ರಾಂಚಿಯಲ್ಲಿ ನಡೆಯಲಿರುವ ಭಾರತದ (India) ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ (England) ಪ್ಲೇಯಿಂಗ್ ಇಲೆವೆನ್ ಅನ್ನು ಪ್ರಕಟಿಸಲಾಗಿದೆ. ಈ ಬಾರಿ ತಂಡದಲ್ಲಿ 2 ಬದಲಾವಣೆ ಮಾಡಿಕೊಂಡಿದೆ. 3ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವೇಗಿ ಮಾರ್ಕ್ ವುಡ್ ಅವರನ್ನು ಈ ಮ್ಯಾಚ್ನಿಂದ ಕೈ ಬಿಡಲಾಗಿದೆ. ಮಾರ್ಕ್ ವುಡ್ ಸ್ಥಾನದಲ್ಲಿ ವೇಗದ ಬೌಲರ್ ಒಲೀ ರಾಬಿನ್ಸನ್ (Ollie Robinson) ಅವಕಾಶ ಪಡೆದಿದ್ದಾರೆ. ಹಾಗೆಯೇ ಸ್ಪಿನ್ನರ್ ರೆಹಾನ್ ಅಹ್ಮದ್ ಹೊರಗುಳಿದಿದ್ದು, ಅವರ ಬದಲಿಗೆ ಶೊಯೆಬ್ ಬಶೀರ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಎರಡು ಬದಲಾವಣೆಯ ಹೊರತಾಗಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಲೈನಪ್ನಲ್ಲಿ ಯಾವುದೇ ಚೇಂಜ್ ಮಾಡಲಾಗಿಲ್ಲ. ಅದರಂತೆ ಆರಂಭಿಕನಾಗಿ ಬೆನ್ ಡಕೆಟ್ ಹಾಗೂ ಝಾಕ್ ಕ್ರಾಲಿ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಒಲೀ ಪೋಪ್ ಹಾಗೂ 4ನೇ ಕ್ರಮಾಂಕದಲ್ಲಿ ಜೋ ರೂಟ್ ಆಡಲಿದ್ದಾರೆ.
We have named our XI for the fourth Test in Ranchi! 🏏 👇
🇮🇳 #INDvENG 🏴 #EnglandCricket
— England Cricket (@englandcricket) February 22, 2024
ಇನ್ನು ಕಳೆದ ಮೂರು ಪಂದ್ಯಗಳಲ್ಲಿ ವಿಫಲರಾಗಿದ್ದ ಜಾನಿ ಬೈರ್‌ಸ್ಟೋವ್ ಅವರಿಗೆ ಈ ಬಾರಿ ಕೂಡ ಅವಕಾಶ ನೀಡಲಾಗಿದೆ. ಹಾಗೆಯೇ ನಾಯಕ ಬೆನ್ ಸ್ಟೋಕ್ಸ್ ಹಾಗೂ ವಿಕೆಟ್ ಕೀಪರ್ ಬೆನ್ ಪೋಕ್ಸ್ ಕ್ರಮವಾಗಿ 6ನೇ ಮತ್ತು 7ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.
ಹಾಗೆಯೇ ಹಿರಿಯ ವೇಗದ ಬೌಲರ್ ಜೇಮ್ಸ್ ಅ್ಯಂಡರ್ಸನ್ ಈ ಪಂದ್ಯದಲ್ಲೂ ಕಣಕ್ಕಿಳಿಯಲಿದ್ದಾರೆ. ಇವರ ಜೊತೆಗೆ ಸ್ಪಿನ್ನರ್ ಟಾಮ್ ಹ್ಯಾರ್ಟ್ಲಿ ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಇಂಗ್ಲೆಂಡ್ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.
ಇದನ್ನೂ ಓದಿ: ವಿರಾಟ್ ಕೊಹ್ಲಿ vs ಬಾಬರ್ ಆಝಂ, ಯಾರು ಬೆಸ್ಟ್? ಪಾಕ್ ಆಟಗಾರರ ಉತ್ತರ ಹೀಗಿದೆ
ಇಂಗ್ಲೆಂಡ್ ಟೆಸ್ಟ್ ತಂಡ
ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಒಲೀ ಪೋಪ್, ಒಲೀ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.