ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಇಂದು (ಜ.22) ನಡೆಯಲಿರುವ ಭಾರತದ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಇಂಗ್ಲೆಂಡ್ ಆಡುವ ಬಳಗವನ್ನು ಹೆಸರಿಸಿದೆ. ಜೋಸ್ ಬಟ್ಲರ್ ನೇತೃತ್ವದ ಈ ಪ್ಲೇಯಿಂಗ್ ಇಲೆವೆನ್ನಲ್ಲಿ ಇಬ್ಬರು ಆಲ್ರೌಂಡರ್ಗಳಿಗೆ ಸ್ಥಾನ ಕಲ್ಪಿಸಲಾಗಿದೆ. ಇನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವುದು ಫಿಲ್ ಸಾಲ್ಟ್ ಹಾಗೂ ಬೆನ್ ಡಕೆಟ್.
ನಾಯಕ ಜೋಸ್ ಬಟ್ಲರ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಹ್ಯಾರಿ ಬ್ರೂಕ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದು, ಐದನೇ ಕ್ರಮಾಂಕದಲ್ಲಿ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಯುವ ಆಲ್ರೌಂಡರ್ ಜೇಕಬ್ ಬೆಥೆಲ್ ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.
ಬೌಲರ್ಗಳ ವಿಭಾಗದಲ್ಲಿ ವೇಗಿಗಳಾಗಿ ಜೇಮಿ ಓವರ್‌ಟನ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್ ಮತ್ತು ಮಾರ್ಕ್ ವುಡ್ಗೆ ಸ್ಥಾನ ಕಲ್ಪಿಸಲಾಗಿದೆ. ಹಾಗೆಯೇ ಸ್ಪಿನ್ನರ್ ಆಗಿ ಆದಿಲ್ ರಶೀದ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯ ಎಲ್ಲಾ ಮ್ಯಾಚ್ಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಇದಕ್ಕೂ ಮುನ್ನ ರಾತ್ರಿ 6.30 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಓದಿ: ಸಿಕ್ಸ್ಗಳ ಸುರಿಮಳೆ… ಟಿ20 ಕ್ರಿಕೆಟ್ನಲ್ಲಿ ಕೀರನ್ ಪೊಲಾರ್ಡ್ ವಿಶ್ವ ದಾಖಲೆ
ಈ ಸರಣಿಯ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ನಲ್ಲಿ ನೇರ ಪ್ರಸಾರವಾಗಲಿದೆ. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ಆ್ಯಪ್ ಹಾಗೂ ವೆಬ್ಸೈಟ್ಗಳಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.