊರಗುಳಿದಿದ್ದು, ಅವರ ಬದಲಿಗೆ ಶೊಯೆಬ್ ಬಶೀರ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಎರಡು ಬದಲಾವಣೆಯ ಹೊರತಾಗಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಲೈನಪ್​ನಲ್ಲಿ ಯಾವುದೇ ಚೇಂಜ್ ಮಾಡಲಾಗಿಲ್ಲ. ಅದರಂತೆ ಆರಂಭಿಕನಾಗಿ ಬೆನ್ ಡಕೆಟ್ ಹಾಗೂ ಝಾಕ್ ಕ್ರಾಲಿ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಒಲೀ ಪೋಪ್ ಹಾಗೂ 4ನೇ ಕ್ರಮಾಂಕದಲ್ಲಿ ಜೋ ರೂಟ್ ಆಡಲಿದ್ದಾರೆ.

ಇನ್ನು ಕಳೆದ ಮೂರು ಪಂದ್ಯಗಳಲ್ಲಿ ವಿಫಲರಾಗಿದ್ದ ಜಾನಿ ಬೈರ್​ಸ್ಟೋವ್ ಅವರಿಗೆ ಈ ಬಾರಿ ಕೂಡ ಅವಕಾಶ ನೀಡಲಾಗಿದೆ. ಹಾಗೆಯೇ ನಾಯಕ ಬೆನ್ ಸ್ಟೋಕ್ಸ್​ ಹಾಗೂ ವಿಕೆಟ್ ಕೀಪರ್ ಬೆನ್ ಪೋಕ್ಸ್​ ಕ್ರಮವಾಗಿ 6ನೇ ಮತ್ತು 7ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

ಹಾಗೆಯೇ ಹಿರಿಯ ವೇಗದ ಬೌಲರ್ ಜೇಮ್ಸ್ ಅ್ಯಂಡರ್ಸನ್ ಈ ಪಂದ್ಯದಲ್ಲೂ ಕಣಕ್ಕಿಳಿಯಲಿದ್ದಾರೆ. ಇವರ ಜೊತೆಗೆ ಸ್ಪಿನ್ನರ್ ಟಾಮ್ ಹ್ಯಾರ್ಟ್ಲಿ ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಇಂಗ್ಲೆಂಡ್ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

  • ಝಾಕ್ ಕ್ರಾಲಿ
  • ಬೆನ್ ಡಕೆಟ್
  • ಒಲೀ ಪೋಪ್
  • ಜೋ ರೂಟ್
  • ಜಾನಿ ಬೈರ್‌ಸ್ಟೋವ್
  • ಬೆನ್ ಸ್ಟೋಕ್ಸ್ (ನಾಯಕ)
  • ಬೆನ್ ಫೋಕ್ಸ್ (ವಿಕೆಟ್ ಕೀಪರ್)
  • ಟಾಮ್ ಹಾರ್ಟ್ಲಿ
  • ಒಲೀ ರಾಬಿನ್ಸನ್
  • ಜೇಮ್ಸ್ ಅ್ಯಂಡರ್ಸನ್
  • ಶೋಯೆಬ್ ಬಶೀರ್

ಇದನ್ನೂ ಓದಿ: ವಿರಾಟ್ ಕೊಹ್ಲಿ vs ಬಾಬರ್ ಆಝಂ, ಯಾರು ಬೆಸ್ಟ್? ಪಾಕ್ ಆಟಗಾರರ ಉತ್ತರ ಹೀಗಿದೆ

ಇಂಗ್ಲೆಂಡ್ ಟೆಸ್ಟ್​ ತಂಡ

ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಒಲೀ ಪೋಪ್, ಒಲೀ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್