AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ಗಾಗಿ ನಿವೃತ್ತಿ ಹಿಂಪಡೆಯುವಂತೆ ಬೆನ್​ ಸ್ಟೋಕ್ಸ್​ಗೆ ಮನವಿ..!

ODI World Cup 2023: ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಅಂದರೆ 2019 ರ ಏಕದಿನ ವಿಶ್ವಕಪ್​ನಲ್ಲಿ ಫೈನಲ್ ಆಡಿದ್ದ ತಂಡಗಳು ಈ ಬಾರಿ ಮೊದಲ ಪಂದ್ಯವಾಡಲಿದೆ.

ಏಕದಿನ ವಿಶ್ವಕಪ್​ಗಾಗಿ ನಿವೃತ್ತಿ ಹಿಂಪಡೆಯುವಂತೆ ಬೆನ್​ ಸ್ಟೋಕ್ಸ್​ಗೆ ಮನವಿ..!
Ben Stokes
TV9 Web
| Edited By: |

Updated on: Aug 13, 2023 | 2:44 PM

Share

2019ರ ಏಕದಿನ ವಿಶ್ವಕಪ್​ ಹೀರೋ, ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಕಳೆದ ವರ್ಷ ಏಕದಿನ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದರು. ಇದೀಗ ಒಂದು ವರ್ಷದ ಬಳಿಕ ಸ್ಟೋಕ್ಸ್​ ಅವರನ್ನು ಮತ್ತೆ ಏಕದಿನ ಕ್ರಿಕೆಟ್​ಗೆ ಕರೆತರುವ ಪ್ರಯತ್ನಕ್ಕೆ ಕೈ ಹಾಕಿದೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​. ಇದಕ್ಕೆ ಮುಖ್ಯ ಕಾರಣ ಮುಂಬರುವ ಏಕದಿನ ವಿಶ್ವಕಪ್.

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ ಆಡುವಂತೆ ಬೆನ್ ಸ್ಟೋಕ್ಸ್​ ಅವರಿಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಮನವಿ ಸಲ್ಲಿಸಿದೆ.  ಆದರೆ ಈ ಮನವಿಗೆ ಸ್ಟೋಕ್ಸ್​ ಹೇಗೆ ಪ್ರತಿಕ್ರಿಯಿಸಲಿದ್ದಾರೆ ಎಂಬುದು ಪ್ರಶ್ನೆ. ಏಕೆಂದರೆ 2022 ರಲ್ಲಿ ಸ್ಟೋಕ್ಸ್ ಏಕದಿನ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ್ದರು.

ಮೂರು ಮಾದರಿ ಕ್ರಿಕೆಟ್​ನಲ್ಲಿ ಆಡುವುದು ತ್ರಾಸದಾಯಕ. ಒತ್ತಡವನ್ನು ಕಡಿಮೆಗೊಳಿಸಲು ಒಂದು ಮಾದರಿಯ ಕ್ರಿಕೆಟ್​ಗೆ ದೂರ ಉಳಿಯಲು ನಿರ್ಧರಿಸಿದ್ದೇನೆ. ಅದರಂತೆ ಒನ್​ ಡೇ ಕ್ರಿಕೆಟ್​ಗೆ ವಿದಾಯ ಹೇಳುವುದಾಗಿ ಸ್ಟೋಕ್ಸ್​ ತಿಳಿಸಿದ್ದರು. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು.

ಇದೀಗ ಭಾರತದಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್​ಗೆ ಅನುಭವಿ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಅವರ ಅಗತ್ಯತೆ ಇದೆ ಎಂದು ಇಂಗ್ಲೆಂಡ್ ಕೋಚ್ ಮ್ಯಾಥ್ಯೂ ಮೋಟ್ ಅಭಿಪ್ರಾಯಪಟ್ಟಿದ್ದಾರೆ. ಇದರ ಬೆನ್ನಲ್ಲೇ ಸ್ಟಾರ್ ಆಲ್​ರೌಂಡರ್​ಗೆ ನಿವೃತ್ತಿ ಹಿಂಪಡೆಯುವಂತೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಮನವಿ ಮಾಡಿದೆ ಎಂದು ವರದಿಯಾಗಿದೆ. ಅದರಂತೆ ಏಕದಿನ ವಿಶ್ವಕಪ್​ಗಾಗಿ ಬೆನ್ ಸ್ಟೋಕ್ಸ್​ ನಿವೃತ್ತಿ ಹಿಂಪಡೆಯುತ್ತಾರಾ ಕಾದು ನೋಡಬೇಕಿದೆ.

ಮೊಯೀನ್ ಅಲಿಯನ್ನು ಕಣಕ್ಕಿಳಿಸಿದ ಸ್ಟೋಕ್ಸ್:

ಈ ಬಾರಿಯ ಆ್ಯಶಸ್ ಸರಣಿಯಲ್ಲಿ ಮೊಯೀನ್ ಅಲಿ ಕಣಕ್ಕಿಳಿದಿದ್ದರು. ಆದರೆ ವರ್ಷಗಳ ಹಿಂದೆ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಮೊಯೀನ್ ಅಲಿ ಅವರನ್ನು ಆ್ಯಶಸ್ ಸರಣಿ ಆಡುವಂತೆ ಮನವೊಲಿಸುವಲ್ಲಿ ಬೆನ್ ಸ್ಟೋಕ್ಸ್ ಯಶಸ್ವಿಯಾಗಿದ್ದರು. ಅಲ್ಲದೆ ಆ್ಯಶಸ್ ಸರಣಿ ಬಳಿಕ ಮೊಯೀನ್ ಅಲಿ ಮತ್ತೆ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದ್ದರು.

ಇದೀಗ ಮೊಯೀನ್ ಅಲಿ ಜಾಗದಲ್ಲಿ ಬೆನ್ ಸ್ಟೋಕ್ಸ್ ಇದ್ದಾರೆ. ಇತ್ತ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಹಾಗೂ ಏಕದಿನ ತಂಡದ ನಾಯಕ ಜೋಸ್ ಬಟ್ಲರ್ ಬೆನ್ ಸ್ಟೋಕ್ಸ್ ಅವರ ಮನವೊಲಿಸುವ ಪ್ರಯತ್ನದಲ್ಲಿದ್ದಾರೆ. ಈ ಮಾತುಕತೆ ಯಶಸ್ವಿಯಾದರೆ ಬೆನ್ ಸ್ಟೋಕ್ಸ್ ಏಕದಿನ ವಿಶ್ವಕಪ್​ನಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಇದಾದ ಬಳಿಕ ಮತ್ತೆ ನಿವೃತ್ತಿ ಘೋಷಿಸಬಹುದು.

ಭರ್ಜರಿ ಫಾರ್ಮ್​ನಲ್ಲಿರುವ ಸ್ಟೋಕ್ಸ್:

ಈ ಬಾರಿಯ ಆ್ಯಶಸ್ ಸರಣಿಯಲ್ಲಿ ಬೆನ್ ಸ್ಟೋಕ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅಷ್ಟೇ ಅಲ್ಲದೆ 2022 ರ ಟಿ20 ವಿಶ್ವಕಪ್​​ ಫೈನಲ್​ನಲ್ಲಿ ಅರ್ಧಶತಕ ಸಿಡಿಸುವ ಮೂಲಕ ಇಂಗ್ಲೆಂಡ್ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸಿದ್ದರು. ಹಾಗೆಯೇ 2019 ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದ ಗೆಲುವಿನ ರೂವಾರಿ ಕೂಡ ಬೆನ್ ಸ್ಟೋಕ್ಸ್.

ಈ ಎಲ್ಲಾ ಕಾರಣಗಳಿಂದಾಗಿ ಪ್ರಮುಖ ಟೂರ್ನಿಗಳಲ್ಲಿ ಬೆನ್ ಸ್ಟೋಕ್ಸ್ ಅವರ ಅವಶ್ಯಕತೆ ಇಂಗ್ಲೆಂಡ್ ತಂಡಕ್ಕಿದೆ. ಹೀಗಾಗಿಯೇ ಸ್ಟೋಕ್ಸ್ ಅವರನ್ನು ತಂಡಕ್ಕೆ ಮರಳಿ ಕರೆತರುವ ಪ್ರಯತ್ನ ಕೈ ಹಾಕಲಾಗಿದೆ. ಈ ಪ್ರಯತ್ನ ಯಶಸ್ವಿಯಾದರೆ ಭಾರತದ ಪಿಚ್​ನಲ್ಲಿ ಇಂಗ್ಲೆಂಡ್ ತಂಡ ಮತ್ತಷ್ಟು ಬಲಿಷ್ಠವಾಗುವುದರಲ್ಲಿ ಅನುಮಾನವೇ ಇಲ್ಲ.

ಇದನ್ನೂ ಓದಿ: ಟೀಮ್ ಇಂಡಿಯಾ ಪಾಲಿಗೆ ಶ್ರೇಯಸ್ ಅಯ್ಯರ್ ಅನಿವಾರ್ಯ..!

ಏಕದಿನ ವಿಶ್ವಕಪ್​ 2023:

ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಅಂದರೆ 2019 ರ ಏಕದಿನ ವಿಶ್ವಕಪ್​ನಲ್ಲಿ ಫೈನಲ್ ಆಡಿದ್ದ ತಂಡಗಳು ಈ ಬಾರಿ ಮೊದಲ ಪಂದ್ಯವಾಡಲಿದೆ. ಇನ್ನು ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

Follow Us
Web contact
Web contact

TV9 Kannada

Read More
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ