IND vs ENG: ಭಾರತ ವಿರುದ್ಧದ ಸರಣಿಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ
India vs England: ಈ ಸರಣಿಗಾಗಿ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ವೇಗಿ ಗಸ್ ಅಟ್ಕಿನ್ಸನ್ ಸೇರಿದಂತೆ ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ತಂಡದಲ್ಲಿ ಸ್ಟಾರ್ ಆಟಗಾರರಾದ ಜೇಮ್ಸ್ ಅ್ಯಂಡರ್ಸನ್, ಜಾನಿ ಬೈರ್ಸ್ಟೋವ್, ಜೋ ರೂಟ್, ಝಾಕ್ ಕ್ರಾಲಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡವನ್ನು (England) ಪ್ರಕಟಿಸಲಾಗಿದೆ. 16 ಸದಸ್ಯರ ಈ ಬಳಗವನ್ನು ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ (Ben Stokes) ಮುನ್ನಡೆಸಲಿದ್ದಾರೆ. ಏಕದಿನ ವಿಶ್ವಕಪ್ ವೇಳೆ ಗಾಯದಿಂದ ಬಳಲುತ್ತಿದ್ದ ಸ್ಟೋಕ್ಸ್ ಇತ್ತೀಚೆಗಷ್ಟೇ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಫಿಟ್ನೆಸ್ಗೆ ಮರಳುವ ಹಾದಿಯಲ್ಲಿರುವ ಬೆನ್ ಸ್ಟೋಕ್ಸ್ ಟೀಮ್ ಇಂಡಿಯಾ ವಿರುದ್ಧದ ಪ್ರತಿಷ್ಠಿತ ಸರಣಿಯಲ್ಲಿ ಕಣಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಹೀಗಾಗಿ ಅವರನ್ನೇ ಇಂಗ್ಲೆಂಡ್ ತಂಡದ ನಾಯಕರನ್ನಾಗಿ ಮುಂದುವರೆಸಲಾಗಿದೆ.
ಇನ್ನು ಈ ಸರಣಿಗಾಗಿ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ವೇಗಿ ಗಸ್ ಅಟ್ಕಿನ್ಸನ್ ಸೇರಿದಂತೆ ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ತಂಡದಲ್ಲಿ ಸ್ಟಾರ್ ಆಟಗಾರರಾದ ಜೇಮ್ಸ್ ಅ್ಯಂಡರ್ಸನ್, ಜಾನಿ ಬೈರ್ಸ್ಟೋವ್, ಜೋ ರೂಟ್, ಝಾಕ್ ಕ್ರಾಲಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಇಂಗ್ಲೆಂಡ್ ಟೆಸ್ಟ್ ತಂಡ ಈ ಕೆಳಗಿನಂತಿದೆ.
ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.
ಭಾರತ-ಇಂಗ್ಲೆಂಡ್ ಸರಣಿ ಯಾವಾಗ ಶುರು?
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ.
ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್ಆರ್ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.
ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಇದನ್ನೂ ಓದಿ: RCB ತಂಡದ ಅತ್ಯಂತ ಕೆಟ್ಟ ಆಯ್ಕೆಗಳಾವುವು ಗೊತ್ತಾ?
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:
- ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
- ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
- ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್ಕೋಟ್)
- ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
- ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)