AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 4ನೇ ಟೆಸ್ಟ್​ಗೆ ಇಂಗ್ಲೆಂಡ್ ತಂಡ ಪ್ರಕಟ: 36 ವರ್ಷದ ಆಲ್​ರೌಂಡರ್ ಎಂಟ್ರಿ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರು ಪಂದ್ಯಗಳು ಮುಗಿದಿವೆ. ಈ ಮೂರು ಮ್ಯಾಚ್​ಗಳಲ್ಲಿ ಇಂಗ್ಲೆಂಡ್ ತಂಡ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ ಒಂದು ಮ್ಯಾಚ್ ಗೆದ್ದುಕೊಂಡಿದೆ. ಅತ್ತ ಇಂಗ್ಲೆಂಡ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಹೊಂದಿರುವುದರಿಂದ ನಾಲ್ಕನೇ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ.

IND vs ENG: 4ನೇ ಟೆಸ್ಟ್​ಗೆ ಇಂಗ್ಲೆಂಡ್ ತಂಡ ಪ್ರಕಟ: 36 ವರ್ಷದ ಆಲ್​ರೌಂಡರ್ ಎಂಟ್ರಿ
England
ಝಾಹಿರ್ ಯೂಸುಫ್
|

Updated on: Jul 17, 2025 | 7:23 AM

Share

ಭಾರತದ ವಿರುದ್ಧದ ನಾಲ್ಕನೇ ಟೆಸ್ಟ್​ ಪಂದ್ಯಕ್ಕೆ ಇಂಗ್ಲೆಂಡ್ ತಂಡವನ್ನು ಘೋಷಿಸಲಾಗಿದೆ. ಲಾರ್ಡ್ಸ್​ ಟೆಸ್ಟ್​​ನಲ್ಲಿ ಕಣಕ್ಕಿಳಿದಿದ್ದ ಶೊಯೆಬ್ ಬಶೀರ್ ಅವರನ್ನು ಗಾಯದ ಕಾರಣ ತಂಡದಿಂದ ಕೈ ಬಿಡಲಾಗಿದೆ. ಮೂರನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದ ಬಶೀರ್ ಅವರ ಕೈಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದು, ಹೀಗಾಗಿ ಅವರನ್ನು ತಂಡದಿಂದ ಹೊರಗಿಡಲಾಗಿದೆ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಇನ್ನು ಅವರ ಬದಲಿಗೆ 36 ವರ್ಷದ ಸ್ಪಿನ್-ಆಲ್​ರೌಂಡರ್ ಲಿಯಾಮ್ ಡಾಸನ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದೆ ಇಂಗ್ಲೆಂಡ್ ಪರ 3 ಟೆಸ್ಟ್ ಪಂದ್ಯಗಳನ್ನಾಡಿದ್ದ ಲಿಯಾಮ್ ಡಾಸನ್ 5 ಇನಿಂಗ್ಸ್​ಗಳಿಂದ 7 ವಿಕೆಟ್ ಕಬಳಿಸಿದ್ದರು. ಹಾಗೆಯೇ 84 ರನ್ ಕಲೆಹಾಕಿದ್ದರು. ಇದೀಗ ಬರೋಬ್ಬರಿ 8 ವರ್ಷಗಳ ಬಳಿಕ ಮತ್ತೆ ಅವರಿಗೆ ತಂಡದಲ್ಲಿ ಚಾನ್ಸ್ ಲಭಿಸಿದೆ. ಅಂದರೆ ಡಾಸನ್ ಕೊನೆಯ ಬಾರಿ ಇಂಗ್ಲೆಂಡ್ ಪರ ಟೆಸ್ಟ್ ಪಂದ್ಯವಾಡಿದ್ದು 2017 ರಲ್ಲಿ. ಇದೀಗ ನಾಲ್ಕನೇ ಟೆಸ್ಟ್ ಪಂದ್ಯದ ಮೂಲಕ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.

ಲಿಯಾಮ್ ಡಾಸನ್ ಅವರ ಆಯ್ಕೆಯನ್ನು ಹೊರತುಪಡಿಸಿ, ಲಾರ್ಡ್ಸ್ ಟೆಸ್ಟ್ ವೇಳೆ ಕಾಣಿಸಿಕೊಂಡ ಬಳಗವನ್ನೇ ಮ್ಯಾಂಚೆಸ್ಟರ್​ ಟೆಸ್ಟ್​ಗೂ ಮುಂದುವರೆಸಲಾಗಿದೆ. ಹೀಗಾಗಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಲೈನಪ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ ಎನ್ನಬಹುದು.

4ನೇ ಟೆಸ್ಟ್ ಪಂದ್ಯ ಯಾವಾಗ ಶುರು?

ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯವು ಜುಲೈ 23 ರಿಂದ ಶುರುವಾಗಲಿದೆ. ಅಂದರೆ ಮೂರನೇ ಮತ್ತು ನಾಲ್ಕನೇ ಟೆಸ್ಟ್ ನಡುವಣ 8 ದಿನಗಳ ಅಂತರವಿದೆ. ಈ ಎಂಟು ದಿನಗಳ ಬ್ರೇಕ್ ಬಳಿಕ ಉಭಯ ತಂಡಗಳು ಜುಲೈ 23 ರಿಂದ ಮ್ಯಾಚೆಂಸ್ಟರ್​ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ಕಣಕ್ಕಿಳಿಯಲಿದೆ.

ಇಂಗ್ಲೆಂಡ್ ಟೆಸ್ಟ್ ತಂಡ: ಝಾಕ್ ಕ್ರಾಲಿ , ಬೆನ್ ಡಕೆಟ್ , ಒಲೀ ಪೋಪ್ , ಜೋ ರೂಟ್ , ಹ್ಯಾರಿ ಬ್ರೂಕ್ , ಬೆನ್ ಸ್ಟೋಕ್ಸ್ (ನಾಯಕ) , ಜೇಮಿ ಸ್ಮಿತ್ (ವಿಕೆಟ್ ಕೀಪರ್) , ಕ್ರಿಸ್ ವೋಕ್ಸ್ , ಬ್ರೈಡನ್ ಕಾರ್ಸ್ , ಜೋಫ್ರಾ ಆರ್ಚರ್ , ಜೇಮಿ ಓವರ್ಟನ್ , ಜೋಶ್ ಟಂಗ್ , ಸ್ಯಾಮ್ ಜೇಮ್ಸ್ ಕುಕ್ , ಗಸ್ ಅಟ್ಕಿನ್ಸನ್ , ಜೇಕಬ್ ಬೆಥೆಲ್, ಲಿಯಾಮ್ ಡಾಸನ್.

ಇದನ್ನೂ ಓದಿ: ಟೀಮ್ ಇಂಡಿಯಾ ಸೋಲಿಗೆ ರವೀಂದ್ರ ಜಡೇಜಾ ಕಾರಣ..!

ಭಾರತ ಟೆಸ್ಟ್ ತಂಡ: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ಕರುಣ್ ನಾಯರ್ , ಶುಭಮನ್ ಗಿಲ್ (ನಾಯಕ) , ರಿಷಭ್ ಪಂತ್ (ವಿಕೆಟ್ ಕೀಪರ್) , ನಿತೀಶ್ ಕುಮಾರ್ ರೆಡ್ಡಿ , ರವೀಂದ್ರ ಜಡೇಜಾ , ವಾಷಿಂಗ್ಟನ್ ಸುಂದರ್ , ಆಕಾಶ್ ದೀಪ್ , ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ , ಧ್ರುವ ಜುರೆಲ್ , ಸಾಯಿ ಸುದರ್ಶನ್ , ಅರ್ಷದೀಪ್ ಸಿಂಗ್ , ಅಭಿಮನ್ಯು ಈಶ್ವರನ್ , ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!