AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs ENG: ಸೆಮಿಫೈನಲ್​ಗೇರಿದ ಇಂಗ್ಲೆಂಡ್; ಟೂರ್ನಿಯಿಂದ ಹೊರಬಿದ್ದ ಪಾಕಿಸ್ತಾನ

T20 World Cup 2026 Super 8: ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಪಾಕಿಸ್ತಾನವನ್ನು 3 ವಿಕೆಟ್‌ಗಳಿಂದ ಸೋಲಿಸಿ ಸೂಪರ್ 8 ರಲ್ಲಿ ಸತತ ಎರಡನೇ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತು. 165 ರನ್ ಗಳಿಸಿದ್ದ ಪಾಕಿಸ್ತಾನ ಸೋತು ಟೂರ್ನಿಯಿಂದ ಭಾಗಶಃ ಹೊರಬಿದ್ದಿದೆ. ಇಂಗ್ಲೆಂಡ್ ಮೊದಲ ತಂಡವಾಗಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಪಾಕಿಸ್ತಾನಕ್ಕೆ ಪವಾಡ ಬೇಕಾಗಿದ್ದು, ಅದು ಅಸಾಧ್ಯ.

PAK vs ENG: ಸೆಮಿಫೈನಲ್​ಗೇರಿದ ಇಂಗ್ಲೆಂಡ್; ಟೂರ್ನಿಯಿಂದ ಹೊರಬಿದ್ದ ಪಾಕಿಸ್ತಾನ
Pak Vs Eng
ಪೃಥ್ವಿಶಂಕರ
|

Updated on:Feb 24, 2026 | 10:52 PM

Share

ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ಹಾಗೂ ಪಾಕಿಸ್ತಾನ (England vs Pakistan) ನಡುವಿನ ಸೂಪರ್ 8 ಸುತ್ತಿನ ಪಂದ್ಯವನ್ನು 2 ವಿಕೆಟ್​ಗಳಿಂದ ಗೆದ್ದುಕೊಂಡ ಇಂಗ್ಲೆಂಡ್ ಈ ಸುತ್ತಿನಲ್ಲಿ ಸತತ ಎರಡನೇ ಗೆಲುವು ದಾಖಲಿಸುವ ಮೂಲಕ ಟೂರ್ನಿಯ ಮೊದಲ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿದೆ. ಇತ್ತ ಇಂಗ್ಲೆಂಡ್ ವಿರುದ್ಧ ಸೋತ ಪಾಕಿಸ್ತಾನ ಟೂರ್ನಿಯಿಂದ ಭಾಗಶಃ ಹೊರಬಿದ್ದಿದೆ. ಪ್ರಸ್ತುತ ಖಾತೆಯಲ್ಲಿ ಏಕೈಕ ಅಂಕ ಹೊಂದಿರುವ ಪಾಕಿಸ್ತಾನ ಸೆಮಿಫೈನಲ್​ಗೇರಬೇಕೆಂದರೆ ಪವಾಡವೇ ನಡೆಯಬೇಕಿದೆ. ಆ ಪವಾಡ ನಡೆಯುವುದು ಅಸಾಧ್ಯವಾಗಿರುವುದರಿಂದ ಪಾಕ್ ತಂಡ ಸೂಪರ್ 8 ಸುತ್ತಿನಲ್ಲೇ ತನ್ನ ವಿಶ್ವಕಪ್ (T20 World Cup) ಪ್ರಯಾಣವನ್ನು ಮುಗಿಸಬೇಕಾಗಿದೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ 165 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 20ನೇ ಓವರ್​ನಲ್ಲಿ ಗೆಲುವು ದಾಖಲಿಸಿ ಸೆಮಿಫೈನಲ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿತು.

164 ರನ್ ಕಲೆಹಾಕಿದ ಪಾಕಿಸ್ತಾನ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ಆರಂಭಿಕ ಆಟಗಾರ ಸಾಹಿಬ್‌ಜಾದಾ ಫರ್ಹಾನ್ (45 ಎಸೆತಗಳಲ್ಲಿ 63) ಅರ್ಧಶತಕದೊಂದಿಗೆ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು. ಬಾಬರ್ ಆಝಂ (25) ಮತ್ತು ಫಖರ್ ಜಮಾನ್ (25) ಅಲ್ಪ ಕಾಣಿಕೆ ನೀಡಿದರು. ಉಳಿದ ಬ್ಯಾಟ್ಸ್‌ಮನ್‌ಗಳು ದೊಡ್ಡ ಸ್ಕೋರ್ ಗಳಿಸುವಲ್ಲಿ ವಿಫಲರಾದರು. ಇಂಗ್ಲೆಂಡ್ ಪರ ಲಿಯಾಮ್ ಡಾಸನ್ ಮೂರು ವಿಕೆಟ್ ಪಡೆದರೆ, ಜೋಫ್ರಾ ಆರ್ಚರ್ ಮತ್ತು ಜೇಮಿ ಓವರ್ಟನ್ ತಲಾ ಎರಡು ವಿಕೆಟ್ ಪಡೆದರು.

ಗೆಲುವಿನ ಶತಕ ಬಾರಿಸಿದ ಬ್ರೂಕ್

ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡದ ಆರಂಭ ಅತ್ಯಂತ ಕೆಟ್ಟದಾಗಿತ್ತು. ಶಾಹೀನ್ ಅಫ್ರಿದಿ ಅವರ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಆರಂಭಿಕರಾದ ಫಿಲ್ ಸಾಲ್ಟ್ (0) ಮತ್ತು ಜೋಸ್ ಬಟ್ಲರ್ (2) ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡತು. ಅದಾದ ನಂತರ ಬಂದ ಜಾಕೋಬ್ ಬೆಥೆಲ್ (8) ಮತ್ತು ಟಾಮ್ ಬ್ಯಾಂಟನ್ (2) ಕೂಡ ಬೇಗನೆ ಔಟಾದರು. ಇದರಿಂದಾಗಿ ಇಂಗ್ಲೆಂಡ್ ಬಹುಬೇಗನೇ 4 ವಿಕೆಟ್‌ಗಳನ್ನು ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ತಂಡದ ಇನ್ನಿಂಗ್ಸ್ ನಿಭಾಯಿಸಿದ ನಾಯಕ ಹ್ಯಾರಿ ಬ್ರೂಕ್ ಕೇವಲ 51 ಎಸೆತಗಳಲ್ಲಿ 10 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 100 ರನ್ ಬಾರಿಸಿ ತಂಡವನ್ನು ಸೆಮಿಫೈನಲ್‌ಗೆ ಕೊಂಡೊಯ್ದರು.

T20 World Cup: ತಂಡವನ್ನು ತೊರೆದು ಇದ್ದಕ್ಕಿದ್ದಂತೆ ಮನೆಗೆ ಮರಳಿದ ರಿಂಕು ಸಿಂಗ್

ಪಾಕ್ ಸೆಮೀಸ್ ಕನಸು ಭಗ್ನ

ಈ ಸೋಲಿನೊಂದಿಗೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಬಹುತೇಕ ಮುಗಿದಿದೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯ ರದ್ದಾದ ನಂತರ ಈಗಾಗಲೇ ಒಂದು ಅಂಕ ಹೊಂದಿರುವ ಪಾಕಿಸ್ತಾನ, ಈಗ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರಿ ಗೆಲುವಿನ ಜೊತೆಗೆ ಇತರ ತಂಡಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗುತ್ತದೆ. ಮತ್ತೊಂದೆಡೆ, ಇಂಗ್ಲೆಂಡ್ ಸತತ ಎರಡನೇ ಗೆಲುವು ದಾಖಲಿಸಿ 4 ಅಂಕಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:30 pm, Tue, 24 February 26

Follow Us
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ